BL Santhosh: ಬಿ.ಎಲ್.ಸಂತೋಷ್ ವಿರುದ್ಧ ಶೆಟ್ಟರ್ ಆರೋಪಕ್ಕೆ ಬಿ.ಎಸ್.ಯಡಿಯೂರಪ್ಪ ಖಡಕ್ ಪ್ರತಿಕ್ರಿಯೆ
ಬೆಂಗಳೂರು, ಏಪ್ರಿಲ್, 18: ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಅದರಲ್ಲೂ ಬಿಜೆಪಿ ಟಿಕೆಟ್ ಕೈತಪ್ಪಿದ್ದ ಹಿನ್ನೆಲೆ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು. ಆಗಿನಿಂದಲೂ ಬಿಜೆಪಿಯಲ್ಲಿ ಹಲವು ಬದಲಾವಣೆಗಳು ಆಗುತ್ತಲೇ ಇವೆ. ನನಗೆ ಟಿಕೆಟ್ ತಪ್ಪಿಸಿದ್ದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಎಂಬ ಸ್ಪೋಟಕ ಮಾಹಿತಿಯನ್ನು ಜಗದೀಶ್ ಶೆಟ್ಟರ್ ಬಹಿರಂಗ ಪಡಿಸಿಸಿದ್ದರು.ಇದಕ್ಕೆ ಪ್ರತ್ಯತ್ತರವಾಗಿ ಬಿ.ಎಸ್.ಯಡಿಯೂರಪ್ಪನವರು ಕೂಡ ಪ್ರತಿಕ್ರಿಯೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿ.ಎಲ್.ಸಂತೋಷ್ ಅವರ ಈ ವರ್ತನೆ ಪಕ್ಷದ ಸಂಪೂರ್ಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿದೆ ಅಂತಲೂ ಹೇಳಿದ್ದರು. ಹೀಗೆ ಬಿ.ಎಲ್.ಸಂತೋಷ್ ವಿರುದ್ಧ ಜಗದೀಶ್ ಶೆಟ್ಟರ್ ಆರೋಪ ಮಾಡಿರುವುದನ್ನು ನಾನು ಒಪ್ಪುವುದಿಲ್ಲ. ನಾವು 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ ಎಂದು ಬಿ.ಎಸ್.ಯಡಿಯೂರಪ್ಪ ಹೆಳಿದರು.
ಬಿ.ಎಲ್.ಸಂತೋಷ್ ವಿರುದ್ಧ ಶೆಟ್ಟರ್ ಆರೋಪ
ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಜಗದೀಶ್ ಶೆಟರ್ ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಜಗದೀಶ್ ಶೆಟ್ಟರ್ ಬಿಎಲ್ ಸಂತೋಷ್ ವಿರುದ್ಧ ಹರಿಹಾಯ್ದರು. ನನಗೆ ಟಿಕೆಟ್ ತಪ್ಪಿಸಿದ್ದೇ ಬಿಎಲ್ ಸಂತೋಷ್ ಎಂದು ಹೇಳಿದರು.
ತಮ್ಮ ಮಾನಸ ಪುತ್ರ ಮಹೇಶ್ ತೆಂಗನಕಾಯಿಗೆ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಲು ಬಿ.ಎಲ್.ಸಂತೋಷ್ ಅವರು ನನಗೆ ಟಿಕೆಟ್ ತಪ್ಪಿಸಿದರು ಎಂದು ಶೆಟ್ಟರ್ ಆರೋಪಿ ಮಾಡಿದ್ದಾರೆ.
ಬಿಜೆಪಿ ನನ್ನ ಮನೆ ಆಗಿತ್ತು. ಮೊದಲಿನಿಂದಲೂ ಪಕ್ಷವನ್ನು ಕಟ್ಟಲು ಶ್ರಮಿಸಿದವರಲ್ಲಿ ನಾನೂ ಒಬ್ಬನಾಗಿದ್ದರಿಂದ ನಾನು ಎಂದಿಗೂ ತೊರೆಯುವ ಉದ್ದೇಶವನ್ನು ಹೊಂದಿರಲಿಲ್ಲ. ಆದರೆ ಪಕ್ಷಕ್ಕೆ ಸೇರ್ಪಡೆಗೊಂಡವರು ಸೇರಿದಂತೆ ಮೂವರು ನಾಯಕರು ನನ್ನನ್ನು ಹೊರಹಾಕಲು ಸಂಚು ರೂಪಿಸಿದರು' ಎಂಬ ಗಂಭೀರ ಆರೋಪವನ್ನು ಶೆಟ್ಟರ್ ಮಾಡಿದ್ದಾರೆ.
ನಾನು ಯಾವಾಗಲೂ ಪಕ್ಷಕ್ಕಾಗಿ ದುಡಿದಿದ್ದೇನೆ. ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕದಲ್ಲಿ ಪಕ್ಷ ಕಟ್ಟಿದ್ದೇನೆ. ವಿಜಯ ಸಂಕಲ್ಪ ಯಾತ್ರೆಯನ್ನು ಯಶಸ್ವಿಗೊಳಿಸಿದ್ದೇನೆ. ನನಗೆ ಉಪಚುನಾವಣೆ ಜವಾಬ್ದಾರಿಯನ್ನು ನೀಡಲಾಗಿದ್ದು, ಉತ್ತಮವಾಗಿ ನಿಭಾಯಿಸಿದ್ದೇನೆ' ಎಂದು ಶೆಟ್ಟರ್ ಹೇಳಿದರು.
ಹೈಕಮಾಂಡ್ ಜೊತೆಗಿನ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸಿದ ಶೆಟ್ಟರ್, ನನ್ನನ್ನು ಚಿಕ್ಕ ಹುಡುಗನಂತೆ ನಡೆಸಿಕೊಳ್ಳಲಾಗಿದೆ. ನನಗೆ ಅವಮಾನ ಮಾಡಲಾಗಿದೆ ಎಂದು ತಿಳಿಸಿದರು. ಧರ್ಮೇಂದ್ರ ಪ್ರಧಾನ್ ನನಗೆ ಕರೆ ಮಾಡಿ ಟಿಕೆಟ್ ಸಿಗುವುದಿಲ್ಲ ಎಂದು ಹೇಳಿದರು. ಫಾರಂ ಕಳುಹಿಸುತ್ತೇನೆ ಎಂದು ಹೇಳಿ ಸಹಿ ಮಾಡುವಂತೆ ಸೂಚಿಸಿದರು. ಅವರು ನನ್ನನ್ನು ಚಿಕ್ಕ ಹುಡುಗನಂತೆ ನಡೆಸಿಕೊಂಡರು. ನಾನು ಆರು ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.
ಕೋರ್ ಕಮಿಟಿ ಕಳುಹಿಸಿದ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಏನಾಯಿತೋ ಗೊತ್ತಿಲ್ಲ. ಅವರು ಗೌರವಪೂರ್ವಕವಾಗಿ ನನಗೆ ಬೇರೆ ಸ್ಥಾನವನ್ನು ಮೊದಲೇ ನೀಡಿದ್ದರೆ, ನಾನು ಅದನ್ನು ಸ್ವೀಕರಿಸುತ್ತಿದ್ದೆ. ಟಿಕೆಟ್ ಕೈ ತಪ್ಪಲು ಬಿಎಲ್ ಸಂತೋಷ್ ಪ್ರಮುಖ ಕಾರಣ. ಕೆಲವರಿಗೆ ಪಕ್ಷ ಮುಖ್ಯವಲ್ಲ ವ್ಯಕ್ತಿ ಮುಖ್ಯ. ಒಂದು ಸ್ಥಾನಕ್ಕೆ ತೊಂದರೆ ಕೊಡಲು ಪಕ್ಷವನ್ನು ನಾಶ ಮಾಡಿದ್ದೀರಿ' ಎಂದು ಶೆಟ್ಟರ್ ಹೇಳಿದರು.
ಇನ್ನು ಕೃಷ್ಣರಾಜ ಕ್ಷೇತ್ರದಿಂದ ಹಾಲಿ ಶಾಸಕ ಎಸ್‌ಎ ರಾಮದಾಸ್‌ಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಸಂತೋಷ್ ಕಾರಣ ಎಂದು ಶೆಟ್ಟರ್ ಆರೋಪಿಸಿದರು. ರಾಮದಾಸ್ ಸ್ಪರ್ಧಿಸಿದರೆ ಗೆಲ್ಲುತ್ತಾರೆ. ಆದರೆ, ಕೃಷ್ಣರಾಜ ಟಿಕೆಟ್ ಅನ್ನು ಸಂತೋಷ್ ಅವರ ಆಪ್ತ ಶ್ರೀವತ್ಸ ಅವರಿಗೆ ನೀಡಲಾಗಿದೆ ಎಂದು ಶೆಟ್ಟರ್ ಹೇಳಿದರು. ಇದೇ ವೇಳೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ವಿರುದ್ಧವೂ ಜಗದೀಶ್ ಶೆಟ್ಟರ್ ಹರಿಹಾಯ್ದರು.












Click it and Unblock the Notifications