ಸಾರಿಗೆ ಮುಷ್ಕರ: ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಏಪ್ರಿಲ್ 8: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಬೆಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ವಿವಿ ಮಾಹಿತಿ ನೀಡಿದೆ.
ಏಪ್ರಿಲ್ 8 ಹಾಗೂ 9 ರಂದು ನಿಗದಿಯಾಗಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ ಮಾಡಿ ಬೆಂಗಳೂರು ವಿಶ್ವವಿದ್ಯಾಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಬೆಂಗಳೂರು ವಿವಿ ಮಾಹಿತಿ ನೀಡಿದೆ.
#Covid19Updates: ರಾಜ್ಯದಲ್ಲಿ ಮತ್ತೆ ಕೋವಿಡ್ ಅಬ್ಬರ.. ಬರೋಬ್ಬರಿ 6976 ಜನರಿಗೆ ಸೋಂಕು | Oneindia Kannada
ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟಾಗಿದೆ. ಹೀಗಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.