ಕರ್ನಾಟಕ ಬಜೆಟ್ 2020; ನಮ್ಮ ಮೆಟ್ರೋ ಯೋಜನೆ ವಿಸ್ತರಣೆ

ಬೆಂಗಳೂರು, ಮಾರ್ಚ್ 05 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಹೊಂದಿರುವ ಯಡಿಯೂರಪ್ಪ ನಮ್ಮ ಮೆಟ್ರೋ ಯೋಜನೆಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ.

ಗುರುವಾರ ಯಡಿಯೂರಪ್ಪ 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬೆಂಗಳೂರು ನಗರದಲ್ಲಿ ಸದ್ಯ 2 ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ನಡೆಸುತ್ತಿದೆ. ಈ ವರ್ಷ 12.8 ಕಿ. ಮೀ. ಮಾರ್ಗವನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದರು.

ಮೆಟ್ರೋ ಪ್ರಯಾಣಿಕರಲ್ಲದ ಪಾದಾಚಾರಿಗಳಿಗಾಗಿ 24 ಮೆಟ್ರೋ ನಿಲ್ದಾಣಗಳ ಮೂಲಕ ರಸ್ತೆ ದಾಟುವ ಮೇಲ್ಸೇತುವೆ ಸೌಲಭ್ಯವನ್ನು ಒದಗಿಸಲಾಗುತ್ತದೆ ಎಂದು ಬಜೆಟ್ ಭಾಷಣದಲ್ಲಿ ಯಡಿಯೂರಪ್ಪ ಹೇಳಿದರು.

Karnataka Budget 2020 : What For Namma Metro Project

* ಮೈಸೂರು ರಸ್ತೆ-ಕೆಂಗೇರಿ, ಕನಕಪುರ ರಸ್ತೆ- ಅಂಜನಾಪುರ ಟೌನ್ ಶಿಪ್ ತನಕ 12.8 ಕಿ. ಮೀ. ಉದ್ದದ ಎರಡು ಮಾರ್ಗಗಳ ಕಾಮಗಾರಿ ಪೂರ್ಣಗೊಳಿಸಿ 2020ರಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ.

* ಹೆಬ್ಬಾಳ-ಜೆ. ಪಿ. ನಗರ 'ಹೊರ ವರ್ತುಲ ರಸ್ತೆ-ಪಶ್ಚಿಮ ಮೆಟ್ರೋ' ಒಟ್ಟು 44 ಕಿ. ಮೀ. ಉದ್ದದ ಮೆಟ್ರೋ ರೈಲು ಮಾರ್ಗಗಳಿಗೆ ವಿಸ್ತ್ರೃತ ಯೋಜನಾ ವರದಿಯನ್ನು ಸಿದ್ಧಪಡಿಸಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

* ಸಮೂಹ ಸಾರಿಗೆಯನ್ನು ಉತ್ತೇಜಿಸಲು ಹಾಗೂ ಮೆಟ್ರೋ ಪ್ರಯಾಣಿಕರಿಗೆ ಸಮರ್ಪಕ ಮೆಟ್ರೋ ಫೀಡರ್ ಸಾರಿಗೆ ಸೌಲಭ್ಯವನ್ನು ಒದಗಿಸಲು ಸ್ಮಾರ್ಟ್ ಸಿಟಿ ಯೋಜನೆಯಡಿ 90 ಎಲೆಕ್ಟ್ರಿಕ್ ಬಸ್ ಖರೀದಿಸಲು ಕ್ರಮ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+