ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

SSLC ಫಸ್ಟ್ ಕ್ಲಾಸ್ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ಬಹುಮಾನ

|
Google Oneindia Kannada News

ಬೆಂಗಳೂರು, ಮಾರ್ಚ್.05: ಕರ್ನಾಟಕ ರಾಜ್ಯದ 2020-21ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಶೈಕ್ಷಣಿಕ ವಲಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದ್ದಾರೆ. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪ್ರತಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಎಸ್ ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ಬಹುಮಾನವನ್ನು ಸರ್ಕಾರ ಘೋಷಿಸಿದೆ.

ಎತ್ತಿನಹೊಳೆ, ಮಹದಾಯಿ ಯೋಜನೆಗೆ ಯಡಿಯೂರಪ್ಪ ಬಂಪರ್ ಕೊಡುಗೆ!ಎತ್ತಿನಹೊಳೆ, ಮಹದಾಯಿ ಯೋಜನೆಗೆ ಯಡಿಯೂರಪ್ಪ ಬಂಪರ್ ಕೊಡುಗೆ!

ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಎಂಬುವವರ ಹೆಸರಿನಲ್ಲಿ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರದಿಂದ 60 ಲಕ್ಷ ರೂಪಾಯಿ ಅನುದಾನವನ್ನು ಮೀಸಲು ಇಡಲಾಗಿದೆ.

ತಾಲೂಕಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳಲ್ಲಿ ಆದ್ಯತೆ

ತಾಲೂಕಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳಲ್ಲಿ ಆದ್ಯತೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ನಡೆಸಲಾಗುತ್ತಿರುವ ವಸತಿ ಶಾಲೆಗಳಲ್ಲಿ ಕನಿಷ್ಠ ಶೇ.25ರಷ್ಟು ಸೀಟ್ ಗಳನ್ನು ಆಯಾ ತಾಲೂಕಿನ ವಿದ್ಯಾರ್ಥಿಗಳಿಗೆ ವಿತರಿಸಲು ಅವಕಾಶ ಕಲ್ಪಿಸಿ ಕೊಟ್ಟಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವಾಹನ ಚಲನಾ ತರಬೇತಿಯನ್ನು ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಮೂಲಕ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ವ್ಯವಸ್ಠೆ ಮಾಡಲಾಗಿದೆ.

ನಿರುದ್ಯೋಗಿ ಯುವಕ-ಯುವತಿಯರ ಕೌಶಲ್ಯಾಭಿವೃದ್ಧಿಗೆ ಕ್ರಮ

ನಿರುದ್ಯೋಗಿ ಯುವಕ-ಯುವತಿಯರ ಕೌಶಲ್ಯಾಭಿವೃದ್ಧಿಗೆ ಕ್ರಮ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವಿವಿಧ ಪ್ಯಾರಾ ಮೆಡಿಕಲ್ ಸರ್ಟಿಫಿಕೇಟ್ ಕೋರ್ಸ್ ಗಳ ಜೊತೆಗೆ ಕೌಶಲ್ಯಭಿವೃದ್ಧಿ ತರಬೇತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ ಸಮನ್ವಯದೊಂದಿಗೆ ನೀಡಲಾಗುತ್ತದೆ.

ಸರಕು ಸಾಗಣಿ ವಾಹನಗಳ ಖರೀದಿಗೆ ಸರ್ಕಾರದಿಂದ ಸಾಲ ಸೌಲಭ್ಯ

ಸರಕು ಸಾಗಣಿ ವಾಹನಗಳ ಖರೀದಿಗೆ ಸರ್ಕಾರದಿಂದ ಸಾಲ ಸೌಲಭ್ಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸಣ್ಣ ಸರಕು ಸಾಗಾಣಿಕೆ ವಾಹನಗಳ ಖರೀದಿಗೆ ಸಾಲಸೌಲಭ್ಯವನ್ನು ಒದಗಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರು ನಿರ್ವಹಿಸುತ್ತಿರುವ ಸಹಕಾರಿ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ಪ್ರಸ್ತುತ ನೀಡಲಾಗುತ್ತಿರುವ ಷೇರು ಬಂಡವಾಳವನ್ನು 10 ಲಕ್ಷ ರೂಪಾಯಿಗಳಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

ಸರ್ಕಾರದಿಂದ ಚರ್ಮ ಶಿಲ್ಪಿ ಯೋಜನೆಗೆ ಭರಪೂರ ಅನುದಾನ

ಸರ್ಕಾರದಿಂದ ಚರ್ಮ ಶಿಲ್ಪಿ ಯೋಜನೆಗೆ ಭರಪೂರ ಅನುದಾನ

ಚರ್ಮ ಕುಶಲಕರ್ಮಿಗಳು ಚರ್ಮ ಶಿಲ್ಪಿ ಎಂಬ ಯಾಂತ್ರಾಧಾರಿತ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಡಾ. ಬಾಬು ಜಗಜೀವನ್ ರಾಮ್ ಕೈಗಾರಿಕಾ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷ ರೂಪಾಯಿಗಳಲ್ಲಿ 5 ಲಕ್ಷ ರೂಪಾಯಿ ಸಹಾಯಧನವನ್ನು 250 ಫಲಾನುಭವಿಗಳಿಗೆ ನೀಡಲಾಗುತ್ತದೆ. ಅದಕ್ಕಾಗಿ 2020-21ನೇ ಆರ್ಥಿಕ ಸಾಲಿನಲ್ಲಿ 12.50 ಕೋಟಿ ರೂಪಾಯಿ ಹಣವನ್ನು ಮೀಸಲು ಇಡಲಾಗಿದೆ.

English summary
Karnataka Budget: 1 Lakh Prize Money For SSLC Rank Students. Now More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X