ಕೇರಳ ಸಿಎಂಗೆ ಕೃತಜ್ಞತೆ ಸಲ್ಲಿಸಿದ ಯಡಿಯೂರಪ್ಪ

Recommended Video

      ಕೇರಳ ಸಿಎಂಗೆ ಕೃತಜ್ಞತೆ ಸಲ್ಲಿಸಿದ ಯಡಿಯೂರಪ್ಪ | Oneindia Kannada

      ಬೆಂಗಳೂರು, ಫೆಬ್ರವರಿ 18: ಕೇರಳದ ಗಡಿಯಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಕೇರಳದಿಂದ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, "ಕೇರಳದ ಗಡಿಯಲ್ಲಿರುವ ರಾಜ್ಯದ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವ ಮೂಲಕ, ಈ ಸಮಸ್ಯೆಗೆ ಕ್ಷಿಪ್ರವಾಗಿ ಸ್ಪಂದಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಬಯಸುತ್ತೇನೆ ಎಂದಿದ್ದಾರೆ.

      ಕೆಲವು ಮಾಧ್ಯಮಗಳಲ್ಲಿ ಕೇರಳದಿಂದ ಗಡಿಯಲ್ಲಿರುವ ರಾಜ್ಯದ ಜಿಲ್ಲೆಗಳಲ್ಲಿ ತ್ಯಾಜ್ಯ ಎಸೆಯಲಾಗುತ್ತಿದೆ ಎನ್ನುವ ಕುರಿತಾಗಿ ಬಂದಿರುವ ವರದಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

      Karnataka CM B S Yediyurappa Gives Thanks To Kerala CM

      ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ವಸ್ತುಸ್ಥಿತಿಯನ್ನು ಅರಿತು, ನೆರೆಯ ರಾಜ್ಯದಿಂದ ನಮ್ಮ ರಾಜ್ಯದಲ್ಲಿ ತ್ಯಾಜ್ಯ ಸುರಿಯುವ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೇನೆ. ಈ ಜೈವಿಕ-ವೈದ್ಯಕೀಯ ತ್ಯಾಜ್ಯಗಳನ್ನು ಬೆಲ್ಲ ತಯಾರಿಕೆಯಲ್ಲಿ ಇಂಧನವಾಗಿ ಬಳಕೆ ಮಾಡುವುದನ್ನು ತಡೆಗಟ್ಟುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ." ಎಂದು ತಿಳಿಸಿದ್ದಾರೆ.

      ಶೀಘ್ರವೇ ಈ ಅಕ್ರಮವನ್ನು ತಡೆಯಲಾಗುವುದು ಎಂದು ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+