Karnataka Budget 2025: ಬಜೆಟ್‌ನಲ್ಲಿ ಬೆಂಗಳೂರಿಗೆ ಬಂಪರ್ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್‌ 07: ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದಾರೆ. ದಾಖಲೆಯ 16ನೇ ಬಜೆಟ್‌ ಮಂಡನೆ ಮಾಡುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತಿ ಹೆಚ್ಚು ಮಂಡನೇ ಮಾಡಿದ ಕೀರ್ತಿಗೆ ಸಿದ್ದರಾಮಯ್ಯ ಸೇರಲಿದ್ದಾರೆ. ಅಲ್ಲದೇ ಬೆಂಗಳೂರು ಅಭಿವೃದ್ದಿಗೆ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಪರ್‌ ಗಿಫ್ಟ್‌ ನೀಡಿದ್ದಾರೆ.

ಬೆಂಗಳೂರಿಗೆ ಅನುದಾನ 7 ಸಾವಿರ ಕೋಟಿಗೆ ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು. ಗ್ಯಾರಂಟಿ ಯೋಜನೆಗಳ ಇತರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಈ ಬಾರಿ ಬಜೆಟ್ 4 ಲಕ್ಷ ಕೋಟಿ ರೂ. ಇದೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ ಸೇರಿದಂತೆ ಗ್ರಾಮೀಣ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದತಿಳಿಸಿದ್ದಾರೆ.

Karnataka Budget 2025 Grant to Bengaluru increased to 7 thousand crores

ಎಸ್​ಸಿ, ಎಸ್​ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಸರ್ಕಾರಿ ಪ್ರೌಢಶಾಲೆ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಲಾಗುವುದು, ಬಿಸಿಯೂಟ ಕಾರ್ಯಕರ್ತರಿಗೆ 1 ಸಾವಿರ ರೂ. ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಟನಲ್‌ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ ಎರಡು ಸಾವಿರ ರೂಗಳನ್ನು ಹೆಚ್ಚಳ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದೇ ವೇಳೆ ಅವರು ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವುದಾಗಿ ತಿಳಿಸಿದರು.

ಸಾವಯವ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಬೇಡಿಕೆ ಮತ್ತು ಪೂರೈಕೆಗಳ ಅಂತರವನ್ನು ಸರಿದೂಗಿಸಲು ಹಾಗೂ ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್‌ʼ ಅನ್ನು ಸ್ಥಾಪಿಸಲಾಗುವುದು. ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕಾ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ. ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಅನ್ನು ಜಾರಿಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ 95 ಕೋಟಿ ರೂ. ಅನುದಾನ ಒದಗಿಸಿದೆ. ತೋಟಗಾರಿಕಾ ಬೆಳೆಗಳ ವಿಸ್ತೀರ್ಣ, ಉತ್ಪಾದನೆ, ಬೆಳೆಗಳ ಆರೋಗ್ಯ, ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ನೈಜ ಸಮಯದ (Real Time) ಆಧಾರದ ಮೇಲೆ ರೈತರಿಗೆ ಮಾಹಿತಿ ಒದಗಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಸ್ಪೇಸ್‌ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪಿಸಲಾಗುವುದು.

ರಾಜ್ಯದ 20 GI ಟ್ಯಾಗ್‌ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳು ಕಣ್ಮರೆಯಾಗಿ ನಶಿಸಿ ಹೋಗುವುದನ್ನು ತಪ್ಪಿಸಲು ದೇಶಿ ತಳಿಗಳ ಬೀಜ ಬ್ಯಾಂಕ್‌ ಸ್ಥಾಪಿಸಲಾಗುವುದು. ಬ್ಯಾಡಗಿ ಮೆಣಸಿನಕಾಯಿ ತಳಿಯ ಸಂರಕ್ಷಣೆ ಮತ್ತು ಎಲೆ ಮುಟುರು ರೋಗ, ತ್ರಿಪ್ಸ್‌ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ಕೈಗೊಳ್ಳಲಾಗುವುದು.ತೋಟಗಾರಿಕೆ ಇಲಾಖೆಯ ಅಧೀನದ ಆಯ್ದ ಕ್ಷೇತ್ರಗಳು ಮತ್ತು ನರ್ಸರಿಗಳಡಿ ಸಾರ್ವಜನಿಕ-ಖಾಸಗಿ ಸಹಯೋಗದೊಂದಿಗೆ ಹೂ-ಕೃಷಿ, ಅಲಂಕಾರಿಕ ಸಸ್ಯಗಳು, ಔಷಧೀಯ ಸಸ್ಯಗಳನ್ನು ಬೆಳೆಸಲು ಹಾಗೂ ತೋಟಗಾರಿಕಾ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದರು.

ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು. ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ 426 ಕೋಟಿರೂ. ಸಹಾಯ ಧನವನ್ನು ಒದಗಿಸಲಾಗುವುದು. ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ಒದಗಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+