• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಎಂ ಜೊತೆಗೆ ಕೆಲಸ ಮಾಡುವವರಿಗೆ ಸೋಂಕಿಲ್ಲ: ರೇಣುಕಾಚಾರ್ಯ

|

ಬೆಂಗಳೂರು, ಜು. 10: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ನಿತ್ಯ ಕೆಲಸ ಮಾಡುತ್ತಿರುವ ಯಾರಿಗೂ ಕೊರೊನಾ ವೈರಸ್ ಸೋಂಕು ತಗುಲಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ರೇಣುಕಾಚಾರ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.

   Negative ಇದ್ರು Positive ಇದೆ ಬನ್ನಿ ಅಂತಾರೆ ಹುಷಾರ್ | Victoria Hospital | Oneindia Kannada

   ಸಿಎಂ ವಾಹನದ ಹೆಚ್ಚುವರಿ ಚಾಲಕ ಮತ್ತು ಹೆಚ್ಚುವರಿ ಎಸ್ಕಾರ್ಟ್ ವಾಹನದ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸಿಎಂ ಜೊತೆ ನಿತ್ಯ ಕೆಲಸ ಮಾಡುವ ಯಾವ ವ್ಯಕ್ತಿಗೆ ಯಾರಿಗೂ ಸೋಂಕು ಕಂಡು ಬಂದಿಲ್ಲ. ಮುಖ್ಯಮಂತ್ರಿಗಳು ಎಂದಿನಂತೆ ಲವಲವಕೆಯಿಂದ ಅರೋಗ್ಯವಾಗಿದ್ದಾರೆ. ಬೆಳಗ್ಗೆ ಎಂದಿನಂತೆ ವಾಕಿಂಗ್ ಮಾಡಿದ್ದಾರೆ. ನಾನು ಅವರ ಜೊತೆ 40 ನಿಮಿಷಗಳ ಕಾಲ‌ ಮಾತನಾಡಿ ಬಂದಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

   ಸೋಂಕಿತರನ್ನು ಬೀದಿಯಲ್ಲಿ ಬಿಟ್ಟ ಬಿಬಿಎಂಪಿ: ದಿನೇಶ್ ಗುಂಡೂರಾವ್ ಪತ್ನಿ ತೀವ್ರ ಅಸಮಾಧಾನ

   ಸಿಎಂ ಸಚಿವಾಲಯದ ಸ್ಪಷ್ಟನೆ: ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. ವೀಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

   English summary
   Karnataka CM B S Yediyurappa Goes Into Self Quarantine From Today And Says He Will Work From Home
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X