Karnataka Budget 2024: ಬೆಂಗಳೂರು ಬಳಿ 25 ಎಕರೆಯಲ್ಲಿ ತಲೆಯೆತ್ತಲಿದೆ 'ಸೈನ್ಸ್ ಸಿಟಿ'!

ಬೆಂಗಳೂರು, ಫೆಬ್ರವರಿ 01: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಬೆಂಗಳೂರು ಬಳಿ ಫ್ಯಾನ್ಸಿ ಸೈನ್ಸ್ ಸಿಟಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದೆ. 25 ಎಕರೆ ಭೂಮಿ ಮತ್ತು 232 ಕೋಟಿ ರೂಪಾಯಿ ಬಂಡವಾಳದ ಅಗತ್ಯವಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ಮುಂದಿಟ್ಟಿದ್ದಾರೆ.

ಮುಂಬರುವ 2024-25ರ ಬಜೆಟ್‌ನಲ್ಲಿ ಈ ಸೈನ್ಸ್ ಸಿಟಿಯನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೂಲಗಳ ಪ್ರಕಾರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿಯಲ್ಲಿ ಸೈನ್ಸ್ ಸಿಟಿಗಾಗಿ ಲಭ್ಯವಿರುವ ಜಾಗವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಪರಿಗಣಿಸುತ್ತಿದೆ.

Karnataka Budget 2024: Minister proposed 25 acre Science City near Bengaluru it cost rs 232 crore

ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂನ ವಿಜ್ಞಾನದ ಸಂಸ್ಕೃತಿಯನ್ನು ಉತ್ತೇಜಿಸುವ ಯೋಜನೆಯಡಿ (SPoCS) 'ಸೈನ್ಸ್ ಸಿಟಿ' ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು. ಒಟ್ಟು ಯೋಜನೆಯ ಅಂದಾಜು 232.70 ಕೋಟಿ ರೂ. ಇದು 179 ಕೋಟಿ ರೂಪಾಯಿ ಬಂಡವಾಳ ವೆಚ್ಚ ಮತ್ತು 53.70 ಕೋಟಿ ರೂಪಾಯಿಗಳ ಕಾರ್ಪಸ್ ಅನ್ನು ಒಳಗೊಂಡಿದೆ. ಒಟ್ಟು ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಕ್ರಮವಾಗಿ 118.14 ಕೋಟಿ ಮತ್ತು 14.56 ಕೋಟಿ ರೂಗೆ ಹಂಚಲು ಪ್ರಸ್ತಾಪಿಸಲಾಗಿದೆ.

"ಇದು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಉತ್ತೇಜಿಸುವ ಮತ್ತು ಈ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಮೂಲಕ ಪ್ರಮುಖ ಆಕರ್ಷಣೆಯಾಗಿ ಕಾರ್ಯನಿರ್ವಹಿಸುತ್ತದೆ. ಸೃಜನಶೀಲ ಪ್ರತಿಭೆಯನ್ನು ಬೆಳೆಸಲು ಮತ್ತು ವೈಜ್ಞಾನಿಕ ಮನೋಭಾವವನ್ನು ಸೃಷ್ಟಿಸಲಿದೆ. ಇದು ಎಲ್ಲಾ ವಯಸ್ಸಿನ ಜನರಿಗೆ ಶೈಕ್ಷಣಿಕ ಮತ್ತು ಮನರಂಜನೆಯ ಯೋಜನೆಯಾಗಿದೆ" ಎಂದು ಸಚಿವ ಎನ್‌ಎಸ್ ಬೋಸರಾಜು ಹೇಳಿದ್ದಾರೆ.

Karnataka Budget 2024: Minister proposed 25 acre Science City near Bengaluru it cost rs 232 crore

'ಸೈನ್ಸ್ ಸಿಟಿ'ಯ ಒಳಾಂಗಣ ಮತ್ತು ಹೊರಾಂಗಣ ಪ್ರದರ್ಶನಗಳು ಮತ್ತು ವರ್ಷವಿಡೀ ನಿಯಮಿತ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ. ಸೈನ್ಸ್ ಅಂಡ್ ಟೆಕ್ನಾಲಜಿ ಮತ್ತು ಇನ್ಫೋಟೈನ್‌ಮೆಂಟ್‌ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಾರ್ವಜನಿಕರಿಗೆ ಆಕರ್ಷಕ ಮತ್ತು ಉಪಯುಕ್ತವಾದ ರೀತಿಯಲ್ಲಿ ಪರಿಕಲ್ಪನೆ ಮಾಡಲಾಗುವುದು. ಆರ್ಥಿಕವಾಗಿ ಸ್ವಾವಲಂಬಿಯಾಗುವವರೆಗೆ ಯೋಜನೆಯ ನಿರ್ವಹಣೆಗೆ ರಾಜ್ಯವು ಹಣವನ್ನು ನೀಡುತ್ತದೆ" ಎಂದು ಸಚಿವರು ತಿಳಿಸಿದ್ದಾರೆ.

ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಸರ್ಕಾರವು ಮತ್ತೊಂದು ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಬೆಂಗಳೂರಿನಿಂದ 50-80 ಕಿ.ಮೀ ದೂರದಲ್ಲಿ 1,000-2,000 ಎಕರೆ ಪ್ರದೇಶದಲ್ಲಿ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆ (KHIR) ಸಿಟಿಗಾಗಿ ಒತ್ತಾಯಿಸುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. KHIR ನಗರವು 40,000 ಕೋಟಿ ರೂಪಾಯಿಗಳ ಹೂಡಿಕೆ ಸಾಮರ್ಥ್ಯವನ್ನು ಹೊಂದಿದೆ ಮತ್ತು ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+