ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್‌ಡೌನ್ ಯಶಸ್ವಿ ಎಂದು ತೋರಿಸಲು ಪರೀಕ್ಷೆ ಪ್ರಮಾಣ ಕಡಿತ ಸರಿಯಲ್ಲ: ಡಿಕೆ ಶಿವಕುಮಾರ್

|
Google Oneindia Kannada News

ಬೆಂಗಳೂರು, ಮೇ 15: ಲಾಕ್‌ಡೌನ್ ಯಶಸ್ವಿ ಎಂದು ತೋರಿಸಲು ಕೋವಿಡ್ ಪರೀಕ್ಷೆ ಪ್ರಮಾಣವನ್ನು ಕಡಿತಗೊಳಿಸಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಲಾಕ್‌ಡೌನ್ ಯಶಸ್ವಿ ಎಂದು ತೋರಿಸಲು ಕೋವಿಡ್ ಪರೀಕ್ಷೆ ಪ್ರಮಾಣ ಕಡಿತಗೊಳಿಸಿ, ಸೋಂಕಿತರ ಸಂಖ್ಯೆ ಕಡಿಮೆ ತೋರಿಸುವ ಜೀವ ವಿರೋಧಿ ತಂತ್ರಕ್ಕೆ ಇಳಿದಿದೆ.

ಬಿಜೆಪಿ ಸರ್ಕಾರ ಶೇ. 50 ರಷ್ಟು ಪರೀಕ್ಷೆಗಳನ್ನು ಕಡಿಮೆ ಮಾಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ನಿರ್ದೇಶನ ನೀಡಿದೆ. ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆ ತೋರಿಸುವುದು ಇದರ ಉದ್ದೇಶವಾಗಿದೆ ಎಂದರು.

ಕರ್ನಾಟಕ: ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ಸುಮಾರು 600 ಮಂದಿ ಕೊರೊನಾ ಸೋಂಕಿತರು ಸಾವುಕರ್ನಾಟಕ: ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ಸುಮಾರು 600 ಮಂದಿ ಕೊರೊನಾ ಸೋಂಕಿತರು ಸಾವು

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಸಂಖ್ಯೆ ಕಡಿಮೆ ತೋರಿಸಲು ಪರೀಕ್ಷೆ ಪ್ರಮಾಣ ಕಡಿಮೆ ಮಾಡಿರುವುದು ಸರಿಯಲ್ಲ. ಇದು ಸರ್ಕಾರವೇ ಜನರನ್ನು ಹತ್ಯೆ ಮಾಡುವ ನಿರ್ಧಾರ. ಜನರ ಸಾವಿಗೆ ಸರ್ಕಾರವೇ ನೇರ ಕಾರಣವಾಗುತ್ತದೆ ಎಂದು ನುಡಿದರು.

Karnataka Congress Alleged That State Government Hiding Covid Deaths And Numbers

ಸರ್ಕಾರ ಜೀವ ಉಳಿಸಲು ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ನಾವು ಸಹಕಾರ ನೀಡುತ್ತೇವೆ. ಆದರೆ ಮಾಡಿದ ತಪ್ಪನ್ನು ಒಪ್ಪಿಕೊಳ್ಳದೇ ನಾವು ಮಾಡಿದ್ದೆ ಸರಿ ಎನ್ನುವುದಾದರೆ ನಾವು ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ

ಸರ್ಕಾರದ ಕಾರ್ಯವೈಖರಿ ಬಗ್ಗೆ ನ್ಯಾಯಾಧೀಶರು ಏನೆಲ್ಲಾ ಹೇಳುತ್ತಿದ್ದಾರೆ, ಮಾಧ್ಯಮಗಳು ಏನು ವರದಿ ಮಾಡುತ್ತಿವೆ, ಜನ ಸಾಮಾನ್ಯರು ಏನು ಮಾತನಾಡುತ್ತಿದ್ದಾರೆ ಎಂಬುದನ್ನು ಸರಕಾರ ಗಮನಿಸಬೇಕು‌.

Recommended Video

ನಿಮಗೆ ಆ ದೇವರು ಹೆಚ್ಚಿನ ಆರೋಗ್ಯ ಕೊಡಲಿ ಎಂದ ಬಾಲಿವುಡ್ ನಟ | Oneindia Kannada

ಮಂತ್ರಿಗಳು ಈಗ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಕೆಲಸ ಮಾಡಿ ಎಂದು ನಾನು ಕಳೆದ ತಿಂಗಳ 18 ರಂದೇ ಹೇಳಿದ್ದೆ. ವಿರೋಧ ಪಕ್ಷದವರು ಹೇಳಿದ್ದನ್ನು ಮಾಡಲು ಈ ಸರ್ಕಾರ ಬೇಕಾ? ಇವರ ಕೈಯಲ್ಲಿ ಇದನ್ನು ನಿಭಾಯಿಸಲು ಸಾಧ್ಯವಿಲ್ಲ. ಇವರು ಮನೆಗೆ ಹೋಗಿ, ರಾಜ್ಯಪಾಲರ ಆಡಳಿತ ಬರುವುದೇ ಉತ್ತಮ.

English summary
KPCC President DK Shivakumar alleged that State Government Hiding Covid Deaths And Corona Numbers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X