ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈಶ್ವರಪ್ಪ ಮಾಜಿ ಬೆಂಬಲಿಗ ವಿನಯ್ ವರುಣಾದಲ್ಲಿ ಏ.21ಕ್ಕೆ ನಾಮಪತ್ರ!

|
Google Oneindia Kannada News

ಬೆಂಗಳೂರು, ಏಪ್ರಿಲ್ 18: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಮಾಜಿ ಬೆಂಬಲಿಗ ವಿನಯ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸಿರುವ ವರುಣಾ ಮತಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಒಂದು ವೇಳೆ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ವರುಣ ಕ್ಷೇತ್ರ : ಕಾಂಗ್ರೆಸ್ಸಿಗೆ ಸುಲಭ ಗೆಲುವು ಕಷ್ಟ ವರುಣ ಕ್ಷೇತ್ರ : ಕಾಂಗ್ರೆಸ್ಸಿಗೆ ಸುಲಭ ಗೆಲುವು ಕಷ್ಟ

ಏಪ್ರಿಲ್ ಏಪ್ರಿಲ್ 21ರಂದು ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮ ಗುರಿ. ಹೀಗಾಗಿ ವರುಣಾದಿಂದ ನನಗೆ ಬಿಜೆಪಿ ಯಿಂದ ಟಿಕೆಟ್ ಕೊಡಿ, ಬಿಜೆಪಿಯಿಂದ ‌ಸ್ಪರ್ಧೆ ಮಾಡಿ ಸಿದ್ದರಾಮಯ್ಯ ಪುತ್ರ ಯತೀಂದ್ರ ‌ರನ್ನು ಸೋಲಿಸುತ್ತೇನೆ ಎಂದರು.

Karnataka election: Eshwarappa former aide will contest in Varuna

ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡಿದರೆ ಅಲ್ಲಿ ಗೆಲ್ಲುವುದಕ್ಕೆ ಆಗುವುದಿಲ್ಲ, ವರುಣಾ ಕ್ಷೇತ್ರದಲ್ಲಿ ನನಗೆ ಸಂಬಂಧಿಕರು, ಸ್ನೇಹಿತರು, ಬೆಂಬಲಿಗರ ಅಪಾರ ಸಂಖ್ಯೆಯಲ್ಲಿದ್ದಾರೆ, ಹೀಗಾಗಿ ವರುಣಾ ವಿಧಾನಸಭಾ ‌ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಿ‌ ಗೆದ್ದು ಬರುತ್ತೇನೆ ಎಂದು ಹೇಳಿದರು.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿಲ್ಲ ಅಂದ್ರೆ ಪಕ್ಷೇತರ ಅಭ್ಯರ್ಥಿ ಯಾಗಿ ಕಣಕ್ಕಿಳಿಯುತ್ತೇನೆ, ಸ್ವತಂತ್ರ ಅಭ್ಯರ್ಥಿ ಯಾಗಿ ಕಣಕ್ಕಿಳಿದು ವಿಜಯೇಂದ್ರ ಹಾಗು ಯತೀಂದ್ರ ರಿಬ್ಬರನ್ನು ಸೋಲಿಸುತ್ತೇನೆ ಎಂದು ಭರವಸೆ ನೀಡಿದರು. ಮೇ 2017ರಂದು ವಿನಯ್ ಅವರ ಮೇಲೆ ಹಲ್ಲೆ ನಡೆದಿತ್ತು. ಬಿಎಸ್ ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ಸಂತೋಷ್ ಅವರನ್ನು ಪ್ರಮುಖ ಆರೋಪಿ ಎಂದು ಕರೆಯಲಾಗಿತ್ತು.

English summary
N.S. Vinay, former aide of senior BJP leader K.S.Eshwarappa will file his nomination for Varuna assembly constituency. He told reporters on Wednesday in Bangalore that he has sought BJP ticket and if he failed to get the same will contest as independent candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X