ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking News: ಕರ್ನಾಟಕದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕೊವಿಡ್-19 ಪಾಸಿಟಿವ್

|
Google Oneindia Kannada News

ಬೆಂಗಳೂರು, ಜನವರಿ 01: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ರಾಜ್ಯದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

"ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೊವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ," ಎಂದು ಸಚಿವ ಬಿ ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 1,000ದ ಗಡಿ ದಾಟಿದೆ. ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.86ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 0.48ರಷ್ಟಿದೆ.

Karnataka Education Minister BC Nagesh tests positive for Covid-19

ಕಳೆದ ಒಂದೇ ದಿನದಲ್ಲಿ 1033 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 354 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 5 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 38340 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 30,08,370ಕ್ಕೆ ಏರಿಕೆಯಾಗಿದೆ. ಒಟ್ಟು 29,60,615 ಸೋಂಕಿತರು ಗುಣಮುಖರಾಗಿದ್ದು. 9,386 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Recommended Video

ನಮ್ಮ ತಂಡದೊಳಗೇ ಶತೃಗಳಿರೋದ್ರಿಂದ ಭಯವಾಗುತ್ತೆ ಎಂದ KL ರಾಹುಲ್ | oneindia Kannada

English summary
Karnataka Education Minister BC Nagesh tests positive for Covid-19. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X