ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಕೀಯ ಜೀವನದಲ್ಲಿ ಮೊದಲ ಬಾರಿ ಈಶ್ವರಪ್ಪ ಒಳ್ಳೆಯ ಕೆಲಸ ಮಾಡಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 1: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ಸಚಿವ ಕೆ.ಎಸ್ ಈಶ್ವರಪ್ಪ ಲಿಖಿತ ದೂರು ನೀಡಿರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ.

ಕೆ.ಎಸ್ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ

ಕೆ.ಎಸ್ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವ ಕೆ.ಎಸ್ ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ, ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಈಶ್ವರಪ್ಪನವರ ಬಾಯಿ ಮುಚ್ಚಿಸಲು ಯತ್ನಿಸಬಾರದು

ಈಶ್ವರಪ್ಪನವರ ಬಾಯಿ ಮುಚ್ಚಿಸಲು ಯತ್ನಿಸಬಾರದು

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ಧಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಬಿಜೆಪಿ ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡವಾಗಿದೆ. ಬಿಜೆಪಿ ರಾಷ್ಟ್ರೀಯ ವರಿಷ್ಠರು ಈಶ್ವರಪ್ಪನವರ ಬಾಯಿ ಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದಿದ್ದಾರೆ.

ಬಿಜೆಪಿಯ ಭ್ರಷ್ಟಾಚಾರದ ವೈರಸ್

ಬಿಜೆಪಿಯ ಭ್ರಷ್ಟಾಚಾರದ ವೈರಸ್

ರಾಜ್ಯ ಸರ್ಕಾರದ‌ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಬಿಜೆಪಿ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ‌ ಮೂಲಕ ಬಹಿರಂಗಗೊಳಿಸಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಬಿಜೆಪಿ ಸರ್ಕಾರದ ಜಾತಕ ಪತ್ರವನ್ನು ಪರಿಶೀಲಿಸಿ, ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಗಿ ಹೇಳಿದ್ದಾರೆ.

Recommended Video

ಇವರ ಕೆಟ್ಟ ಆಡಳಿತದ ವಿರುದ್ಧ ನಾವು ಹೋರಾಟ ಮಾಡ್ತೀವಿ ! | DK Shivakumar | Oneindia Kannada
ನಾನು ತಿನ್ನುತ್ತೇನೆ, ನೀವೂ ತಿನ್ನಿ

ನಾನು ತಿನ್ನುತ್ತೇನೆ, ನೀವೂ ತಿನ್ನಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, "ನಾ ಖಾವುಂಗಾ, ನಾ ಖಾನೆ ದೂಂಗಾ' (ನಾನು ತಿನ್ನುವುದಿಲ್ಲ, ಬೇರೆಯವರನ್ನು ತಿನ್ನಲು ಬಿಡುವುದಿಲ್ಲ) ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು "ಮೈ ಬಿ ಖಾವೂಂಗಾ, ತುಮ್ ಬಿ ಖಾವೋ'( ನಾನು ತಿನ್ನುತ್ತೇನೆ, ನೀವೂ ತಿನ್ನಿ) ಎಂದು ಬದಲಿಸಿ ಬಿಡಿ ಎಂದು ಟೀಕಿಸಿದ್ದಾರೆ. ಆಪರೇಷನ್ ಕಮಲ‌ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಸರ್ಕಾರ "ಆಪರೇಷನ್ ಕಮಲ' ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

English summary
Former CM Siddaramaiah has tweeted about Minister KS Eshwarappa's written complaint to the governor that CM Yediyurappa is interfering in the Rural Development and Panchayat Raj department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X