Karnataka Budget 2023: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಅನುದಾನ, ತಜ್ಞರು ಹೇಳಿದ್ದೇನು?
ಬೆಂಗಳೂರು, ಜುಲೈ. 07: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ. ಅಭಿಪ್ರಾಯಪಟ್ಟಿದ್ದಾರೆ.
ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಹಣಕಾಸು ಜವಾಬ್ದಾರಿ ಹೊತ್ತಿರುವ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹೊಸ ಕಾರ್ಯಕ್ರಮ, ಯೋಜನಾ ಅನುದಾನಗಳು ಹಾಗು ಆಯವ್ಯಯದಲ್ಲಿ ಮೀಸಲಿಟ್ಟಿರುವ ಒಟ್ಟು ಹಣ, ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸಹಾಯಕಾರಿಯಾಗಿದೆ ಎಂದು ನಿರಂಜನಾರಾಧ್ಯ ಹೇಳಿದ್ದಾರೆ.

ಈ ಮೂಲಕ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸರ್ಕಾರವು ಬದ್ಧವಾಗಿದೆ ಎಂಬ ಭರವಸೆಯನ್ನು ಆಯವ್ಯಯ ನೀಡಿದೆ. ಈ ಕಾರಣಕ್ಕಾಗಿ ನಾನು ಮಾನ್ಯ ಮುಖ್ಯ ಮಂತ್ರಿಗಳನ್ನು ಸರ್ಕಾರಿ ಶಾಲೆಗಳ ಸಮಸ್ತ ಮೂಲ ವಾರಸುದಾರರ ಪರವಾಗಿ ಅದರಲ್ಲೂ ವಿಶೇಷವಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಪರವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.
ಆಯವ್ಯಯದಲ್ಲಿ, ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ, ಶೌಚಾಲಯಗಳನ್ನು ನಿರ್ಮಿಸಲು 200 ಕೋಟಿ, ಅತ್ಯಂತ ಶಿಥಿಲವಾದ ಹಾಗು ದುರಸ್ಥಿಗೆ ಬಂದಿರುವ ಕಟ್ಟಡಗಳ ದುರಸ್ತಿಗೆ 100 ಕೋಟಿ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳ ನಿರ್ವಹಣೆ ಮತ್ತು ಸುಸ್ಥಿತಿ ಕಾಪಾಡಲು ಈಗಿನ ಅನುದಾನವನ್ನು 20,000 ನ್ನು 45,000 ಕ್ಕೆ ಏರಿಸಲು 153 ಕೋಟಿ, ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುವ ಮೂಲಕ ಮಕ್ಕಳ ಪೌಷ್ಠಿಕತೆಯನ್ನು ಸುಧಾರಿಸಲು 280 ಕೋಟಿ, ಕಲಿಕಾ ನ್ಯೂನತೆಯನ್ನು ಸರಿಪಡಿಸಿ ಗುಣಾತ್ಮಕ ಶಿಕ್ಷಣವನ್ನು ಖಾತರಿಗೊಳಿಸಲು 80 ಕೋಟಿ ಮೀಸಲಿಡಲಾಗಿದೆ.
ಮಕ್ಕಳ ಸೃಜನಾತ್ಮಕ ಚಿಂತನೆ ಹಾಗು ಚಟುವಟಿಕೆಗಳ ಅನ್ವೇಷಣೆಗೆ 2 ಕೋಟಿ, ಸಾಟ್ಸ್ (Students Achievement Tracking System) ನ್ನು 2.0 ಗೆ ಮೇಲ್ದರ್ಜೆಗೇರಿಸಲು ಕ್ರಮ, ಪರಿಸರ ರಕ್ಷಣೆಗೆ ಶಾಲೆಗಳ ಸುತ್ತಮುತ್ತ ಸುಮಾರು 50 ಲಕ್ಷ ಗಿಡಗಳನ್ನು ನೆಡುವ ಯೋಜನೆ ಹಾಗು ಸಾರ್ವಜನಿಕ ಗ್ರಂಥಾಲಯಗಳಿಗೆ ಸದಭಿರುಚಿಯ ಪುಸ್ತಕಗಳನ್ನು ಒದಗಿಸಲು 10 ಕೋಟಿ ಹಣವನ್ನು ಒದಗಿಸಿರುವುದು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗು ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಇರುವ ಸದಾಶಯವನ್ನು ಸಾಬೀತುಪಡಿಸಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆ, 2023-24 ನೇ ಸಾಲಿಗೆ ಆಯವ್ಯಯದಲ್ಲಿ ಶಿಕ್ಷಣಕ್ಕೆ 37, 587 ಕೋಟಿಯನ್ನು (ಒಟ್ಟು ಆಯವ್ಯಯದಲ್ಲಿ ಶೇಕಡ.11) ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ. ಶಿಕ್ಷಣ ಇಲಾಖೆಗೆ, ಉಳಿದೆಲ್ಲ ಇಲಾಖೆಗಳಿಗಿಂತ ಅತಿ ಹೆಚ್ಚು ಹಣವನ್ನು ಒದಗಿಸಿರುವುದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಲು ಸತತವಾಗಿ ನಾಲ್ಕು ದಶಕಗಳಿಂದ ಹೋರಾಡುತ್ತಿರುವ ನನ್ನಂಥವರಿಗೆ ಒಂದು ಹೊಸ ಭರವಸೆ ಮೂಡಿಸಿದೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ. ಹೇಳಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications