ಕರ್ನಾಟಕ ಬಜೆಟ್ 2021: ಬೆಂಗಳೂರಿಗೆ ಸಿಕ್ಕಿದ್ದೇನು?
ಬೆಂಗಳೂರು, ಮಾರ್ಚ್ 08:ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಕರ್ನಾಟಕ ಬಜೆಟ್ 2021-22 ಮಂಡನೆ ಮಾಡಿದ್ದು, ಬೆಂಗಳೂರಿಗೆ ಸಾಕಷ್ಟು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಲಾಕ್ ಡೌನ್ ತೆರವು ಮಾಡಿದ ಬಳಿಕ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಆದರೆ, ರಾಜಸ್ವ ಸಂಗ್ರಹದಲ್ಲಿ ನಿರೀಕ್ಷಿತ ಗುರಿ ತಲುಪಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.
Karnataka Budget 2021 Live Updates; ಕರ್ನಾಟಕ ಬಜೆಟ್ 2021 ಕ್ಷಣ-ಕ್ಷಣದ ಮಾಹಿತಿ
ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸುಮಾರು 5,372 ಕೋಟಿ ರೂ. ವೆಚ್ಚವನ್ನು ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
#KaranatakaBudget2021: ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳೆಯರಿಗಾಗಿ ಬಜೆಟ್ ನಲ್ಲಿ ಭರ್ಜರಿ ಗಿಫ್ಟ್ | Oneindia Kannada
- ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308 ಎಂಎಲ್ಡಿ ನೀರು ತುಂಬಿಸುವ 500 ಕೋಟಿ ರೂ. ಯೋಜನೆ ಅನುಷ್ಠಾನ.
- ಬೆಂಗಳೂರು ನಗರ ಅಭಿವೃದ್ಧಿಗೆ 7795 ಕೋಟಿ ರೂ ಮೀಸಲು
- ಬೆಂಗಳೂರಿನಲ್ಲಿ ನಿರ್ಭಯಾ ಯೋಜನೆಯಲ್ಲಿ ನಗರಾದ್ಯಂತ 7,500 ಸಿಸಿ ಕ್ಯಾಮರಾಗಳ ಅಳವಡಿಕೆ.
- ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ದರದ ಬಸ್ ಪಾಸ್. 'ವನಿತಾ ಸಂಗಾತಿ' ಬಸ್ ಪಾಸ್ ಹೆಸರಿನಲ್ಲಿ ಈ ಯೋಜನೆ ಜಾರಿ.
- ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಕರ್ನಾಟಕ ಸಂಸ್ಕೃತಿ ಕೇಂದ್ರ ಸ್ಥಾಪನೆ. ಬೈಯಪ್ಪನಹಳ್ಳಿ ವೃಕ್ಷೋದ್ಯಾನ ಆರಂಭ, ಬೆಂಗಳೂರು ನಗರದಲ್ಲಿ 67 ಕಿ. ಮೀ. ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ.
- ರಾಜ್ಯದಲ್ಲಿ ಹೊಸದಾಗಿ 52 ಬಸ್ ನಿಲ್ದಾಣಗಳ ಸ್ಥಾಪನೆ. ಉಪ ನಗರ ರೈಲು ಯೋಜನೆಗೆ 15,767 ಕೋಟಿ ರೂ. ಅನುದಾನ.
- ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿ ರೇಷ್ಮೆ ಇಲಾಖೆಯ ಎಲ್ಲಾ ಕಚೇರಿ ಒಂದೇ ಕಡೆ ಇರುವಂತೆ ರೇಷ್ಮೆ ಭವನ ಸ್ಥಾಪನೆ.
- ಬೆಂಗಳೂರು ಉತ್ತರ ಭಾಗದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ.
- 45 ಲಕ್ಷ ರೂ. ತನಕ ಫ್ಲ್ಯಾಟ್ಗಳನ್ನು ಖರೀದಿ ಮಾಡುವಾಗ ಮುದ್ರಾಂಕ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
- ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಯೋಗದೊಂದಿಗೆ 450 ಕೋಟಿ ವೆಚ್ಚದಲ್ಲಿ ಕೆಸಿ ವ್ಯಾಲಿ ಆವರಣದ 248 ಎಂಎಲ್ಡಿ ಸಾಮರ್ಥ್ಯದ ಎಸ್ಟಿಪಿ ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ಕ್ರಮ.
- ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ ಕ್ರಮ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶ.
- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳಲ್ಲಿ ಆಟೊಮೆಟಿಕ್ ಫೇರ್ ಕಲೆಕ್ಷನ್ ಯೋಜನೆ ಅನುಷ್ಠಾನ.
- ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮರ್ಥ್ಯದ ಉಪಕೇಂದ್ರ.
- ಬಿಬಿಎಂಪಿಯ 57 ವಾರ್ಡ್ಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ.
- 33 ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿ ಶಾಲೆಗಳ ನವೀಕರಣ ಹಾಗೂ ಪುನರ್ ನಿರ್ಮಾಣ