ಕರ್ನಾಟಕ: 4 IPS ಅಧಿಕಾರಿ ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶ
ಬೆಂಗಳೂರು, ಜೂನ್ 08: ಕರ್ನಾಟಕ ರಾಜ್ಯ ಸರ್ಕಾರ ನಾಲ್ವರು ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಯಾವ ಅಧಿಕಾರಿಗಳು ಯಾವ ಸ್ಥಾನಕ್ಕೆ ವರ್ಗಾವಣೆ ಆಗಿದ್ದಾರೆಂಬ ಪೂರ್ಣ ವಿವರ ಇಲ್ಲಿ ತಿಳಿಯಿರಿ.
1994 ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ್ ಅವರು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ADGP) ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ತಕ್ಷಣದಿಂದಲೇ ಜರಿಗೆ ಬರುವಂತೆ ಬೆಂಗಳೂರು ನಗರ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಆರ್ ಹಿತೇಂದ್ರ ಅವರು 1996ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಅವರು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳು ವಿಭಾಗದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರನ್ನು ರಾಜ್ಯ ಸರ್ಕಾರ ಈ ಕ್ಷಣದಿಂದ ಅನ್ವಯವಗುವಂತೆ ಕಾನೂನು ಮತ್ತು ಸುವ್ಯವಸ್ಥೆ ಬೆಂಗಳೂರು ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾಯಿಸಿದೆ.
ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ 1995ರ ಐಪಿಎಸ್ ಬ್ಯಾಚ್ ಆಗಿದ್ದ ಉಮೇಶ್ ಕುಮಾರ್ ಅವರನ್ನು ಮುಂದಿನ ಆದೇಶದವರೆಗೆ ರಾಜ್ಯ ಸರ್ಕಾರ ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳು ವಿಭಾಗ ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸೌಮೇಂದು ಮುಖರ್ಜಿ ಇವರು (1998ರ ಬ್ಯಾಚ್) ಬೆಂಗಳೂರಿನ ಪೊಲೀಸ್ ಕಂಪ್ಯೂಟರ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಆಡಳಿತ, ಬೆಂಗಳೂರು ವೈಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.












Click it and Unblock the Notifications