ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ

|
Google Oneindia Kannada News

CET exam
ಬೆಂಗಳೂರು, ಮೇ 27 : ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆದ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಫಲಿತಾಂಶವನ್ನು ಪ್ರಕಟಿಸಿದರು.

ಮಂಗಳವಾರ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಸಿಇಟಿ ಫಲಿತಾಂಶವನ್ನು ಪ್ರಕಟಿಸಿದರು. ಮೇ 1 ಮತ್ತು 2ರಂದು 2014-15ನೇ ಸಾಲಿನ ಸಿಇಟಿ ಪರೀಕ್ಷೆ ನಡೆದಿತ್ತು.

ವೈದ್ಯಕೀಯ ವಿಭಾಗದಲ್ಲಿ ಶೇ 93.88 ಅಂಕಗಳನ್ನು ಪಡೆದ ಬೆಂಗಳೂರಿನ ಎಂಇಎಸ್ ಕಾಲೇಜಿನ ವಿದ್ಯಾರ್ಥಿನಿ ಗಿರಿಜಾ ಅಗರ್ ವಾಲ್ ಮೊದಲ ರ‌್ಯಾಂಕ್ ಪಡೆದಿದ್ದಾರೆ. 91.11 ಅಂಕಗಳನ್ನು ಗಳಿಸಿದ ಹೆಚ್.ಬಿ.ನೇಹಾ ಎರಡನೇ ರ‌್ಯಾಂಕ್ ಗಳಿಸಿದ್ದಾರೆ.

ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ನಾರಾಯಣ ಪಿಯು ಕಾಲೇಜಿನ ಶ್ರೀನಿಧಿ ಪ್ರಭು ಶೇ.96.15 ಅಂಕಗಳನ್ನು ಪಡೆದು ಮೊದಲ ರ‌್ಯಾಂಕ್ ಪಡೆದಿದ್ದಾರೆ. ಬೆಂಗಳೂರಿನ ಚೇತನ್ ಪಿಯು ಕಾಲೇಜಿನ ರಾನಥ್ ಬಿರಂಗಿ ಶೇ.95.83 ಅಂಕಗಳನ್ನು ಪಡೆದು 2ನೇ ರ‌್ಯಾಂಕ್ ಗಳಿಸಿದ್ದಾರೆ. ಜೂನ್ 24 ರಂದು ಮೊದಲ ಕೌನ್ಸಿಲಿಂಗ್ ನಡೆಯಲಿದೆ.

ಸಿಇಟಿ ಫಲಿತಾಂಶವನ್ನು ಪಡೆಯಲು
httto://karresults.nic.in
http://cet.kar.nic.in
http://kea. kar.nic.in
www.bangaloreEducation.com ವೆಬ್ ಸೈಟ್ ಗಳಿಗೆ ಭೇಟಿ ನೀಡಿ

English summary
Higher education minister RV Deshpande announced CET result at Karnataka Examinations Authority (KEA)office on Tuesday, May 27. CET exam conducted form 1st May 2014 to 2nd May 2014.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X