Karnataka Budget 2023: ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆಗಳೇನು, ಇಲ್ಲಿದೆ ಮಾಹಿತಿ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನು ಗುರುತಿಸಿ ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1,000 ರೂ.ನಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಬೆಂಗಳೂರು, ಫೆಬ್ರವರಿ 17: ರಾಜ್ಯ ಬಿಜೆಪಿ ಸರ್ಕಾರದ ಬಜೆಟ್‌ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಕ್ಷಣ ಕ್ಷೇತ್ರಕ್ಕೆ ಒಟ್ಟು37,960 ಕೋಟಿ ಅನುದಾನ ನೀಡಿದ್ದಾರೆ.

ಸಮಾಜದ ಏಳಿಗೆಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನಸ ಭಾಗವಾಗಿ ಶಿಕ್ಷಣ ಆರೋಗ್ಯ ಹಾಗೂ ಪೌಷ್ಟಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನು ಗುರುತಿಸಿ ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1,000 ರೂ.ನಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ಮೊತ್ತವನ್ನು ನೀಡಲಾಗಿದೆ. ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗಿದೆ. ಇದಲ್ಲದೆ ರಾಜ್ಯದ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು.

Karnataka Budget 2023 Highlights for Education Sector in Kannada

ರಾಜ್ಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 100 ಕೋಟಿ ವೆಚ್ಚದಲ್ಲಿ 1000 ಹೊಸ ಬಸ್‌ ಕಾರ್ಯಾಚರಣೆಗಳನ್ನು ಮಾಡಲು ಮಕ್ಕಳ ಬಸ್ಸು ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ವಿವೇಕ ಯೋಜನೆಯಡಿ 7,601 ಶಾಲಾ ಕಾಲೇಜು ಕೊಠಡಿಗಳನ್ನು 1,194 ಕೋಟಿ ರೂ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. ಇದರೊಂದಿಗೆ ಪಿಎಂ ಶ್ರೀ ಯೋಜನೆ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. ಪ್ರಸಕ್ತ ವರ್ಷದಲ್ಲಿ 1230 ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಲಾಗಿದೆ.

73 ಕರ್ನಾಟಕ ಪಬ್ಲಿಕ್‌ ಶಾಲೆಗಳು ಮತ್ತು 50 ಆದರ್ಶ ವಿದ್ಯಾನಿಲಯಗಳಲ್ಲಿ 15 ಕೋಟಿ ರೂ, ವೆಚ್ಚದಲ್ಲಿ ಸೃಷ್ಟಿ ಟಿಂಕರಿಂಗ್‌ ಪ್ರಯೋಗಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆಪಾಲ್‌ ಲ್ಯಾಭ್‌ ಸಹಯೋಗದೊಂದಿಗೆ ಪರಿಹಾರತ್ಮಾಕ ಚಟುವಟಿಕೆ ಅಭ್ಯಧಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು.

ಮುಂದಿನ 5 ವರ್ಷದಲ್ಲಿ ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಗಳಾಗಿ ಉನ್ನತೀಕರಿಸಲು ಬೆಂಗಳೂರು, ಹಾವೇರಿ, ಹಾಸನ, ಕೆಆರ್‌ ಪೇಟೆ, ತಳ್ಕಲ್‌, ರಾಮನಗರ, ಹಾಗೂ ಕಾರವಾರದಲ್ಲಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಉನ್ನತೀಕರಿಸಲಾಗುತ್ತದೆ.

Karnataka Budget 2023 Highlights for Education Sector in Kannada

ಎಲ್ಲ ವಿಶ್ವವಿದ್ಯಾನಿಲಯಗಳು ಹಾಗೂ ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್‌ ಪುಸ್ತಕಗಳು ಹಾಗೂ ಪಠ್ಯ ಪುಸ್ತಕಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಶಾಲಾ ಮಕ್ಕಳಿಗೆ ಹಳ್ಳಿ ಮುತ್ತು ಯೋಜನೆ ಜಾರಿ ಮಾಡಲಾಗುವುದು. ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಆರಂಭಿಸಲಾಗುವುದು.

ಯುವಜನರ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಯುವ ನೀತಿ 2022 ಅನ್ನು ರೂಪಿಸಲಾಗಿದೆ. ಗ್ರಾಮೀಣ ಯುವಕರ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ 10,000 ರೂ. ನಂತೆ ಸುತ್ತುನಿಧಿ ಹಾಗೂ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗೊಳ್ಳಲು ಒಂದು ಲಕ್ಷ ರೂ. ಒಳಗೊಂಡಂತೆ ಬ್ಯಾಂಕ್‌ಗಳ ಸಹಾಯದೊಂದಿಗೆ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು.

ʻಬದುಕುವ ದಾರಿʼ ಎಂಬ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರೆಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1,500 ರೂ. ಗಳ ಶಿಷ್ಯವೇತನವನ್ನು ನೀಡಲಾಗುವುದು. ಈ ತರಬೇತಿಯನ್ನು ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿಯಲ್ಲಿ 3 ತಿಂಗಳಿಗೆ ಮಾಸಿಕ 1,500 ರೂ. ಗಳ ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು.

ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು ʻಯುವಸ್ನೇಹಿʼ ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+