ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಮೆಟ್ರೋ, ಬಿಎಂಟಿಸಿಯಲ್ಲಿ ನಿಂತು ಪ್ರಯಾಣಿಸುವಂತಿಲ್ಲ!

|
Google Oneindia Kannada News

ಬೆಂಗಳೂರು, ಜನವರಿ 4: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಬಸ್‌ಗಳಲ್ಲಿ ಆಸನಗಳನ್ನು ಮೀರಿ ಪ್ರಯಾಣಿಕರು ಪ್ರಯಾಣಿಸುವುದಕ್ಕೆ ಯಾವುದೇ ಅನುಮತಿಯಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಿಎಟಿಸಿ ಬಸ್‌ಗಳಲ್ಲಿ ನಿಂತು ಪ್ರಯಾಣಿಸುವುದಕ್ಕೆ ಇನ್ನು ಮುಂದೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸಹಿತ ಹಲವು ಅಧಿಕಾರಿಗಳು ಭಾಗವಹಿಸಿದ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಕಂದಾಯ ಸಚಿವ ಆರ್ ಅಶೋಕ್ ಹಾಗೂ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ, ಬಿಎಂಟಿಸಿ ಬಸ್‌ಗಳಲ್ಲಿ ಎಷ್ಟು ಆಸನಗಳಿವೆಯೋ ಅಷ್ಟೇ ಜನರ ಪ್ರಯಾಣಕ್ಕೆ ಮಾತ್ರ ಅವಕಾಶವನ್ನು ನೀಡಬೇಕು.

Karnataka Covid-19 Rules; Standing Travel Not Allowed in Metro And BMTC Buses

ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ:

ಸಿಲಿಕಾನ್ ಸಿಟಿಯಲ್ಲಿ ಜನರ ಸಂಚಾರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ನಿಂತು ಪ್ರಯಾಣಿಸಲು ಅನುಮತಿ ಇರುವುದಿಲ್ಲ. ಈ ಕುರಿತು ಮೆಟ್ರೊ ನಿಗಮದಿಂದ ಅಧಿಕೃತ ಮಾಹಿತಿ ಪ್ರಕಟವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಾರಾಂತ್ಯದ ನಿಷೇಧಾಜ್ಞೆ ವೇಳೆ ಏನಿರುತ್ತೆ?:

* ಪಬ್‌ಗಳು / ಕ್ಲಬ್‌ಗಳು / ರೆಸ್ಟೋರೆಂಟ್‌ಗಳು / ಬಾರ್‌ಗಳು / ಹೋಟೆಲ್‌ಗಳು/ ಹೋಟೆಲ್‌ಗಳಲ್ಲಿ ತಿನ್ನುವ ಸ್ಥಳಗಳು ಇತ್ಯಾದಿ, ಆಸನ ಸಾಮರ್ಥ್ಯದ ಶೇ 50ರಷ್ಟು ಕೊವಿಡ್ ಸೂಕ್ತ ನಡವಳಿಕೆಗೆ ಕಟ್ಟುನಿಟ್ಟಾಗಿ ಬದ್ಧವಾಗಿರುತ್ತವೆ. ಅಂತಹ ಸ್ಥಳಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ನಿರ್ಬಂಧಿಸಲಾಗುತ್ತದೆ.

* ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ತುರ್ತು ಉದ್ದೇಶಗಳಿಗಾಗಿ ಜನರ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮಾತ್ರ BMRCL ಕಾರ್ಯ ನಿರ್ವಹಣೆ

ವಾರಾಂತ್ಯದ ನಿಷೇಧಾಜ್ಞೆ ವೇಳೆ ಏನಿರಲ್ಲ?:

* ಬೆಂಗಳೂರು ನಗರ ಜಿಲ್ಲೆಯಲ್ಲಿ ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹೊರತುಪಡಿಸಿ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳು 06-01-2022 ರಿಂದ ಜಾರಿಗೆ ಬರುವಂತೆ 10, 11 ಮತ್ತು 12 ನೇ ತರಗತಿಗಳನ್ನು ಹೊರತುಪಡಿಸಿ ಎಲ್ಲಾ ಶಾಲಾ-ಕಾಲೇಜುಗಳು ಮುಚ್ಚಲ್ಪಡುತ್ತವೆ.

* ಸಿನಿಮಾ ಹಾಲ್‌ಗಳು / ಮಲ್ಟಿಪ್ಲೆಕ್ಸ್‌ಗಳು / ಥಿಯೇಟರ್‌ಗಳು / ರಂಗಮಂದಿರಗಳು / ಆಡಿಟೋರಿಯಂ ಮತ್ತು ಅದರ ಆಸನ ಸಾಮರ್ಥ್ಯದ 50% ರಷ್ಟು ಕಾರ್ಯನಿರ್ವಹಿಸಲು ಕೋವಿಡ್ ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಅಂತಹ ಸ್ಥಳಗಳಲ್ಲಿ ಸಂಪೂರ್ಣ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಪ್ರವೇಶಕ್ಕೆ ಅನುಮತಿಸಲಾಗುತ್ತದೆ.

* ಬೆಂಗಳೂರು ನಗರ ಜಿಲ್ಲೆಯಲ್ಲಿ ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹೊರತುಪಡಿಸಿ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳು 06-01-2022 ರಿಂದ ಜಾರಿಗೆ ಬರುವಂತೆ 10, 11 ಮತ್ತು 12 ನೇ ತರಗತಿಗಳನ್ನು ಹೊರತುಪಡಿಸಿ ಎಲ್ಲಾ ಶಾಲಾ-ಕಾಲೇಜುಗಳು ಮುಚ್ಚಲ್ಪಡುತ್ತವೆ.

* ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಎಲ್ಲಾ ಅದ್ವಿತೀಯ ಅಂಗಡಿಗಳು ಮತ್ತು ಸಂಸ್ಥೆಗಳು ವಾರದ ದಿನಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ವಾರಾಂತ್ಯದಲ್ಲಿ ಅನುಮತಿ ಇರುವುದಿಲ್ಲ.

* ಎಲ್ಲಾ ರ್‍ಯಾಲಿಗಳು, ಧರಣಿಗಳು, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.

Recommended Video

ತಜ್ಞರ ಜೊತೆ ಮಹತ್ವದ ಸಭೆ ಮಾಡಲಿರುವ ಮುಖ್ಯ ಮಂತ್ರಿ! | Oneindia Kannada

English summary
Karnataka Covid-19 Rules; Standing Travel Not Allowed in Metro And BMTC Buses.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X