Karnataka Budget 2023: ಬೆಂಗಳೂರಿನ ರಸ್ತೆಗಳ ವೈಟ್ ಟಾಪಿಂಗ್‌ಗೆ 1,000 ಕೋಟಿ ರೂಪಾಯಿ ಅನುದಾನ

ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ 300 ಕೋಟಿ ರೂಪಾಯಿ ಅನುದಾನ

ಬೆಂಗಳೂರು, ಫೆಬ್ರವರಿ. 17: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ತನ್ನ ಅಧಿಕಾರಾವಧಿಯ ಕೊನೆಯ ಬಜೆಟ್ ಮಂಡಿಸಿದೆ. ಒಟ್ಟು 3.09 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಮಂಡಿಸಲಾಗಿದ್ದು, ಸಿಲಿಕಾನ್ ಸಿಟಿಯ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.

ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಗಾರಿ ಬಜೆಟ್‌ನಲ್ಲಿ 1,000 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಜೊತೆಗೆ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್ ಆರ್ಟೀರಿಯಲ್ ರಸ್ತೆಗಳ ಅಭಿವೃದ್ಧಿಗಾಗಿ 450 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ 300 ಕೋಟಿ ರೂ. ಒದಗಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

Karnataka Budget 2023 :CM Bommai announces Rs 1,000 crore for white-topping 120 kilometres of road

ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ತಿಳಿಸಿದ್ದಾರೆ.

ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಕಾರಿಡಾರ್‌ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ Artificial Intelligence ನ ಬಳಕೆಯೊಂದಿಗೆ ಟ್ರಾಫಿಕ್‌ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ Seamless Signalling ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Karnataka Budget 2023 :CM Bommai announces Rs 1,000 crore for white-topping 120 kilometres of road

ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್‌ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.

ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ. ಉದ್ದದ Satellite Town Ring Road ಅನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+