ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಭೀತಿ: ಬೆಂಗಳೂರಿನ ಎಲ್‌ಕೆಜಿ, ಯುಕೆಜಿ ಶಾಲೆಗಳಿಗೆ ಇಂದಿನಿಂದ ರಜೆ

|
Google Oneindia Kannada News

ಬೆಂಗಳೂರು, ಮಾರ್ಚ್ 9: ಮಾರಕ ಕೊರೋನಾ ಭೀತಿಯ ಹಿನ್ನೆಲೆ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೂರ್ವ ಪ್ರಾಥಮಿಕ ಶಾಲೆ (ನರ್ಸರಿ, ಎಲ್‌ಕೆಜಿ, ಯುಕೆಜಿ) ಗಳಿಗೆ ಇಂದಿನಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.

Recommended Video

A Brief Information In 1989 Kannada Magzine About Novel Coronavirus | Oneindia Kannada

"ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ LKG, UKG ಶಾಲೆಗಳಿಗೆ ನಾಳೆಯಿಂದ ರಜೆ ಘೋಷಿಸಲಾಗಿದೆ." ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ನಲ್ಲಿ ಬರೆದಿದ್ದಾರೆ.

ಮೂರು ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್‌ಕೆಜಿ, ಹಾಗೂಯುಕೆಜಿಗಳಿಗೆ ಮುಂಜಾಗ್ರತಿ ಕ್ರಮವಾಗಿ ಮುಂದಿನ ಆದೇಶದವರೆಗೆ ರಜಾ ಗೋಷಣೆ ಮಾಡಲಾಗಿದೆ. ಇದುವರೆಗೂ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮಂದಿ ಕೋವಿಡ್ 19ನಿಂದ ಮೃತಪಟ್ಟಿದ್ದಾರೆ.

students

ಕೊರೊನಾ ವೈರಸ್ ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು ಕೇರಳದಲ್ಲಿ, ವುಹಾನ್‌ನಿಂದ ಒಟ್ಟಿಗೆ ಪ್ರಯಾಣಿಸಿದ್ದ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿತ್ತು. ಅವರೆಲ್ಲರೂ ಈಗ ಗುಣಮುಖರಾಗಿದ್ದಾರೆ.

ಬೆಂಗಳೂರು: ಕೊರೊನಾ ಸೋಂಕಿತ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಗೆ ರಜೆ
ಈಗ ಮತ್ತೆ ಕೇರಳದಲ್ಲಿ ಐದು ಮಂದಿಗೆ ಕೊರೊನಾ ಸೋಂಕು ತಗುಲಿದೆ . ಅವರಲ್ಲಿ ಮೂರು ಮಂದಿ ಇಟಲಿಗೆ ಹೋಗಿ ಬಂದವರಾಗಿದ್ದಾರೆ ಎಂದು ಆರೋಗ್ಯ ಸಚಿವೆ ಕೆಕೆ ಶೈಲಜಾ ತಿಳಿಸಿದ್ದಾರೆ.

English summary
Fear Of Coronavirus, Minister Suresh Kumar Tweeeted that Karnataka Government Declared Holiday For LKG , UKG Students From March 9.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X