Congress Candidate 5th list: ಕಾಂಗ್ರೆಸ್ ಐದನೇ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್, ಯಾವ ಕ್ಷೇತ್ರ ತಿಳಿಯಿರಿ
ಬೆಂಗಳೂರು, ಏಪ್ರಿಲ್ 19: ಕರ್ನಾಟಕ ಕಾಂಗ್ರೆಸ್ ಪಕ್ಷ ಬುಧವಾರ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲೂ ಒಟ್ಟು 05 ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡದೇ ಬಾಕಿ ಉಳಿಸಿಕೊಂಡಿದೆ.
ಕಾಂಗ್ರೆಸ್‌ನಿಂದ ಬಾಕಿ ಉಳಿದಿದ್ದ ಒಟ್ಟು ಎಂಟು ಕ್ಷೇತ್ರಗಳಲ್ಲಿ 3 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಈ ಐದನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಳಬಾಗಿಲು ಕ್ಷೇತ್ರಕ್ಕೆ ಡಾ.ಬಿ.ಸಿ ಮುದ್ದು ಗಂಗಾಧರ್, ಕೆ.ಆರ್.ಪುರಂ ಕ್ಷೇತ್ರದಲ್ಲಿ ಡಿಕೆ ಮೋಹನ್ ಬಾಬು ಮತ್ತು ಪುಲಿಕೇಶಿನಗರ ಕ್ಷೇತ್ರಕ್ಕೆ ನಾಯಕ ಎ.ಸಿ.ಶ್ರೀನಿವಾಸ್ ಅವರಿಗೆ ಟಿಕೆಟ್ ಸಿಕ್ಕಿದೆ.

ಗುರುವಾರ ಏಪ್ರಿಲ್ 20ರಂದೇ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಈ ಪೈಕಿ ಮೂರು ಮಂದಿ ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಮಾಡಿರುವ ಕಾಂಗ್ರೆಸ್ ರಾಜ್ಯದ ಅರಕಲಗೂಡು ವಿಧಾನಸಭಾ ಕ್ಷೇತ್ರ, ಶಿಡ್ಲಘಟ್ಟ, ಸಿವಿ ರಾಮನ್ ನಗರ, ಮಂಗಳೂರು ಉತ್ತರ ಮತ್ತು ರಾಯಚೂರು ನಗರ ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗಬೇಕಿದೆ.
ನಾಮಪತ್ರ ಸಲ್ಲಿಕೆಗೆ ನಾಳೆ ಏ.20 ಕೊನೆ ದಿನ
ಕರ್ನಾಟಕ ರಾಜ್ಯ ವಿಧಾನಸಭಾ ಚುಣಾವಣೆ ಕಣ ರಂಗೇರುತ್ತಿದೆ. ಕಾಂಗ್ರೆಸ್ ಇದುವರೆಗೆ ಒಟ್ಟು 224 ವಿಧಾನಸಾಭ ಕ್ಷೇತ್ರಗಳ ಪೈಕಿ 219 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆದರೆ ನಾಮಪತ್ರ ಸಲ್ಲಿಕೆಗೆ ನಾಳೆಯೆ ಕೊನೆ ದಿನವಾಗಿದ್ದರೂ ಸಹ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಟಿಕೆಟ್ ಫೈನಲ್ ಮಾಡಿಲ್ಲ ಏಕೆ?. ಬಿಜೆಪಿ ವಿರುದ್ಧ ಕಾಂಗ್ರೆಸ್ ರಣತಂತ್ರವೇನು? ಎಂಬ ಕುತೂಹಲ ಮನೆ ಮಾಡಿದೆ.
ಕಾಂಗ್ರೆಸ್ ಮಂಗಳವಾರವಷ್ಟೇ 4 ಪಟ್ಟಿಯನ್ನು ಘೋಷಣೆ ಮಾಡಿದ್ದು, ಅದರಲ್ಲಿ ಏಳು ಮಂದಿಗೆ ಟಿಕೆಟ್ ನೀಡಿದೆ. ಕಳೆದ ಶನಿವಾರವಷ್ಟೇ 43 ಅಭ್ಯರ್ಥಿಗಳ ಹೆಸರು ಇರುವ 3ನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆಗೊಳಿಸಿತ್ತು. ಅದಕ್ಕೂ ಮೊದಲು ಕಾಂಗ್ರೆಸ್ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಫೈನಲ್ ಮಾಡಿ ಎರಡನೇ ಪಟ್ಟಿ ಪ್ರಕಟಿಸಿತ್ತು. ಇನ್ನೂ ಮೊದಲನೇ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿತ್ತು.

ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್ ಹೈಕಮಾಂಡ್‌ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ರಿಲೀಸ್ ಮಾಡಿತ್ತು. ಕಳೆದ ಶನಿವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿ ಅದರಲ್ಲಿ 43 ಅಭ್ಯರ್ಥಿಗಳಿಗೆ ಎಐಸಿಸಿ ಟಿಕೆಟ್ ನೀಡಿದೆ. ಮಂಗಳವಾರ ಮತ್ತೆ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅಲ್ಲದೇ ಬುಧವಾರ ಮೂರು ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಿದೆ. ಶಿಗ್ಗಾವಿಗೆ ಅಭ್ಯರ್ಥಿ ಬದಲಿಸಿದೆ.
ಶಿಗ್ಗಾವಿ: ಒಂದೇ ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲು
ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ 4ನೇ ಪಟ್ಟಿಯಲ್ಲಿ ಮೊಹಮ್ಮದ್ ಯೂಸೂಫ್ ಸವಣೂರ್ ಅವರಿಗೆ ನೀಡಲಾಗಿತ್ತು. ಅದನ್ನು ಬುಧವಾರ ಬಿಡುಗಡೆಗೊಂಡ ಐದನೇ ಪಟ್ಟಿಯಲ್ಲಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಘೋಷಿಸಲಾಗಿದೆ. ಇದರಿಂದ ಮೊಹಮ್ಮದ್ ಯೂಸೂಫ್ ಒಂದೇ ದಿನದ ಅಂತರದಲ್ಲಿ ಭಾರಿ ಮುಖಭಂಗವಾಗಿದೆ ಎನ್ನಲಾಗಿದೆ.
ಈಗಾಗಲೇ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೃಹತ್ ಮೆರವಣಿ/ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ನಟ ಕಿಚ್ಚ ಸುದೀಪ್ ಸಿಎಂ ಬೊಮ್ಮಾಯಿಗೆ ಸಾಥ್ ನೀಡಿದ್ದಾರೆ.












Click it and Unblock the Notifications