ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಆರೋಪ ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ ದೂರು. ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ರವಿ ಕೃಷ್ಣಾ ರೆಡ್ಡಿ. ಮದ್ಯದಂಗಡಿಗಳ ಲೈಸನ್ಸ್ ನವೀಕರಣ, ರದ್ದು, ವರ್ಗಾವಣೆ ವಿಚ
ಬೆಂಗಳೂರು, ಜುಲೈ 4: ರಾಜ್ಯ ಅಬಕಾರಿ ಇಲಾಖೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯ ಅಧಿಕಾರಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿದೆಯೆಂದು ಆರೋಪಿಸಿ, ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯಲ್ಲಿ ದೂರೊಂದು ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿಗಳ ಆಸುಪಾಸಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ್ದ ಆದೇಶದ ನಂತರ, ಈ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿಯೆಂದು ದೂರಿನಲ್ಲಿ ದಾಖಲಿಸಲಾಗಿದೆ.

ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಎಂಬ ಹೆಸರಿನ ಸಂಘಟನೆಯ ಸದಸ್ಯ ರವಿ ಕೃಷ್ಣಾ ರೆಡ್ಡಿ ಎಂಬುವರಿಂದ ಈ ದೂರು ದಾಖಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಹೊರಬಿದ್ದ ಕೂಡಲೇ, ರಾಜ್ಯದಲ್ಲಿರುವ ಹೈವೇ ಆಸುಪಾಸಿನಲ್ಲಿದ್ದ ಬಾರ್, ವೈನ್ ಶಾಪ್ ಗಳ ಲೈನಸ್ಸ್ ಗಳ ರದ್ದು ಅಥವಾ ನವೀಕರಣ ಹಾಗೂ ಸ್ಥಳಾಂತರಕ್ಕೆ ಅನುಮತಿ ವಿಚಾರಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.












Click it and Unblock the Notifications