ಕರ್ನಾಟಕ ವಿಧಾನಸಭಾ ಚುನಾವಣೆ 2023: ಮದುವೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರಚಾರ ನಿಷೇಧಿಸಿದ ಬಿಬಿಎಂಪಿ

ಬೆಂಗಳೂರು ಏಪ್ರಿಲ್ 4: ರಾಜಕೀಯ ಪ್ರಚಾರಕ್ಕಾಗಿ ಮದುವೆ ಮತ್ತಿತರ ಸಾಂಸ್ಕೃತಿಕ/ಧಾರ್ಮಿಕ ಕಾರ್ಯಕ್ರಮಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ಬಿಬಿಎಂಪಿ ಕಟ್ಟೆಚ್ಚರ ವಹಿಸಲಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಮಾದರಿ ನೀತಿ ಸಂಹಿತೆಯನ್ನು ಇಂತಹ ಕಾರ್ಯಗಳಿಗೆ ಅನ್ವಯಿಸುವುದಿಲ್ಲ. ಆದರೆ ಪಕ್ಷಗಳು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಗಳಿವೆ. ಹಾಗಾಗಿ, ರಾಜಕಾರಣಿಗಳು ಅಥವಾ ಪಕ್ಷಗಳು ಭಾಗಿಯಾಗಿರುವ ಬಗ್ಗೆ ಮಾಹಿತಿ ಪಡೆದಾಗ ಬಿಬಿಎಂಪಿ ಅಂತಹ ಸ್ಥಳಗಳಿಗೆ ಭೇಟಿ ನೀಡುತ್ತದೆ. ಒಂದು ವೇಳೆ ದುರ್ಬಳಕೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

Election 2023: BBMP banned from campaigning at weddings, cultural events

ಮತದಾನ ಕೇಂದ್ರಗಳಲ್ಲಿ ಸರತಿ ಸಾಲು ಮತ್ತು ಪಾರ್ಕಿಂಗ್ ಸ್ಲಾಟ್ ಲಭ್ಯತೆಯನ್ನು ಪರಿಶೀಲಿಸಲು ಮತದಾರರಿಗೆ ಸಹಾಯ ಮಾಡಲು ಚುನಾವಣಾ ಆಯೋಗದ ಸಹಯೋಗದೊಂದಿಗೆ ಪಾಲಿಕೆಯು ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಗಿರಿ ನಾಥ್ ಹೇಳಿದರು.

"ಆ್ಯಪ್ ಒಂದು ವಾರದಲ್ಲಿ ಸಿದ್ಧವಾಗಲಿದೆ. ಇದು ಪರೀಕ್ಷಾ ಉದ್ದೇಶಗಳಿಗಾಗಿ ಒಂದು ವಾರದವರೆಗೆ ಕಾರ್ಯನಿರ್ವಹಿಸುತ್ತದೆ ಮತ್ತು ನಂತರ ಸಾರ್ವಜನಿಕ ಬಳಕೆಗೆ ಸಿದ್ಧವಾಗಲಿದೆ" ಎಂದು ಅವರು ಹೇಳಿದರು.

Election 2023: BBMP banned from campaigning at weddings, cultural events

ಚುನಾವಣೆ 2023

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದರು.

ನೀತಿ ಸಂಹಿತೆ ಜಾರಿ

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಮಾಡಲಾಗಿದೆ. ಮಾರ್ಚ್ 29 ಬುಧವಾರ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಮಾಡಿದೆ. ಇನ್ನು ಮಾರ್ಚ್ 29 ರಂದು ಚುನಾವಣೆಗೆ ದಿನಾಂಕ ಘೋಷಣೆ ಆದ ದಿನವೇ ಹಲವು ಬದಲಾವಣೆಗಳು ಆಗಿವೆ. 'ಚುನಾವಣಾ ಮಾದರಿ ನೀತಿ ಸಂಹಿತೆ' ಜಾರಿಗೆ ಬಂದಿದೆ. ಚುನಾವಣೆಗೆ ದಿನಾಂಕ ಘೋಷಣೆ ಆದ ದಿನದಿಂದ ಹಿಡಿದು, ಮತ ಎಣಿಕೆ ಮುಗಿಯೋವರೆಗೆ ಈ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತೆ.

Election 2023: BBMP banned from campaigning at weddings, cultural events

ನೀತಿ ಸಂಹಿತೆ ಪ್ರಕಾರ ಏನು ಮಾಡುವಂತಿಲ್ಲ?

ಸರ್ಕಾರ ಹೊಸ ಯೋಜನೆ ಘೋಷಿಸುವಂತಿಲ್ಲ

ಹೊಸ ಕಾರ್ಯಕ್ರಮಗಳ ಅನುಷ್ಠಾನ ಮಾಡುವಂತಿಲ್ಲ

ಹೊಸ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡುವಂತಿಲ್ಲ

ಹೊಸ ಯೋಜನೆಗೆ ಹಣ ನೀಡುವಂತಿಲ್ಲ

ಹೊಸ ಟೆಂಡರ್ ಕರೆಯುವಂತಿಲ್ಲ

ಈಗಾಗಲೇ ಕರೆದಿದ್ದ ಟೆಂಡರ್ ಫೈನಲ್ ಮಾಡುವಂತಿಲ್ಲ

ಸಚಿವರು, ಶಾಸಕರು ಸರ್ಕಾರಿ ವಾಹನ ಬಳಸುವಂತಿಲ್ಲ

ಅಧಿಕಾರಿಗಳ ಜೊತೆ ಸಚಿವರು, ಶಾಸಕರು ಸಭೆ ನಡೆಸುವಂತಿಲ್ಲ

ರಾಜಕೀಯ ನಾಯಕರು ಸರ್ಕಾರಿ ವಸತಿ ಗೃಹ ಬಳಸುವಂತಿಲ್ಲ

ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಮಾತ್ರ ಧ್ವನಿವರ್ಧಕ ಬಳಕೆ

ಮಂದಿರ, ಮಸೀದಿ, ಚರ್ಚ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಮಾಡುವಂತಿಲ್ಲ

ಧರ್ಮ - ಜಾತಿ ವಿಷಯಾಧಾರಿತವಾಗಿ ಮತ ಕೇಳುವಂತಿಲ್ಲ

ಕಾರ್ಯ ಪ್ರಗತಿಯಲ್ಲಿ ಇರುವ ಅಭಿವೃದ್ಧಿ ಯೋಜನೆ ಮುಂದುವರೆಸಬಹುದು.ಈಗಾಗಲೇ ಜಾರಿಯಲ್ಲಿ ಇರುವ ಸರ್ಕಾರಿ ಕಾರ್ಯಕ್ರಮಗಳ ಮುಂದುವರಿಕೆಗೆ ಅಡ್ಡಿ ಇಲ್ಲ.ಕಾರ್ಯಕ್ರಮಗಳಿಗೆ ಹೊಸ ಫಲಾನುಭವಿಗಳನ್ನ ಆಯ್ಕೆ ಮಾಡುವಂತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+