ಬಜೆಟ್ ಅನ್ನು ಸವಾಲಾಗಿ ಸ್ವೀಕರಿಸಿದ್ದೇನೆ: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು, ಜುಲೈ 05: 'ಈ ಬಜೆಟ್ ಅನ್ನು ನಾನು ಸವಾಲಾಗಿ ಸ್ವೀಕರಿಸಿದ್ದೇನೆ' ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸಲಿದ್ದಾರೆ. ಬಜೆಟ್ ಪ್ರತಿಯುಳ್ಳ ಸೂಟ್ ಕೇಸ್ ಹೊತ್ತು ವಿಧಾನಸೌಧಕ್ಕೆ ಬಂದ ಅವರು ವಿಧಾನಸೌಧದೆದುರು ನಿಂತಿದ್ದ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.
'ಹಣಕಾಸು ಸಚಿವನಾಗಿ ನನಗೆ ಇದು ಹೊಸ ಅನುಭವ. ಈ ಅವಕಾಶವನ್ನು ನಾನು ಸವಾಲಾಗಿ ಸ್ವೀಕರಿಸಿ ಉತ್ತಮ ಬಜೆಟ್ ನೀಡುತ್ತೇನೆ' ಎಂದು ಅವರು ಹೇಳಿದರು.

ಸುಮಾರು 2.5 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಇದಾಗಿರಲಿದೆ ಎಂದು ಅಂದಾಜಿಸಲಾಗಿದ್ದು, ರೈತರ ಸಾಲಮನ್ನಾ ಕುರಿತು ಸಾಕಷ್ಟು ನಿರೀಕ್ಷೆ ಇದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರಕ ಬಜೆಟ್ ಮಂಡಿಸುವಂತೆ ಸಲಹೆ ನೀಡಿದ್ದರೂ, ಪೂರ್ಣಪ್ರಮಾಣದ ಬಜೆಟ್ ಮಂಡಿಸಲು ಮುಂದಾಗಿರುವ ಎಚ್ ಡಿ ಕುಮಾರಸ್ವಾಮಿ ಕರ್ನಾಟಕದ ಜನರಿಗೆ ಏನೆಲ್ಲಾ ಕೊಡುಗೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.












Click it and Unblock the Notifications