Karnataka Budget 2023: ಕೃಷಿ ವಲಯಕ್ಕೆ ಕೊಟ್ಟ ಕೊಡುಗೆಗಳೇನು?

ಪಿಎಂ ಕಿಸಾನ್‌ ಯೋಜನೆಯಡಿ ಕೇಂದ್ರ 10,930 ಕೋಟಿ ರೂ, ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ.

ಬೆಂಗಳೂರು, ಫೆಬ್ರವರಿ 17: ರಾಜ್ಯ ಬಿಜೆಪಿ ಸರ್ಕಾರದ ಬಜೆಟ್‌ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಹಾಗೂ ತೋಟಗಾರಿಕಾ ವಲಯಕ್ಕೆ ಒಟ್ಟು 9,456 ಕೋಟಿ ಅನುದಾನ ನೀಡಿದ್ದಾರೆ.

ಪಿಎಂ ಕಿಸಾನ್‌ ಯೋಜನೆಯಡಿ ಕೇಂದ್ರ 10,930 ಕೋಟಿ ರೂ, ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ಕಳೆದ ವರ್ಷ ಘೋಷಿಸಿದ ಡಿಸೇಲ್‌ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ 400 ಕೋಟಿ ರೂ. ಒದಗಿಸಲಾಗಿದೆ.

ಕೃಷಿ ಯಾಂತ್ರೀಕರಣವನ್ನು ಉತ್ತೆಜಿಸಲು 2,037 ಕೋಟಿ ರೂ. ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಗೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ. ಮಾರುಕಟ್ಟೆ ನೆರವು ನೀಡಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ ವೆಚ್ಚ ಮಾಡಲಾಗಿದೆ.

Karnataka Budget 2023 Highlights for Agriculture Sector in Kannada

ನೀರಾವರಿ ಪಂಪ್‌ಸೆಟ್‌ಗಳಿಗೆ 52,590 ಕೋಟಿ ರೂ. ವಿದ್ಯುತ್‌ ಸಹಾಯಧನ ನೀಡಲಾಗಿದೆ. ಫಸಲ್‌ ಭೀಮಾ ಯೋಜನೆಯಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ 4900 ಕೋಟಿ ರೂ. ಪ್ರೀಮಿಯಂ ಪಾವತಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಜೋಳ, ಹೆಸರು ಕಾಳು ಮತ್ತು ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗಾಗಿ 6,650 ಕೋಟಿ ರೂ. ಒದಗಿಸಲಾಗಿದೆ.

ಬೆಳೆಗಳ ಸಂಸ್ಕರಣೆ, ಶೇಖರಣೆಗಾಗಿ 10.45 ಲಕ್ಷ ಫಲಾನುಭವಿಗಳಿಗೆ 175 ಕೋಟಿ ರೂ.ಗಳ ನೆರವು ನೀಡಲಾಗಿದೆ. ತೋಟಗಾರಿಕೆ ಹಾಗೂ ರೇಷ್ಮೇ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ 5,245 ಕೋಟಿ ರೂ. ವೆಚ್ಚ ಮಾಡಲಾಗಿದೆ.

ರೈತ ವಿದ್ಯಾನಿಧಿ ಯೋಜನೆಯಡಿ 10.32 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 725 ಕೋಟಿ ರೂ. ಒದಗಿಸಲಾಗಿದೆ. ಈ ವರ್ಷದಿಂದ ಜಾರಿಗೆ ಬರುವಂತೆ ರೈತರಿಗೆ ನೀಡುವ ಬಡ್ಡಿರಹಿತ ಅಲ್ಫಾವಧಿ ಸಾಲದ ಮಿತಿಯನ್ನು 3 ಲಕ್ಷ ರೂಗಳಿಂದ 5 ಲಕ್ಷ ರೂಗಳಿಗೆ ಹೆಚ್ಚಿಸಲಾಗುವುದು. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂಗಳಷ್ಟು ಸಾಲ ವಿತರಿಸಲಾಗುವುದು. ಇದರೊಂದಿಗೆ ಕಿಸಾನ್‌ ಕ್ರೇಡಿಟ್‌ ಕಾರ್ಡ್‌ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ನೂತನ ಯೋಜನೆ 2023-24ನೇ ಸಾಲಿನಿಂದ 10 ಸಾವಿರ ರೂ.ಗಳ ಹೆಚ್ಚುವರಿ ಸಹಾಯಧನ ನೀಡಲು ನಿರ್ಧರಿಸಲಾಗಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್‌ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.

Karnataka Budget 2023 Highlights for Agriculture Sector in Kannada

ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ. ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆಯ ನೆರವಿನೊಂದಿಗೆ ಅವರ ಭದ್ರತೆ ಒದಗಿಸಲು ಕ್ರಮ ವಹಿಸಲಾಗುವುದು. ರೈತ ಸಂಪದ ಯೋಜನೆಯಡಿ ಕೆಪೆಕ್‌ ಸಂಸ್ಥೆಯ ಮೂಲಕ 100 ಕೋಟಿ ರೂ.ಗಳಲ್ಲಿ ಯೋಜನೆ ರೂಪಿಸಲಾಗುತ್ತದೆ. ಪ್ರಸಕ್ತ ಆಯವ್ಯಯದಲ್ಲಿ ಆವರ್ತ ನಿಧಿಗೆ 1500 ಕೋಟಿ ರೂ. ಗಳನ್ನು ಒದಗಿಸಿ 3500 ಕೋಟಿ ರೂಗಳಿಗೆ ಏರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+