ಜು.19 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿರುವ ಬಿಜೆಪಿ

ಬೆಂಗಳೂರು, ಜುಲೈ 18: ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಹಾಗೂ ಮಂಗಳೂರಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹಂತಕರನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿ ಜುಲೈ 19ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರ್ನಾಟಕ ಬಿಜೆಪಿ ನಿರ್ಧರಿಸಿದೆ.

ಪಕ್ಷದ ಎಲ್ಲ ಜಿಲ್ಲಾ ಘಟಕಗಳೂ ಪ್ರತಿಭಟನೆ ನಡೆಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸೂಚನೆ ನೀಡಿದ್ದಾರೆ.

Karnataka BJP will Protest against Congress government on July 19th

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮ ಮತ್ತು ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಹೊರಟಿದ್ದ ಡಿಐಜಿ(ಕಾರಾಗೃಹ) ರೂಪಾ ಅವರಿಗೆ ವರ್ಗಾವಣೆ ಶಿಕ್ಷೆ ನೀಡಿದ ಸರ್ಕಾರದ ನಿರ್ಧಾರದ ಕುರಿತು ಜುಲೈ 18 ರಂದು ಸಂಸತ್ ಎದುರು ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು, ರಾಜ್ಯದಲ್ಲೂ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಕಾರಣರಾದವರನ್ನು ಬಂಧಿಸುವಲ್ಲಿ ವಿಳಂಬಧೋರಣೆ ತೋರುತ್ತಿರುವ ರಾಜ್ಯ ಸರ್ಕಾರದ ನಡೆಯ ವಿರುದ್ಧವೂ ಬಿಜೆಪಿ ನಾಯಕರು ದನಿ ಎತ್ತಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+