Bengaluru Business Corridor: ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ನಿರ್ಧಾರ, ವೆಚ್ಚ ಎಷ್ಟು ಗೊತ್ತಾ?

ಸಿಎಂ ಸಿದ್ದರಾಮಯ್ಯನವರು ಇಂದು 15ನೇ ಬಾರಿ ಬಜೆಟ್‌ ಮಂಡನೆ ಮಾಡಿದ್ದು, ಈ ವೇಳೆ ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.

ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 27 ಸಾವಿರ ಕೋಟಿ ವೆಚ್ಚದಲ್ಲಿ 73 ಕಿಲೋ ಮೀಟರ್‌ ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲಾಗುವುದು. ಇದನ್ನು ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಎಂದು ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು.

 Karnataka Budget 2024: CM announced Plans for Bengaluru Business Corridor build

ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. 2025ರೊಳಗೆ 44 ಕಿಲೋ ಮೀಟರ್‌ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?: ಸಿಎಂ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16) ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾದರೆ ಈ ಬಜೆಟ್‌ನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಏನೆಲ್ಲ ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

* ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ, ಬ್ರ್ಯಾಂಡ್‌ ಬೆಂಗಳೂರು ನಿರ್ಮಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಘೋಷಣೆ ಮಾಡಿದ್ದಾರೆ. ಇದನ್ನು ಸೇರಿದಂತೆ ಬೆಂಗ್ಳೂರಿಗೆ ಇನ್ನೂ ಏನೆಲ್ಲ ಘೋಷಣೆ ಮಾಡಿದ್ದಾರೆ ಎಂದು ಇಲ್ಲಿ ಗಮನಿಸಿ.

* ಸುಗಮ ಸಂಚಾರ-ಬ್ರಾಂಡ್‌ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿ, ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಿ, ಆರ್ಥಿಕ ಚಟುವಟಿಕೆ ವೃದ್ಧಿಸಲು ಸಹಕಾರಿಯಾಗುವಂತೆ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಿಯಿಸಲು ಕ್ರಮವಹಿಸಲಾಗಿದೆ.

27 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 73 ಕಿಲೋ ಮೀಟರ್‌ ಉದ್ದದ ರಸ್ತೆಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಕರೆಯಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

* ನಗರದಲ್ಲಿ ಆಕರ್ಷಕ ಪ್ರವಾಸಿ ತಾಣಗಣನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಅಲ್ಲದೆ 250 ಮೀಟರ್‌ ಎತ್ತರದ ಸ್ಕೈಡೆಕ್‌ ನಿರ್ಮಾಣ ಮಾಡಲು ನಿರ್ಧರಿಸಿದೆ. ನಗರಾಭಿವೃದ್ಧಿ ಅಂಗಸಂಸ್ಥೆಗಳಾದ ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್‌ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

* ಬೆಂಗಳೂರಿನಲ್ಲಿ ಬಿಎಂಟಿಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್‌ ಅರ್ಬನ್‌ ರೈಲು ಯೋಜನೆಗಳಿಗೆ ಚುರುಕು ಮುಟ್ಟಿಸಲು ಯೋಜನೆ ರೂಪಿಸಲಾಗಿದೆ. 2025ರ ಮಾರ್ಚ್‌ ಒಳಗೆ 44 ಕಿಲೋ ಮೀಟರ್ ನಮ್ಮ ಮೆಟ್ರೋ ಮಾರ್ಗ ಸೇರ್ಪಡೆಯಾಗಲಿದೆ.

* ಇನ್ನು ಬೆಂಗಳೂರು ನಗರಕ್ಕೆ 1334 ಹೊಸ ಇ-ವಿ ಬಸ್‌ಗಳು ಮತ್ತು 820 ಬಿಎಸ್‌-6 ಡೀಸೆಲ್‌ ಬಸ್‌ಗಳನ್ನು ಜೀವನಾಡಿ ಪ್ರಮುಖ ಸಾರಿಗೆಗಳಲ್ಲೊಂದಾದ ಬಿಎಂಟಿಸಿಗೆ ಸೇರ್ಪಡೆಗೊಳಿಸಲಿದೆ. ಅಲ್ಲದೆ ಮಹಿಳಾ ಪ್ರಯಾಣಿಕೆ ಹಿತದ ದೃಷ್ಟಿಯಿಂದ ಮೊಬೈಲ್‌ ಆಪ್‌ ಅನ್ನು ಅನುಷ್ಠಾನಕ್ಕೆ ತರರಲು ಸರ್ಕಾರ ನಿರ್ಧರಿಸಿದೆ ಎಂದರು.

* ಕಾವೇರಿ ಹಂತ5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು 2024ರ ಡಿಸೆಬರ್‌ನಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ 228 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆಯನ್ನು ಅಳವಿಡಿಸಲಾಗುವುದು. ಇನ್ನು 7 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು 441 ಕೋಟಿ ರೂಪಾಯಿ ವೆಚ್ಚದಲ್ಲು ಉನ್ನತೀಕರಿಸಲಾಗುವುದ ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+