ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಉತ್ಸವ 2018ರಲ್ಲಿ ದೀಪ, ರೇಷ್ಮೆ ಸೀರೆ, ಮನರಂಜನೆ

|
Google Oneindia Kannada News

ಬೆಂಗಳೂರು ಅಕ್ಟೋಬರ್ 23: ದೀಪಾವಳಿ ಹಬ್ಬದ ಪ್ರಯುಕ್ತ ಒಂದೇ ವೇದಿಕೆಯಡಿಯಲ್ಲಿ ಹಬ್ಬಕ್ಕೆ ಬೇಕಾದ ಎಲ್ಲಾ ವಸ್ತುಗಳನ್ನು ಕೊಂಡುಕೊಳ್ಳಲು ಅವಕಾಶ ನೀಡುವ ಬೆಂಗಳೂರು ಉತ್ಸವ ಅಕ್ಟೋಬರ್ 26 ರಿಂದ ನವೆಂಬರ್ 4 ವರೆಗೆ ಚಿತ್ರಕಲಾ ಪರಿಷತ್ ನಲ್ಲಿ ನಡೆಯಲಿದೆ.

ದೀಪಾವಳಿ ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ದೀಪಗಳ ಬೃಹತ್ ಕಲೆಕ್ಷನ್ ಇಲ್ಲಿ ಇರಲಿದೆ. ದೇಶದ ವಿವಿಧ ಭಾಗಗಳ ಕಲಾಕಾರರು ತಮ್ಮ ಪ್ರದೇಶದಲ್ಲಿ ತಯಾರಿಸುವ ದೀಪಗಳನ್ನು ಇಲ್ಲಿ ಪ್ರದರ್ಶಿಸಲಿದ್ದಾರೆ.

ಬಣ್ಣದ ಚಿತ್ರಗಳ ಸಂತೆಯಲ್ಲಿ ಮಿಂದೆದ್ದ ಉದ್ಯಾನ ನಗರಿಬಣ್ಣದ ಚಿತ್ರಗಳ ಸಂತೆಯಲ್ಲಿ ಮಿಂದೆದ್ದ ಉದ್ಯಾನ ನಗರಿ

ಬೆಂಗಳೂರು ಉತ್ಸವದ ಮೂಲಕ ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ಈ ಮೇಳವು ಹೊಂದಿದೆ.

ಬೆಳಕಿನ ಹಬ್ಬಕ್ಕೆ ಕಡಿಮೆ ಬಜೆಟ್ಟಿನ ವೆರೈಟಿ ಹಣತೆಬೆಳಕಿನ ಹಬ್ಬಕ್ಕೆ ಕಡಿಮೆ ಬಜೆಟ್ಟಿನ ವೆರೈಟಿ ಹಣತೆ

ಮೇಳದ ವಿವರ
ಅಕ್ಟೋಬರ್ 26 ರಿಂದ ನವೆಂಬರ್ 4 2018
ಸಮಯ ಬೆಳಿಗ್ಗೆ 11 ರಿಂದ ಸಂಜೆ 7.30 ಗಂಟೆ

ಬೆಂಗಳೂರು ಉತ್ಸವ-2018 ಮೇಳ

ಬೆಂಗಳೂರು ಉತ್ಸವ-2018 ಮೇಳ

ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಹಬ್ಬವನ್ನು ಗಮನದಲ್ಲಿಟ್ಟುಕೊಂಡು "ಬೆಂಗಳೂರು ಉತ್ಸವ-2018" ಮೇಳವನ್ನು ಅಕ್ಟೋಬರ್ 26 ರಿಂದ ನವೆಂಬರ್ 4 ರ ವರೆಗೆ 11 ದಿವಸಗಳ ಕಾಲ ಚಿತ್ರಕಲಾ ಪರಿಷತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 60 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಕರಕುಶಲ ಉತ್ಪನ್ನಗಳನ್ನು ಬೆಂಗಳೂರು ಜನತೆಯ ಮುಂದೆ ಪ್ರತಿದಿನ ಬೆಳಿಗ್ಗೆ 11 ರಿಂದ ರಾತ್ರಿ 7.30 ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು.

ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು

ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು

ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಅರಿಣಿ ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‍ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್‍ಗಳು ಮತ್ತು ಸೀರೆಗಳು, ಬಾಗಲ್‍ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು,

ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ

ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ

ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡಾರ್‍ಉಳ್ಳ ಮುಲ್‍ಬಾರಿ ಸಿಲ್ಕ್, ಕಲ್ಕೋತ್ತಾ ರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್‍ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ.


ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್‍ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್‍ಗಳು ಮತ್ತು ಬೆಡ್‍ಶೀಟ್‍ಗಳನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು. ಈ ವಸ್ತುಗಳನ್ನು ಉತ್ವಾದಕರೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ.

ಪ್ರತಿ ದಿನ ಸಂಜೆ ಸಂಗೀತ ಮನೋರಂಜನೆ

ಪ್ರತಿ ದಿನ ಸಂಜೆ ಸಂಗೀತ ಮನೋರಂಜನೆ

ಬೆಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಹಾಗೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು 11 ದಿವಸಗಳ ಈ ವಿಶಿಷ್ಟ ಬೆಂಗಳೂರು ಉತ್ಸವ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಉತ್ಪಾದಕರನ್ನು ಪ್ರೋತ್ಸಾಹಿಸಬೇಕೆಂದು ಈ ಮೂಲಕ ಕೋರಲಾಗಿದೆ. ಮೇಳಕ್ಕೆ ಪ್ರವೇಶವನ್ನು ಉಚಿತವಾಗಿ ಕಲ್ಪಿಸಲಾಗಿದೆ. ಅಲ್ಲದೆ ಇದರ ಜೊತೆಗೆ ಪ್ರತಿ ದಿನ ಸಂಜೆ ಸಂಗೀತ ಮನೋರಂಜನೆಯನ್ನು ಆಯೋಜಿಸಲಾಗಿದೆ.

English summary
Karnataka chitrakala parishath has organised sales and exhibition of decorative Diyas, lanterns from October 26th to November 4th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X