Pahalgam Terror Attack: ಉಗ್ರರ ದಾಳಿಗೆ ಕನ್ನಡಿಗ ಸಾವು: ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
ಬೆಂಗಳೂರು, ಏಪ್ರಿಲ್ 23: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉಗ್ರರ ದಾಳಿಯಿಂದ ಇಬ್ಬರು ಮೃತ ಪಟ್ಟಿದ್ದು, ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನ ಕಳುಹಿಸಿದ್ದು, ಕಾಶ್ಮೀರದಲ್ಲಿ ಸಂತೋಷ್ ಲಾಡ್ ಕನ್ನಡಿಗರ ರಕ್ಷಣೆ ಮಾಡುತ್ತಿದ್ದಾರೆ.
ಕನ್ನಡಿಗರ ರಕ್ಷಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಚೇತನ್ ನೇತೃತ್ವದ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಕಳಿಸಿಕೊಡಲಾಗಿದೆ. ದೆಹಲಿ ಕರ್ನಾಟಕ ಭವನದ ಆಯುಕ್ತರನ್ನೂ ಅರ್ಲಟ್ ಮಾಡಲಾಗಿದೆ. ಜೊತೆಗೆ ಇಡೀ ಕಾರ್ಯಾಚರಣೆಯ ಜವಾಬ್ದಾರಿಯನ್ನು ಸಿಎಂ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್ಗೆ ವಹಿಸಿದ್ದಾರೆ.

ಏಪ್ರಿಲ್ 22 (ಮಂಗಳವಾರ) ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಮಂಜುನಾಥ ರಾವ್ ಹಾಗೂ ಹಾವೇರಿ ಮೂಲದ ಭರತ್ ಅವರಿಗೆ ಸಾವನ್ನಪ್ಪಿದ್ದಾರೆ, ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆಯ ಕುರಿತು ತಮ್ಮ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮಂಜುನಾಥ್ ರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ ಮತ್ತು ಕರ್ನಾಟಕ ಸರ್ಕಾರದ ಅಧಿಕಾರಿಗಳ ತಂಡವು ಕಾಶ್ಮೀರಕ್ಕೆ ತೆರಳಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭಯೋತ್ಪಾದಕ ದಾಳಿಯನ್ನು ಪರಿಶೀಲಿಸಲು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರೊಂದಿಗೆ ಹಿರಿಯ ರಾಜ್ಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಆಘಾತಕಾರಿ ಘಟನೆಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ, ನಾನು ತುರ್ತು ಸಭೆ ಕರೆದು ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದೆ ಎಂದು ಸಿದ್ದರಾಮಯ್ಯ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿಯಲ್ಲಿ ಕರ್ನಾಟಕ ಮೂಲದ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂಬ ವರದಿಗಳು ಬಂದ ನಂತರ ಸಿದ್ದರಾಮಯ್ಯ ಅವರ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರವು ಈ ವಿಷಯವನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅಗತ್ಯವಿರುವ ಎಲ್ಲಾ ಅಗತ್ಯ ಬೆಂಬಲವನ್ನು ನೀಡಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರಿಗೆ ಭರವಸೆ ನೀಡಿದರು.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ. ಉಗ್ರ ಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.












Click it and Unblock the Notifications