ಕರ್ನಾಟಕ ಚುನಾವಣೆ: ಬೆಂಗಳೂರಿನ ಪುಲಕೇಶಿನಗರ ಕ್ಷೇತ್ರದಿಂದ AIADMK ಡಿ ಅನ್ಬರಸನ್ ಸ್ಪರ್ಧೆ
ಬೆಂಗಳೂರು, ಏಪ್ರಿಲ್ 19: ಕರ್ನಾಟಕ ವಿಧಾನಸಭಾ ಚುನಾವಣೆಗೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ತೀವ್ರ ಹಣಾಹಣಿ ನಡೆಸಲಿವೆ. ಈ ಮಧ್ಯೆ ತಮಿಳುನಾಡಿನ ಎಐಎಡಿಎಂ (AIADMK) ಪಕ್ಷದ ಅಭ್ಯರ್ಥಿಯೊಬ್ಬರು ಬೆಂಗಳೂರಿನ ಕ್ಷೇತ್ರವೊಂದರಿಂದ ಕಣಕ್ಕಿಳಿಯುವುದು ಅಧಿಕೃತವಾಗಿದೆ.
ಎಐಎಡಿಎಂಕೆ ಪಕ್ಷದ ಕರ್ನಾಟಕ ರಾಜ್ಯ ಘಟಕದ ಘಟಕದ ಪ್ರೆಸಿಡಿಯಂ ಅಧ್ಯಕ್ಷ ಡಿ ಅನ್ಬರಸನ್ ಅವರು ಸಿಲಿಕಾನ್ ಸಿಟಿ ಬೆಂಗಳೂರಿನ ಪುಲಿಕೇಶಿ ನಗರ (ಫ್ರೇಸರ್ ಟೌನ್) ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಲಿದ್ದಾರೆ. ಈ ಕುರಿತು ಚೆನ್ನೈನಲ್ಲಿ ಬುಧವಾರ ಎಐಎಡಿಎಂಕ ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ಎಐಎಡಿಎಂಕೆ ತನ್ನ ಪಕ್ಷದ ಅಭ್ಯರ್ಥಿಯೊಬ್ಬರು ಪುಲಕೇಶಿ ನಗರದಿಂದ ಸ್ಪರ್ಧೆ ಮಾಡುವ ಬಗ್ಗೆ, ಅದರ ಸಾಧಕ ಬಾಧಕಗಳ ಬಗ್ಗೆ ಭಾನುವಾರ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಚರ್ಚೆಗಳು ನಡೆದಿವೆ. ಡಿ ಅನ್ಬರಸನ್ ಸಹ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಪೈಪೋಟಿ ನೀಡಲಿದ್ದಾರೆ.
ಸ್ಪರ್ಧೆ ಬಗ್ಗೆ ಖಚಿತವಾಗಲಿದೆ
ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕ ಫಲಿತಾಂಶ ಹೊರ ಬೀಳಲಿದೆ. ಇದೇ ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿಹ್ನೆಯ ಮೇಲೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಖಚಿತಗೊಳ್ಳಲಿದೆ.

ದೆಹಲಿ ಹೈಕೋರ್ಟ್ ಏಪ್ರಿಲ್ 12 ರಂದು ಪಳನಿಸ್ವಾಮಿ ಅವರ ಪ್ರಾತಿನಿಧ್ಯವನ್ನು ತಿದ್ದುಪಡಿ ಮಾಡಿದ ಬೈಲಾಗಳೊಂದಿಗೆ ದಾಖಲೆಗಳನ್ನು ನವೀಕರಿಸಿ ಹತ್ತು ದಿನಗಳಲ್ಲಿ ನಿರ್ಧರಿಸುವ ಕುರಿತು ಚುನಾವಣಾ ಆಯೋಗವನ್ನು ಕೇಳಿದೆ.
ಕ್ಷೇತ್ರದಲ್ಲಿ ಅಖಂಡ ಶ್ರೀನಿವಾಸ ಪಕ್ಷೇತರ ಅಭ್ಯರ್ಥಿ
ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮುರಳಿ ಎಂಬುವವರು ಕಣಕ್ಕಿಳಿದಿದ್ದಾರೆ. ಆದರೆ ಕಾಂಗ್ರೆಸ್ ಪುಲಿಕೇಶಿನಗರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಇಲ್ಲಿದ್ದ ಕಾಂಗ್ರೆಸ್ ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗಿದೆ.

ಈ ಕಾರಣಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರು ತಮ್ಮ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಇಲ್ಲಿ ಬಂಡಾಯ ಬಿಸಿ ಕಾಂಗ್ರೆಸ್‌ಗೆ ತಟ್ಟಿತು. ಹೀಗಾಗಿ ಅವರು ಡಿಕೆ ಶಿವಕುಮಾರ್ ಅವರ ವಿರುದ್ಧ ಕಿಡಿ ಕಾರಿದ್ದಲ್ಲದೇ ಅದೇ ಕ್ಷೇತ್ರದಲ್ಲಿ ಸ್ವತಂತ್ರ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.
ಬುಧವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಂಖಡ ಶ್ರೀನಿವಾಸ್ ಮೂರ್ತಿ ಅವರು, ನನ್ನ ಮನೆಗೆ ಬೆಂಕಿ ಬಿತ್ತು. ನನಗೆ ಟಕೆಟ್ ತಪ್ಪಿಸಿದರು. ಸಿದ್ದರಾಮಯ್ಯ ಮತ್ತು ಜಮೀರ್ ಅಹ್ಮದ್ ಅವರು ನನ್ನ ಬೆಂಬಲಿಸುತ್ತಾರೆ ಎಂದು ತಿಳಿಸಿದರು.












Click it and Unblock the Notifications