ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯೋದು ಫಿಕ್ಸ್?
ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಣುತ್ತಿದೆ. ಹೀಗೆ 'ಕನಕಪುರ ಬಂಡೆ' ಎಂಬ ಹವಾ ಇಟ್ಟಿರುವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಮೂಡಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದೇ ಕಾರಣಕ್ಕೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಕೆಳಗೆ ಇಳಿಸಲು ಎಲ್ಲಾ ಸಿದ್ಧತೆ ಸಾಗಿದೆ ಎಂಬ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ 2024ರಲ್ಲಿ ಅಂದುಕೊಂಡ ರೀತಿ ಗೆಲುವು ಸಾಧಿಸಿಲ್ಲ. ಕರ್ನಾಟಕದಲ್ಲಿ 2023ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿತ್ತು. 130ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಪಕ್ಷ ಹೊಸ ಇತಿಹಾಸ ಬರೆದಿತ್ತು. ಹೀಗಿದ್ದಾಗಲೇ, ಕಾಂಗ್ರೆಸ್ ಪಕ್ಷ 2024ರ ಲೋಕಸಭೆ ಚುನಾವಣೆ ಅಖಾಡದಲ್ಲಿ ಹೀನಾಯ ಸೋಲು ಕಂಡಿದೆ.

20ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲ್ಲುವ...
2024ರ ಲೋಕಸಭೆ ಚುನಾವಣೆ ಘೋಷಣೆಗೆ ಮೊದಲು ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಹುರುಪು ಹೊಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ಕೊನೆಗೆ ಸಿಕ್ಕಿದ್ದು ಕೇವಲ 9 ಸ್ಥಾನ. ಇದೇ ಕಾರಣಕ್ಕೆ ಈಗ ಡಿ.ಕೆ. ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪಟ್ಟ ಅಲುಗಾಡಲು ಶುರುವಾಗಿದೆ ಎಂಬ ಮಾತುಗಳು ಓಡಾಡುತ್ತಿವೆ. ಹಾಗಾದ್ರೆ ಡಿ.ಕೆ. ಶಿವಕುಮಾರ್ ಅವರು ರಾಜೀನಾಮೆಯ ಕೊಡಲಿದ್ದಾರಾ? ಬನ್ನಿ ತಿಳಿಯೋಣ.
ಡಿಕೆಶಿ ಸಿಎಂ ಆಗ್ತಾರೆ ಎಂದಿದ್ದರು!
2024ರ ಲೋಕಸಭೆ ಚುನಾವಣೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಸಿಎಂ ಆಗಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಪಟ್ಟ ಕಟ್ಟಲು ಸರ್ವ ಸಿದ್ಧತೆ ಸಾಗಿದ್ದು, ಕ್ಷಣಗಣನೆ ಆರಂಭ ಆಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಇದೀಗ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಹೀಗಿದ್ದಾಗ ಡಿ.ಕೆ. ಶಿವಕುಮಾರ್ ಅವರ ನೇತೃತ್ವ ದಲ್ಲಿ ಚುನಾವಣೆ ಎದುರಿಸಿದ್ದ ಕರ್ನಾಟಕ ಕಾಂಗ್ರೆಸ್ ಭಾರಿ ಹಿನ್ನಡೆ ಕಂಡಿದೆ. ಹೀಗಾಗಿಯೇ, ಡಿಕೆಶಿ ಅವರನ್ನ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸೋದು ಫಿಕ್ಸ್? ಎಂಬ ಚರ್ಚೆ ಶುರುವಾಗಿದೆ.
ತಮ್ಮ ಸೋಲಿನಿಂದ ಡಿಕೆಶಿಗೆ ಶಾಕ್
ಬೆಂಗಳೂರು, ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಿಸಿಲ್ಲ. ಈ ಪೈಕಿ ಬೆಂಗಳೂರು ನಗರದ ಮೇಲೆ ಡಿ.ಕೆ. ಶಿವಕುಮಾರ್ ಅವರು ಬಿಗಿ ಹಿಡಿತ ಹೊಂದಿದ್ದಾರೆ ಎಂಬ ಮಾತು ಇವೆ. ಇಷ್ಟೆಲ್ಲಾ ಹಿಡಿತ ಹೊಂದಿದ್ದರೂ, ಬೆಂಗಳೂರು ಭಾಗದಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಇದೆಲ್ಲಾ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಈಗ ಕಾಂಗ್ರೆಸ್ ನಾಯಕರು ಕೋಪಗೊಳ್ಳುವಂತೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ತಮ್ಮ ಸಹೋದರ ಡಿ.ಕೆ. ಸುರೇಶ್ ಕೂಡ ಸೋತಿರುವುದು ಡಿ.ಕೆ. ಶಿವಕುಮಾರ್ ಅವರಿಗೆ ಭಾರಿ ದೊಡ್ಡ ಹಿನ್ನಡೆ ತಂದಿದೆ.
ಕುಮಾರಸ್ವಾಮಿಗೆ ಕೃಷಿ ಸಚಿವ ಸ್ಥಾನ?
ಬಿಜೆಪಿ & ಎನ್‌ಡಿಎ ಒಕ್ಕೂಟದಲ್ಲಿ ಆಯ್ಕೆ ಆಗಿ ಬಂದಿರುವ ಸಂಸದರ ಹಿನ್ನೆಲೆ ಗಮನಿಸಿದರೆ ಇದೀಗ ಡಾ. ಸಿ.ಎನ್. ಮಂಜುನಾಥ್ ಆರೋಗ್ಯ ಸಚಿವರಾಗಲು ಸೂಕ್ತ ಅಂತಾ ಹೇಳಬಹುದು. ಯಾಕಂದ್ರೆ ಮೋದಿ ಸಂಪುಟದಲ್ಲಿ ಆರೋಗ್ಯ ಸಚಿವನ ಸ್ಥಾನ ನಿರ್ವಹಿಸಲು ವೈದ್ಯರ ಅಗತ್ಯತೆ ಇದೆ. ಈಗ ಈ ಅನಿವಾರ್ಯ ಸ್ಥಿತಿಯಲ್ಲಿ ಕನ್ನಡ ನಾಡಿನ ಸಂಸದ ಡಾ. ಸಿ.ಎನ್. ಮಂಜುನಾಥ್ ಆರೋಗ್ಯ ಸಚಿವರಾಗಿ ಕೆಲಸ ಮಾಡಲು ಎಲ್ಲಾ ರೀತಿಯಲ್ಲೂ ಸೂಕ್ತ ಎನ್ನಬಹುದು. ಹೀಗೆ ಪ್ರಧಾನಿ ಮೋದಿ ಅವರ ಮೊದಲ ಆಯ್ಕೆ ಕೂಡ ಡಾ. ಸಿ.ಎನ್. ಮಂಜುನಾಥ್ ಇರಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications