• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

|

ಬೆಂಗಳೂರು, ಜುಲೈ 08: ಸರ್ಕಾರ ಬಹುಮತ ಕಳೆದುಕೊಂಡಿರುವ ಕಾರಣ ಕೂಡಲೇ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಿ ಕೆಳಗೆ ಇಳಿಯಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಸರ್ಕಾರ ತನ್ನ ಬಹುಮತ ಕಳೆದುಕೊಂಡಿದೆ, ಸಿಎಂ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಕುಮಾರಸ್ವಾಮಿ ಅವರಿಗೆ ಇಲ್ಲ, ಈ ಕೂಡಲೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದರು.

ರಾಜಕೀಯ ಬೆಳವಣಿಗೆ ಬಗ್ಗೆ ಸಿಎಂ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ಪ್ರಮಾಣ ವಚನಕ್ಕೆ ದಿನಾಂಕ ನಿಗದಿ ಮಾಡುವುದಾಗಲಿ, ಮತ್ತೊಂದಾಗಲಿ ಮಾಡಿಲ್ಲ, ಮಾಡುವುದೂ ಇಲ್ಲ, ಎಲ್ಲವೂ ಅದಾಗುವ ಕಾಲಕ್ಕೆ ತಾನಾಗಿಯೇ ಆಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ಇಂದು ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ರಾಜ್ಯ ರಾಜಕಾರಣದ ಬಿರುಸಿನ ಚರ್ಚೆ ನಡೆದಿದ್ದು, ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಸೂಚಿಸಲಾಗಿದೆ.

ಕರ್ನಾಟಕದಲ್ಲಿ ರಾಜಕೀಯ ಬೃಹನ್ನಾಟಕ, ಯಡಿಯೂರಪ್ಪ ನಡೆ ಏನು?

ನಾಳೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ.

English summary
Karnataka BJP planning to do protest demanding CM Kumaraswamy resignation. Yeddyurappa said, the government lost its majority, CM Kumaraswamy should resign now.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X