• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದ ಸಿಎಂ

|
Google Oneindia Kannada News

ಬೆಂಗಳೂರು, ನವೆಂಬರ್‌ 21: "ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಎ.ಸಿ. ಬಿ ವರದಿ ಸಲ್ಲಿಸಿದ ನಂತರ ಶಿಫಾರಸ್ಸುಗಳನ್ನು ಚಾಚೂತಪ್ಪದೆ ಪಾಲಿಸಲಾಗುವುದು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಬಿಡಿಎ ಅಕ್ರಮಗಳ ಕುರಿತು ಸಾರ್ವಜನಿಕರಿಂದಲೂ ನಮಗೆ ದೂರುಗಳು ಬಂದಿದ್ದವು. ಎಸ್. ಆರ್. ವಿಶ್ವನಾಥ ಅವರೂ ಸಹ ಈ ಬಗ್ಗೆ ನನ್ನ ಗಮನ ಸೆಳೆದಿದ್ದರು. ಸಂಬಂಧಪಟ್ಟ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿತ್ತು. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿರಲಿ, ಅಧಿಕಾರಿಗಳಿರಲಿ, ಅವರ ವಿರುದ್ಧ ನಾವು ಕ್ರಮ ಜರುಗಿಸುತ್ತೇವೆ," ಎಂದು ಭರವಸೆ ನೀಡಿದರು.

ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ, ಕಾರಿನಲ್ಲಿ ಸಿಕ್ತು ದಾಖಲೆಗಳು!ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ, ಕಾರಿನಲ್ಲಿ ಸಿಕ್ತು ದಾಖಲೆಗಳು!

"ಬಿಡಿಎ ಸ್ವಚ್ಛಗೊಳಿಸಬೇಕು. ಸಾಮಾನ್ಯ ಜನರಿಗೆ ಅಗತ್ಯವಿರುವ ಸೇವೆಗಳನ್ನು ದೊರಕಿಸುವ ದೃಷ್ಟಿಯಿಂದ ಬಿಡಿಎ ಸ್ವಚ್ಛಗೊಳಿಸಬೇಕಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ನಾವು ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲಾರೆವು," ಎಂದು ತಿಳಿಸಿದರು.

ಬೆಳೆಹಾನಿಗೆ ಪರಿಹಾರ ನೀಡಲಾಗುವುದು" ಸಿಎಂ ಭರವಸೆ

"ಅನಿರೀಕ್ಷಿತ, ಅಕಾಲಿಕವಾಗಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಒಳನಾಡಿನಲ್ಲಿ, ಉತ್ತರ ಹಾಗೂ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ 3 ದಿನಗಳಲ್ಲಿ ಒಳನಾಡಿನಲ್ಲಿ ಹೆಚ್ವಿನ ಮಳೆಯಾಗಿ ಬೆಳೆ ಹಾನಿಯಾಗಿದೆ. ಹಲವಾರು ಸಂಪರ್ಕ ರಸ್ತೆ, ಕೆಲವೆಡೆ ಸಾವುಗಳಾಗಿರುವುದು ಸಮೀಕ್ಷೆಯ ವರದಿಯಲ್ಲಿ ಉಲ್ಲೇಖವಾಗಿದೆ," ಎಂದು ಕೂಡಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದರು.

"ಜುಲೈ, ಆಗಸ್ಟ್, ಸೆಪ್ಟೆಂಬರ್ ಮಾಹೆಗಳಲ್ಲಿ ಸುಮಾರು 3 ಲಕ್ಷ ರೈತರ ಬೆಳೆಹಾನಿಯಾಗಿದ್ದರಿಂದ ಪರಿಹಾರ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಬಾಕಿಯಿದ್ದ 130 ಕೋಟಿ ರೂ.ಗಳನ್ನು ಡಿ.ಬಿ.ಟಿ ಮೂಲಕ ವಿತರಿಸಲು ಸೂಚಿಸಲಾಗಿದೆ," ಎಂದರು.

ಮನೆ ಕಟ್ಟಲು ಎರಡು ಲಕ್ಷ ರೂ. ಲಂಚ ಪಡೆದು ಜೈಲಿಗೆ ಹೋದ ಬಿಡಿಎ ಇಂಜಿನಿಯರ್!ಮನೆ ಕಟ್ಟಲು ಎರಡು ಲಕ್ಷ ರೂ. ಲಂಚ ಪಡೆದು ಜೈಲಿಗೆ ಹೋದ ಬಿಡಿಎ ಇಂಜಿನಿಯರ್!

"ಮೊನ್ನೆ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೊ ಸಂವಾದದಲ್ಲಿ ಸಮೀಕ್ಷೆಯ ವರದಿಯನ್ನು ಕೂಡಲೇ ಸಲ್ಲಿಸಲು ಸೂಚಿಸಲಾಗಿದೆ. ನಿರಂತರ ಮಳೆಯಿಂದಾಗಿ ಸಮೀಕ್ಷೆ ನಡೆಸುವುದೂ ಕಷ್ಟವಾಗಿದೆ. ಮಳೆ ತಗ್ಗಿರುವ ಪ್ರದೇಶಗಳಲ್ಲಿ ಪ್ರಾಥಮಿಕ ಸಮೀಕ್ಷೆ ಕೈಗೊಳ್ಳಲು ಸೂಚಿಸಿದ್ದು, ಈಗಾಗಲೇ ಕೆಲವೆಡೆ ಸಮೀಕ್ಷೆಗಳು ಪ್ರಾರಂಭವಾಗಿದೆ. ಪರಿಹಾರ ಪೋರ್ಟಲ್‌ನಲ್ಲಿ ಮಾಹಿತಿ ಅಪ್‌ಲೋಡ್ ಆಗುತ್ತಿದೆ. ಇಂದು ಸಂಜೆ ವರದಿಗಳನ್ನು ಪುನರ್ ಪರಿಶೀಲಿಸಿ, ನೆರವು ನೀಡುವ ಬಗ್ಗೆ ಹಿರಿಯ ಅಧಿಕಾಗಳೊಂದಿಗೆ ಚರ್ಚೆ ಮಾಡಿ ಪರಿಹಾರ ಘೋಷಣೆ ಮಾಡಲಾಗುವುದು," ಎಂದರು. "ಹಲವಾರು ಸಚಿವರು ಆಯಾ ಜಿಲ್ಲೆಗಳಲ್ಲಿ ಇದ್ದು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಅನುಮತಿ ಪಡೆಯುವ ಅಗತ್ಯವಿದೆ. ಈ ಬಗ್ಗೆ ಆಯೋಗಕ್ಕೆ ಪತ್ರವನ್ನು ಬರೆಯಲಾಗುತ್ತಿದೆ," ಎಂದರು.

ನಗರ ಪ್ರದಕ್ಷಿಣೆ ಬಗ್ಗೆ ಸಿಎಂ ಪ್ರತಿಕ್ರಿಯೆ

ನಗರ ಪ್ರದಕ್ಷಿಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹೆಚ್.ಎಸ್.ಆರ್ ಬಡಾವಣೆ, ರಾಜರಾಜೇಶ್ವರಿ ನಗರ, ಮಡಿವಾಳ ಕೋರಮಂಗಲಗಳಿಗೆ ಈಗಾಗಲೇ ಭೇಟಿ ನೀಡಿದ್ದು, ಬೆಂಗಳೂರಿನ ಬಗ್ಗೆ ಖಂಡಿತವಾಗಿ ಸರ್ಕಾರಕ್ಕೆ ಕಾಳಜಿ ಇದೆ. ಮಳೆ ನಿಂತ ಕೂಡಲೇ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಿದೆ ಎಂದರು.

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಂಡ ಬೆಂಗಳೂರಿನ ಬಿಡಿಎ ಕೇಂದ್ರ ಕಚೇರಿ ಮೇಲೆ ದಾಳಿ ಮಾಡಿದೆ. ಸುಮಾರು 60 ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ 3 ಎಸ್‌ಪಿ, 5 ಡಿವೈಎಸ್‌ಪಿ, 12 ಇನ್ಸ್‌ಪೆಕ್ಟರ್‌ಗಳನ್ನು ಒಳಗೊಂಡ 60ಕ್ಕೂ ಹೆಚ್ಚು ಅಧಿಕಾರಿಗಳು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದೆ. ಹಲವಾರು ಗಂಟೆಗಳ ಕಾಲ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿತ್ತು.

   ಕಡೇ ಓವರ್ನಲ್ಲಿ Deepak chahar ಸಿಡಿಸಿದ್ದು ಎಷ್ಟು ಗೊತ್ತಾ | Oneindia Kannada

   (ಒನ್‌ಇಂಡಿಯಾ ಸುದ್ದಿ)

   English summary
   Karnataka CM Basavaraj Bommai Reaction Over BDA Corruption.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X