Govt Employee Suicide: ಅಧಿಕಾರಿ ಆತ್ಮಹತ್ಯೆಗೆ ಕೊಲೆಗಡುಕ ಸರ್ಕಾರವೇ ಕಾರಣ, ಆಪ್ತರನ್ನು ರಕ್ಷಿಸಬೇಡಿ: ಬಿಜೆಪಿ
ಬೆಂಗಳೂರು, ಮೇ 27: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಬೃಹತ್ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. 187 ಕೋಟಿ ರೂ. ಭ್ರಷ್ಟಾಚಾರ, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯ ಸಾವಿಗೆ ಈ ಕೊಲೆಗಡುಕ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರಣ ಎಂದು ವಿಪಕ್ಷಗಳು ಮತ್ತು ವಿಪಕ್ಷ ನಾಯಕರು ದೂರಿದ್ದಾರೆ.
ಬೃಹತ್ ಭ್ರಷ್ಟಾಚಾರ ಆರೋಪ ವಿರುದ್ಧ ಕಿಡಿ ಕಾರಿರುವ ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಟ್ವೀಟ್ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿಯ ತಲೆಗೆ ಕಟ್ಟಲು ಪ್ರಯತ್ನ ನಡೆದಿದೆ. ಈ ಸಂಬಂಧ ಅಧಿಕಾರಿಗಲು ಕಿರುಕುಳ ನೀಡಿದ್ದರಿಂದ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವುದೇ ಈ ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಎಂದು ಅವರು ಜರಿದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಯ್ಯ ಅವರೇ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಎಂದು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.
11,000 ಕೋಟಿ ರೂ. ಲಪಟಾಯಿಸಿದ ಸರ್ಕಾರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂಪಾಯಿ ಎಸ್ ಸಿಎಸ್ ಪಿ/ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿಎಣ್ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಕೂಡಲೇ ಈ ಸಾವಿನ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ಎಂದು ಅವರು ಆಗ್ರಹಿಸಿದರು.
ಪ್ರಕರಣ ಕುರಿತು ಕೇವಲ ಆರ್. ಅಶೋಕ್ ಮಾತ್ರವಲ್ಲ ರಾಜ್ಯ ಬಿಜೆಪಿ ಪಕ್ಷದ ನಾಯಕರು, ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆಪಾದಿಸಿದ್ದಾರೆ.
ಆಪ್ತರನ್ನು ರಕ್ಷಿಸಿದಂತೆ ಸಿಎಂಗೆ ಬಿಜೆಪಿ ಆಗ್ರಹ
ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕರ್ನಾಟಕ ಸರ್ಕಾರ ಲೂಟಿ ಹೊಡೆಯುವ ಜೊತೆಗೆ ಅಧಿಕಾರಿಗಳ ಜೀವ ಬಲಿ ಪಡೆಯುತ್ತಿದೆ. ₹187 ಕೋಟಿ ಹಗರಣ ಸಂಬಂಧ ಅಧಿಕಾರಿಯು ಸಚಿವರ ಎಚ್‌ಸಿ ಮಹಾದೇವಪ್ಪ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ.
ಹಗರಣದ ಪ್ರಮುಖ ರೂವಾರಿ ಆಗಿರುವ ಸಚಿವ ಹೆಚ್. ಸಿ. ಮಹದೇವಪ್ಪ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು. ಹಾಗೂ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತರೆಂದು ರಕ್ಷಣೆ ಮಾಡುವ ಬದಲು ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ಬಿಜೆಪಿ ಆಗ್ರಹಿಸಿದೆ.












Click it and Unblock the Notifications