ಕರ್ನಾಟಕದಲ್ಲಿ ಮತ್ತೆ ಹೆಚ್ಚಾಯ್ತು ಕೊರೊನಾ: ಒಂದೇ ವಾರದಲ್ಲಿ 81 ಜನರಿಗೆ ಸೋಂಕು ದೃಢ

ಬೆಂಗಳೂರು, ಡಿಸೆಂಬರ್‌ 19: ಕೇರಳದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇರಳ-ಕರ್ನಾಟಕ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದರೂ ಕೂಡ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕೋವಿಡ್ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿ ಜ್ವರ, ಶೀತ ಹಾಗೂ ಕೆಮ್ಮುವಿನಿಂದ ಬಳಲುವವರ ಸಂಖ್ಯೆ ಹೆಚ್ಚಾದ ಕಾರಣ ಮತ್ತೆ ಕೊರೊನಾ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಕಳೆದ ಒಂದು ವಾರದಲ್ಲಿ 2,619 ಜನರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ಒಂದು ವಾರದಲ್ಲಿ 81 ಜನರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಒಂದು ವಾರದಲ್ಲಿ 81 ಪ್ರಕರಣಗಳು ಪತ್ತೆಯಾಗಿದೆ ಎಂದು ಪ್ರಜಾವಾಣಿ ಪತ್ರಿಕೆ ವರದಿ ಮಾಡಿದೆ.

Karnataka Covid Update: 81 People Were Infected With Coronavirus In A Single Week

ಕಳೆದ ವರ್ಷಕ್ಕಿಂತ ಅಂದರೆ 2022ಕ್ಕಿಂತ 2023ರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ರಾಜ್ಯದಲ್ಲಿ ಜನವರಿ 1ರಿಂದ ಈವರೆಗೆ 15,60,681 ಜನರನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ಪೈಕಿ 17, 044 ಮಂದಿಗೆ ಕೋವಿಡ್ ದೃಢಪಟ್ಟಿದೆ ಆರೋಗ್ಯ ಇಲಾಖೆ ತಿಳಿಸಿದೆ. ಸದ್ಯ 156 ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮುಂದಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಇಂದು (ಡಿಸೆಂಬರ್ 19) ರಾಜ್ಯ ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯ ಸಭೆ ಕರೆದಿದ್ದಾರೆ. ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು ಕೊರೊನಾ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಆತಂಕದ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌

ಕೇರಳದಲ್ಲಿ ಕೊರೊನಾ ಅಟ್ಟಹಾಸ

ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ದೇಶದಲ್ಲಿನ ಶೇಕಡಾ 90ಕ್ಕಿಂತ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ಕೇರಳದಲ್ಲೇ ದಾಖಲಾಗುತ್ತಿವೆ. ಕೇರಳದಲ್ಲಿ ಕಳೆದ ನವೆಂಬರ್ ಇಡೀ ತಿಂಗಳಲ್ಲಿ ಒಟ್ಟು 479 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಓರ್ವ ಸೋಂಕಿತ ಮೃತಪಟ್ಟಿದ್ದಾರೆ. ಆದರೆ ಡಿಸೆಂಬರ್ ತಿಂಗಳ ಮೊದಲ ಎರಡು ವಾರಗಳಲ್ಲಿ ಬರೋಬ್ಬರಿ ಒಂದು ಸಾವಿರಕ್ಕೂ ಹೆಚ್ಚು ಕೊರೊನಾ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+