Karnataka budget 2023: ಬಜೆಟ್‌ನಿಂದ ನಿರಾಸೆ; ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ KSRTC ನೌಕರರು

ಸರಕಾರವು ರಸ್ತೆ ಸಾರಿಗೆ ಸಂಸ್ಥೆಯ 1.07 ಲಕ್ಷ ಉದ್ಯೋಗಿಗಳಿಗೆ ನೋವುಂಟು ಮಾಡಿದೆ.

ಬೆಂಗಳೂರು, ಫೆಬ್ರವರಿ. 19: ರಾಜ್ಯ ಬಜೆಟ್ ತಮಗೆ ನಿರಾಸೆ ತಂದಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ (ಕೆಎಸ್‌ಆರ್‌ಟಿಇಎಲ್) ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದೆ.

ಈ ಬಗ್ಗೆ ಪತ್ರಿಕಾ ಹೊರಡಿಸಿರುವ, ನೌಕರರು, "ಡಿಸೆಂಬರ್ 2020 ರಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ಎಲ್ಲಾ ರಸ್ತೆ ಸಾರಿಗೆ ನಿಗಮದ ನೌಕರರನ್ನು 6 ನೇ ವೇತನ ಆಯೋಗದ ಅಡಿಯಲ್ಲಿ ಪರಿಗಣಿಸುವುದಾಗಿ ಲಿಖಿತ ಭರವಸೆ ನೀಡಿತು. ಆದರೆ, ಅಂದಿನಿಂದಲೂ ಸರ್ಕಾರ ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಲೇ ಬಂದಿದೆ" ಎಂದು ಆರೋಪಿಸಿದ್ದಾರೆ.

ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಬದಲು ಪ್ರತಿಭಟನೆ ನಡೆಸಿದ ನೌಕರರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಅನೇಕ ಸುಳ್ಳು ಪ್ರಕರಣಗಳನ್ನು ದಾಖಲಿಸಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಆರೋಪಿಸಿದೆ.

Karnataka budget 2023: Disappointed with budget, KSRTC employees plan protest from March 1st

"2022 ರ ಡಿಸೆಂಬರ್‌ನಲ್ಲಿ ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದಾಗ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸಾರಿಗೆ ಸಚಿವರು ಎಲ್ಲಾ ರಸ್ತೆ ಸಾರಿಗೆ ನಿಗಮದ ನೌಕರರನ್ನು 7 ನೇ ವೇತನ ಆಯೋಗದ ಅಡಿಯಲ್ಲಿ ಪರಿಗಣಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ' ಎಂದು ನೌಕರರು ತಿಳಿಸಿದ್ದಾರೆ.

"ಸರಕಾರವು ರಸ್ತೆ ಸಾರಿಗೆ ಸಂಸ್ಥೆಯ 1.07 ಲಕ್ಷ ಉದ್ಯೋಗಿಗಳಿಗೆ ನೋವುಂಟು ಮಾಡಿದೆ. ಹೀಗಾಗಿ ಮಾರ್ಚ್ 1ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಸರ್ಕಾರವು ನಮ್ಮನ್ನು ವೇತನ ಆಯೋಗದ ಮಾದರಿಗೆ ಪರಿಗಣಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ" ಎಂದು ಸಿಬ್ಬಂದಿ ಆಗ್ರಹಿಸಿದ್ದಾರೆ.

ಶುಕ್ರವಾರ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+