ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಜೆಟ್ - 2022: ಬೆಂಗಳೂರಿಗೆ ಸಿಕ್ಕಿದ್ದೇನು? ಹೈಲೆಟ್ಸ್

|
Google Oneindia Kannada News

ಬೆಂಗಳೂರು, ಮಾರ್ಚ್ 4: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ರಾಜಕೀಯ ಜೀವನದ ಚೊಚ್ಚಲ ಮುಂಗಡ ಪತ್ರವನ್ನು ಮಂಡಿಸಿದ್ದಾರೆ. ರಾಹುಕಾಲ ಕಳೆದ ನಂತರ ಮಧ್ಯಾಹ್ನ 12.30ಕ್ಕೆ ಬಜೆಟ್ ಮಂಡನೆ ಆರಂಭವಾಗಿದೆ.

ಬಿಬಿಎಂಪಿ ಚುನಾವಣೆಯ ನಿರೀಕ್ಷೆಯಲ್ಲಿ ಇರುವುದರಿಂದ, ಬೆಂಗಳೂರು ನಗರಕ್ಕೆ ಭರಪೂರ ಘೋಷಣೆಯನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ದಿಯ ಬಗ್ಗೆ ಪ್ರಸ್ತಾವಿಸಿರುವ ಬೊಮ್ಮಾಯಿ, ಬೆಂಗಳೂರಿಗೆ ನೀಡಿದ್ದೇನು. ಪ್ರಮುಖಾಂಶ ಇಂತಿದೆ:

Karnataka Budget 2022 Live Updates: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಆರಂಭKarnataka Budget 2022 Live Updates: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಆರಂಭ

> ಬೆಂಗಳೂರು ಮೂಲಭೂತ ಸೌಕರ್ಯಕ್ಕೆ 6 ಸಾವಿರ ಕೋಟಿ ವೆಚ್ಚದಲ್ಲಿ ಅಮೃತ್ ನಗರೋತ್ಥಾನದಡಿ ರಸ್ತೆ ಅಭಿವೃದ್ಧಿ, ಗ್ರೇಡ್ ಸಪರೇಟರ್, ಕೆರೆ, ನೀರುಗಾಲುವೆ, ಪಾರ್ಕ್ , ತ್ಯಾಜ್ಯ ನಿರ್ವಹಣೆ, ಸ್ಲಂ ಅಭಿವೃದ್ಧಿ

> 2022-23 ನೇ ಸಾಲಿನಲ್ಲಿ 33 ಕಿ.ಮೀ ಮೆಟ್ರೋ ಮಾರ್ಗ ಸೇರಿಸಲಾಗುವುದು. ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ 58.19 ಕಿ.ಮೀ ಮೆಟ್ರೋ ಕಾಮಗಾರಿ ಆರಂಭವಾಗಿದ್ದು 2025 ರೊಳಗೆ ಪೂರ್ಣಗೊಳ್ಳಲಿದೆ.

ಕರ್ನಾಟಕ ಬಜೆಟ್‌ 2022: ಯಾವ ಇಲಾಖೆಗೆ ಎಷ್ಟು ಅನುದಾನ, ಇಲ್ಲಿದೆ ವಿವರಕರ್ನಾಟಕ ಬಜೆಟ್‌ 2022: ಯಾವ ಇಲಾಖೆಗೆ ಎಷ್ಟು ಅನುದಾನ, ಇಲ್ಲಿದೆ ವಿವರ

 ಮೆಟ್ರೋ ಹಂತ-3 ಯೋಜನೆಯನ್ನು 11,250 ಕೋಟಿ ರೂ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ

ಮೆಟ್ರೋ ಹಂತ-3 ಯೋಜನೆಯನ್ನು 11,250 ಕೋಟಿ ರೂ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ

> ಮೆಟ್ರೋ ಹಂತ-3 ಯೋಜನೆಯನ್ನು 11,250 ಕೋಟಿ ರೂ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗುವುದು. ಹೆಬ್ಬಾಳದಿಂದ - ಜೆ‌ಪಿ ನಗರದವರೆಗೆ 32 ಕಿ.ಮೀ ರಿಂಗ್ ರಸ್ತೆ ಮಾರ್ಗ ಹಾಗೂ ಹೊಸಹಳ್ಳಿಯಿಂದ-ಕಡಬಗೆರೆಗೆ 13 ಕಿ.ಮೀ ಮಾರ್ಗ.

> 2022-23 ಸಾಲಿನಲ್ಲಿ 37 ಕಿ.ಮೀ ಉದ್ದದ ಸರ್ಜಾಪುರ, ಅಗರ, ಕೋರಮಂಗಲ, ಡೈರಿ ವೃತ್ತದ ಮೂಲಕ ಹೆಬ್ಬಾಳದವರೆಗೆ 15 ಸಾವಿರ ವೆಚ್ಚದಲ್ಲಿ 36 ಕಿ.ಮೀ ಹೊಸಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮ.

> ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ವೆಚ್ಚದಲ್ಲಿ ಸ್ಕೈವಾಕ್ (ಪಾದಾಚಾರಿ-ರಸ್ತೆಬದಿ ವ್ಯಾಪಾರಿಗಳ ಸುರಕ್ಷತೆ ಹಾಗೂ ಮೆಟ್ರೋ ನಿಲ್ದಾಣವನ್ನು- ಬಸ್ ನಿಲ್ದಾಣದೊಂದಿಗೆ ಸಂಪರ್ಕಿಸಲು).

> ವೈಟ್ ಫೀಲ್ಡ್, ಕೆ.ಆರ್ ಪುರಂ, ಯಶವಂತಪುರ, ಜ್ಞಾನಭಾರತಿ, ಯಲಹಂಕ ನಿಲ್ದಾಣಗಳಲ್ಲಿ 55 ಕೋಟಿ ರೂ ವೆಚ್ಚದಲ್ಲಿ ರೈಲ್ವೆಯೊಂದಿಗೆ ಮೆಟ್ರೋ ನಿಲ್ದಾಣದ ಸಂಪರ್ಕದ ಕಾಮಗಾರಿ
(ಸಬ್ ಅರ್ಬನ್ ರೈಲ್ವೇ)

 ಗೊರಗುಂಟೆಪಾಳ್ಯ ಗ್ರೇಡ್ ಸಪರೇಟರ್ ಮೇಲ್ಸೇತುವೆ

ಗೊರಗುಂಟೆಪಾಳ್ಯ ಗ್ರೇಡ್ ಸಪರೇಟರ್ ಮೇಲ್ಸೇತುವೆ

> 73 ಕಿ.ಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆಗೆ ಭೂಸ್ವಾಧೀನ ವೆಚ್ಚ ಸೇರಿ 21,091 ಕೋಟಿ ರೂ ಈಗಾಗಲೇ ಅನುಮೋದನೆಯಾಗಿದ್ದುDBFOT ಮಾದರಿಯಲ್ಲಿ ಗುತ್ತಿಗೆದಾರರೇ ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚ ಭರಿಸುವುದರೊಂದಿಗೆ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ.

> ಗೊರಗುಂಟೆಪಾಳ್ಯ ಗ್ರೇಡ್ ಸಪರೇಟರ್ ಮೇಲ್ಸೇತುವೆ ನಿರ್ಮಾಣಕ್ಕೆ ಬಿಬಿಎಂಪಿ - ಬಿಡಿಎ ಜಂಟಿ ಕಾಮಗಾರಿ. ಬಿಡಿಎ ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ.

> ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಬನಶಂಕರಿ ಆರನೇ ಹಂತ ಅಂಜನಾಪುರ ಬಡಾವಣೆಯಲ್ಲಿ ರಸ್ತೆ, ಚರಂಡಿ ಕಾಮಗಾರಿಗೆ 404 ಕೋಟಿ ವೆಚ್ಚದಲ್ಲಿ ಬಿಡಿಎಯಿಂದ ನಿರ್ಮಾಣ ನಂತರ ಪಾಲಿಕೆಗೆ ಹಸ್ತಾಂತರ.

> ನಗರದ NGEFನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ್ ಮಾದರಿಯ ಗ್ರೀನ್ ಎಕ್ಸ್ ಪೋ ನಿರ್ಮಾಣ. ಆರು ಲಕ್ಷ "ಬಿ" ಖಾತಾಗಳನ್ನು ಎ ಖಾತೆಗೆ ವಹಿಸಿ ದಾಖಲಿಸಲು ಭೂಕಂದಾಯ ನಿಯಮದಡಿ ಪರಿಶೀಲಿಸಿ ಕಾನೂನು ಕ್ರಮ.

 ಕಾವೇರಿ ನೀರು ತರಲು 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ 5ನೇ ಹಂತ

ಕಾವೇರಿ ನೀರು ತರಲು 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ 5ನೇ ಹಂತ

> ಉಪನಗರ ರೈಲ್ವೇ ಯೋಜನೆಯನ್ನು 15,267 ಕೋಟಿ ರೂ ವೆಚ್ಚದಲ್ಕಿ 2026ರ ವೇಳೆಗೆ ಪೂರ್ಣಗೊಳಿಸಲು ಉದ್ದೇಶ.

> ನಗರಕ್ಕೆ 775 ದಶಲಕ್ಷ ಲೀಟರ್ ಕಾವೇರಿ ನೀರು ತರಲು 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ 5ನೇ ಹಂತ ಜಾರಿಯಲ್ಲಿದ್ದು, 2024-25 ರೊಳಗೆ ಪೂರ್ಣಗೊಳಿಸಲಾಗುವುದು.

> ಹಳೇಯ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ 1500 ಕೋಟಿ ರೂ ವೆಚ್ಚ. ಎತ್ತಿನಹೊಳೆಯಿಂದ 1.7 ಟಿ.ಎಂಸಿ ನೀರು ಬಳಸಿಕೊಳ್ಳಲು 312 ಕೋಟಿಯ ಟಿ.ಜಿ.ಹಳ್ಳಿ ಕಾಮಗಾರಿ 22-23 ರಲ್ಲಿ ಮುಕ್ತಾಯ.

> ನಗರದ ರಾಜಕಾಲುವೆ ಅಭಿವೃದ್ಧಿಪಡಿಸಿ ನಾಗರಿಕರ ವಿಹಾರ ತಾಣವಾಗಿಸಲು 195 ಕೋಟಿ ರೂ ವೆಚ್ಚದಲ್ಲಿ ಕೋರಮಂಗಲ ರಾಜಕಾಲುವೆಯನ್ನು ಅಭಿವೃದ್ಧಿ ಪಡಿಸಲಾಗುವುದು.

 ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ಅನುದಾನ

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ಅನುದಾನ

> ನಗರದಲ್ಲಿ ಪ್ರವಾಹ ಪರಿಸ್ಥಿತಿ ತಡೆಯಲು ರಾಜಕಾಲುವೆ ಅಭಿವೃದ್ಧಿಗೆ 1,500 ಕೋಟಿ ರೂ ಮೊತ್ತದಲ್ಲಿ ಯೋಜನೆ. ನಗರದ 4 ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ.

> 20 ಶಾಲೆಗಳನ್ನು 'ಬೆಂಗಳೂರು ಪಬ್ಲಿಕ್ ಶಾಲೆ ಅಭಿವೃದ್ಧಿ ಪಡಿಸಲು 89 ಕೋಟಿ ಮೀಸಲು.

> ಮಡಿವಾಳ ಕೆರೆ- ಎಲೆಮಲ್ಲಪ್ಪಶೆಟ್ಟಿ ಕೆರೆ ಅಭಿವೃದ್ಧಿಗೆ ಪಾಲಿಕೆಯಿಂದ ರೂಪುರೇಷೆ ಸಿದ್ಧತೆ. ಒಟ್ಟಾರೆಯಾಗಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ಅನುದಾನ.

> ಬೆಂಗಳೂರಿನ ಎಲ್ಲಾ ವಾರ್ಡ್‍ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 "ನಮ್ಮ ಕ್ಲಿನಿಕ್"ಗಳ ಸ್ಥಾಪನೆ.

> ನಗರದ ವಿವಿಧ ಭಾಗಗಳಲ್ಲಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ.

English summary
Karnataka Budget 2022: What Bengaluru Got in Budget. Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X