ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಹೊರತುಪಡಿಸಿ ಉಳಿದೆಲ್ಲಾ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟ ಅಸ್ತು

|
Google Oneindia Kannada News

ಬೆಂಗಳೂರು, ಜನವರಿ 13: ಬೆಂಗಳೂರು ಬಿಟ್ಟು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಯಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಕೆಎಂಸಿ ತಿದ್ದುಪಡಿ ಮಾಡಿರುವುದರಿಂದ ಇನ್ನು ಮುಂದೆ ವಸತಿ ಪ್ರದೇಶಗಳಲ್ಲಿ ಹಾಲಿಯಿದ್ದ 0.2 ತೆರಿಗೆಯನ್ನು 1.05ಕ್ಕೆ ಹೆಚ್ಚಳ ಮಾಡಲಾಗುವುದು. ಖಾಲಿ ನಿವೇಶನಕ್ಕೆ ಪ್ರಸ್ತುತ 0.2 ತೆರಿಗೆಯನ್ನು ವಿಧಿಸಲಾಗುತ್ತಿತ್ತು.ಇದು ಕೂಡ ಮುಂದಿನ ದಿನಗಳಲ್ಲಿ 0.5ಕ್ಕೆ ಹೆಚ್ಚಳ ಏರಿಕೆಯಾಗಲಿದೆ.

ರಸ್ತೆಯ ಮೇಲೆಯೇ ರಸ್ತೆಯ ಹೆಸರು ಬರೆಯಲು ಮುಂದಾದ ಬಿಬಿಎಂಪಿರಸ್ತೆಯ ಮೇಲೆಯೇ ರಸ್ತೆಯ ಹೆಸರು ಬರೆಯಲು ಮುಂದಾದ ಬಿಬಿಎಂಪಿ

ಮಹತ್ವದ ನಿರ್ಧಾರ ಕೈಗೊಂಡಿದೆ. ಆಸ್ತಿ ತೆರಿಗೆ ಪರಿಷ್ಕರಣೆ ಮಾಡುವ ಸಂಬಂಧ ಕರ್ನಾಟಕ ಮುನ್ಸಿಪಲ್ ಕಾಯ್ದೆಗೆ ತಿದ್ದುಪಡಿ ಮಾಡಲು ತೀರ್ಮಾನಿಸಲಾಗಿದ್ದು, ಬಿಬಿಎಂಪಿ ಹೊರತುಪಡಿಸಿ ರಾಜ್ಯದ 10 ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಮತ್ತು ಪಟ್ಟಣಪಂಚಾಯ್ತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಿದೆ.

Karnataka Cabinet Approves To Increase Property Tax In All City Corporations

ಈವರೆಗೆ 1000 ಚದರ ಅಡಿ ಖಾಲಿ ನಿವೇಶನಗಳಿಗೆ ಯಾವುದೇ ರೀತಿಯ ತೆರಿಗೆಯನ್ನು ವಿಧಿಸಲಾಗುತ್ತಿರಲಿಲ್ಲ. ಇನ್ನು ಮುಂದೆ 1000 ಚದರ ಅಡಿಗಿಂತ ಹೆಚ್ಚಿನ ಖಾಲಿ ನಿವೇಶನಗಳಿಗೆ ತೆರಿಗೆಯನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಆದಿಚುಂಚನಗಿರಿ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಧರನಾಥ ಸ್ವಾಮೀಜಿಯವರ ಹುಟ್ಟೂರಾದ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಾನಂದೂರಿನಲ್ಲಿ ಸುಮಾರು 25 ಕೋಟಿ ವೆಚ್ಚದಲ್ಲಿ ಪಾರಂಪರಿಕ ಮತ್ತು ಸಾಂಸ್ಕøತಿಕ ತಾಣ ನಿರ್ಮಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಮುಂದಿನ 5 ವರ್ಷಗಳ ಅವಧಿಯಲ್ಲಿ ರಾಜ್ಯಾದ್ಯಂತ ಸುಮಾರು 2 ಕೋಟಿ ವೆಚ್ಚದಲ್ಲಿ ಮುಂದಿನ 10,034 ಪೊಲೀಸ್ ವಸತಿಗೃಹಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ.ತೀವ್ರ ಬರಗಾಲಕ್ಕೆ ತುತ್ತಾಗಿದ್ದ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೆರೆಗಳಿಗೆ 200 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ .

ಎಂದರು.ದಾವಣಗೆರೆ ಜಿಲ್ಲೆ ಹಾನಗೋಡಿನಲ್ಲಿ ಕ್ರಷರ್ ಘಟಕ ನಿರ್ಮಾಣ ಮಾಡಲು ಖಾಸಗಿ ಸಂಸ್ಥೆಗೆ 30 ವರ್ಷದ ಭೋಗ್ಯಕ್ಕೆ 12 ಎಕರೆ ಜಮೀನನ್ನು ಮಂಜೂರು ಮಾಡಲು ಸಂಪುಟಸಭೆ ಒಪ್ಪಿಗೆ ನೀಡಿದೆ.

English summary
Karnataka Cabinet Approves To Increase Property Tax In All City Corporations except BBMP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X