Karnataka Election 2023: ಬೆಂಗಳೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಜೊತೆ ಬಿಬಿಎಂಪಿ ಮಹತ್ವದ ಸಭೆ, ಹೇಳಿದ್ದೇನು?
ಬೆಂಗಳೂರು, ಮಾರ್ಚ್ 29: ಕರ್ನಾಟಕ ರಾಜ್ಯ ವಿಧಾನಸಭಾ ದಿನಾಂಕ ಬುಧವಾರ ಘೋಷಣೆಯಾಗುವ ಜೊತೆಗೆ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ 8 ವಲಯಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪಧಾದಿಕಾರಿಗಳ ಜೊತೆ ಸಭೆ ಬುಧವಾರ ನಡೆಸಿದರು.
ಬಿಬಿಎಂಪಿ ಮುಖ್ಯ ಆಯುಕ್ತರು ಆಗಿರುವ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು, ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡುವುದು ಸೇರಿದಂತೆ, ಚುನಾವಣಾ ಜಾಗೃತಿ (ಸ್ವೀಪ್), ತಾವು ಕೈಗೊಳ್ಳಲಿರುವ ಉನಾವಣಾ ಪ್ರಕ್ರಿಯೆಗಳ ಕುರಿತು ಅಗತ್ಯ ಸಲಹೆ ಸೂಚನೆ ನೀಡಿದರು.

ಈ ವೇಳೆ ಮಾತನಡಿದ ಅವರು, ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೇ 10 ನಡೆಯಲಿದೆ, ಮೇ 13ರಂದು ಮತ ಎಣಿಕೆ ನಡೆಯಲಿದೆ. ಅಲ್ಲದೇ ಇಂದಿನಿಂದಲೇ ನೀತಿ ಸಂಹಿತೆ ಜಾರಿಆಗಿದೆ. ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ತಮ್ಮ ಮಟ್ಟದಲ್ಲಿ ಬರುವ ನಿವಾಸಿಗಳಿಗಳೆಲ್ಲರಿಗೂ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.
ಮತದಾನ ಎಲ್ಲ ಹಕ್ಕು ಅದನ್ನು ಚಲಾಯಿಸುವ ಸಲುವಾಗಿ ಚುನಾವಣಾ ಆಯೋಗದ ವತಿಯಿಂದ ಆನೇಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಮತದಾನ ಮಾಡುವ ಮುಂಚಿತವಾಗಿತೇ ಎಲ್ಲಾ ಮನೆಗಳಿಗೂ ಮತದಾನದ ಚೀಟಿಗಳನ್ನು ನೀಡಲಾಗುವುದು. ಅಲ್ಲದೆ ವಿ.ಹೆಚ್.ಎ ತಂತ್ರಾಂಶದ ಮೂಲಕ ಮತದಾರರ ಗುರುತಿನ ಚೀಟಿ ನಮೂದಿಸಿ ಮತಗಟ್ಟೆಯ ಮಾಹಿತಿ ಪಡೆದುಕೊಳ್ಳಬಹುದು.
ಎಂಟು ವಲಯಗಳ ಮತಗಟ್ಟೆಗಳ ಸಮೀಪ ಎಲ್ಲ ವಿಧದ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಅದರಂತೆ ಮತಗಟ್ಟೆಗಳ ಬಳಿ ಪಾರ್ಕಿಂಗ್ ವ್ಯವಸ್ಥೆ, ವಿಕಲಚೇತನರಿಗಾಗಿ ರ‍್ಯಾಂಪ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ವಿದ್ಯತ್ ವ್ಯವಸ್ಥೆ, ಸರತಿ ಸಾಲಿನ ವ್ಯವಸ್ಥೆ, ಮತ ಚಲಾಯಿಸಲು ಬರುವವರಿಗೆ ಬಿಸಿಲು ಬೀಳದಂತೆ ಪೆಂಡಾಲ್ ವ್ಯವಸ್ಥೆ, ವಿಶೇಷವಾಗಿ ಮಹಿಳೆಯರಿಗಾಗಿ ಪಿಂಕ್ ಬೂತ್‌ಗಳು ಸೇರಿದಂತೆ ವಿವಿಧ ಥೀಮ್ ಆಧಾರಿತ ಬೂತ್ ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ವಿವರಿಸಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಪಾಲಿಕೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಸರಾಸರಿ ಮತದಾನದ ಶೇಕಡ 55.04 ಪ್ರತಿಶತ ಆಗಿದೆ. ಈ ಬಾರಿ ಮತದಾರರ ಶೇಕಡಾವಾರು ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲರೂ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದರು.
ಮತದಾನ ಪ್ರಮಾಣ ಹೆಚ್ಚಾಗಬೇಕು. ಈ ಸಂಬಂಧ ಮತದಾನದ ಮೌಲ್ಯದ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಬೇಕು. ಮೊದಲ ಬಾರಿಗೆ ಮತದಾನ ಮಾಡುವವರನ್ನು ಹೆಚ್ಚು ಪ್ರೋತ್ಸಾಹಿಸುವುದು. ಮತಗಟ್ಟೆಗಳ ಬಳಿ ಮಾಡಿರುವಂತ ಸೌಲಭ್ಯಗಳ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡುವುದು. ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ವತಿಯಿಂದ ಮತದಾನ ಮಾಡುವ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಿಳುವಳಿಕೆ ಮೂಡಿಸುವ ಕೆಲಸ ಮಾಡುವುದು. 80 ವರ್ಷ ಮೇಲ್ಪಟ್ಟ ಮತದಾರರಿಗೆ ಮತ್ತು ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಉಜ್ವಲ್ ಕುಮಾರ್ ಘೋಷ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಸಂಗಪ್ಪ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.












Click it and Unblock the Notifications