ರಾಜಕೀಯ ಜೀವನದಲ್ಲಿ ಮೊದಲ ಬಾರಿ ಈಶ್ವರಪ್ಪ ಒಳ್ಳೆಯ ಕೆಲಸ ಮಾಡಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 1: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ಸಚಿವ ಕೆ.ಎಸ್ ಈಶ್ವರಪ್ಪ ಲಿಖಿತ ದೂರು ನೀಡಿರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ.

ಕೆ.ಎಸ್ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಚಿವ ಕೆ.ಎಸ್ ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ, ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಈಶ್ವರಪ್ಪನವರ ಬಾಯಿ ಮುಚ್ಚಿಸಲು ಯತ್ನಿಸಬಾರದು
ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ಧಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಬಿಜೆಪಿ ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡವಾಗಿದೆ. ಬಿಜೆಪಿ ರಾಷ್ಟ್ರೀಯ ವರಿಷ್ಠರು ಈಶ್ವರಪ್ಪನವರ ಬಾಯಿ ಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದಿದ್ದಾರೆ.

ಬಿಜೆಪಿಯ ಭ್ರಷ್ಟಾಚಾರದ ವೈರಸ್
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಬಿಜೆಪಿ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ ಮೂಲಕ ಬಹಿರಂಗಗೊಳಿಸಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಬಿಜೆಪಿ ಸರ್ಕಾರದ ಜಾತಕ ಪತ್ರವನ್ನು ಪರಿಶೀಲಿಸಿ, ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಗಿ ಹೇಳಿದ್ದಾರೆ.
Recommended Video

ನಾನು ತಿನ್ನುತ್ತೇನೆ, ನೀವೂ ತಿನ್ನಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, "ನಾ ಖಾವುಂಗಾ, ನಾ ಖಾನೆ ದೂಂಗಾ' (ನಾನು ತಿನ್ನುವುದಿಲ್ಲ, ಬೇರೆಯವರನ್ನು ತಿನ್ನಲು ಬಿಡುವುದಿಲ್ಲ) ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು "ಮೈ ಬಿ ಖಾವೂಂಗಾ, ತುಮ್ ಬಿ ಖಾವೋ'( ನಾನು ತಿನ್ನುತ್ತೇನೆ, ನೀವೂ ತಿನ್ನಿ) ಎಂದು ಬದಲಿಸಿ ಬಿಡಿ ಎಂದು ಟೀಕಿಸಿದ್ದಾರೆ. ಆಪರೇಷನ್ ಕಮಲ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಸರ್ಕಾರ "ಆಪರೇಷನ್ ಕಮಲ' ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications