ಅನಿರೀಕ್ಷಿತವಾಗಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು.

ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ , ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.

Karnataka CM Siddaramaiah Meets Former PM HD Deve Gowda at Bengaluru Airport

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ರಾಜಕಾರಣಿ ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರ ನಾಯಕರು ಬೀಳ್ಕೊಟ್ಟರು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಎನ್‌ಡಿಎ ಸೇರಿದ ಜೆಡಿಎಸ್

ಕಳೆದ ತಿಂಗಳು ದೇವೇಗೌಡರ ಜೆಡಿಎಸ್ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಗೆ ಸೇರ್ಪಡೆಗೊಂಡ ನಂತರ ಉಭಯ ನಾಯಕರು ಮೊದಲ ಬಾರಿಗೆ ಭೇಟಿಯಾದರು. ಆದರೂ ಭೇಟಿಯಲ್ಲಿ ಯಾವುದೇ ರಾಜಕೀಯ ವಿಚಾರವನ್ನು ಇಬ್ಬರೂ ಮಾತನಾಡಲಿಲ್ಲ. ಕಾಂಗ್ರೆಸ್‌ ಸೇರುವ ಮೊದಲ ಸಿದ್ದರಾಮಯ್ಯ ಅವರು ಜೆಡಿಎಸ್‌ ನಾಯಕರಾಗಿದ್ದರು ಎನ್ನುವುದು ಗಮನಾರ್ಹ ಸಂಗತಿಯಾಗಿದೆ.

ಸಿದ್ದರಾಮಯ್ಯ ಅವರು ಕಾವೇರಿ ನೀರು ಹಂಚಿಕೆ ಸಮಸ್ಯೆ ಕುರಿತು ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇರುವ ಕಾರಣ ತಮಿಳುನಾಡಿಗೆ ನೀರು ಹಂಚಿಕೆ ಸಾಧ್ಯವಿಲ್ಲ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ಮುಂದೆ ವಾದ ಮಾಡಲಿದ್ದಾರೆ. ರಾಜ್ಯದ ಜನತೆಯ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+