Election Results 2023: ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ; ಏನಿರುತ್ತೆ? ಏನಿರಲ್ಲ?
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ 224 ಕ್ಷೇತ್ರಗಳಿಗೆ ಬುಧವಾರ, ಮೇ 10ರಂದು ಮತದಾನ ನಡೆದಿದ್ದು, ಶನಿವಾರ, ಮೇ 13ರಂದು ಬಹು ನಿರೀಕ್ಷೆಯ ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಗೊಳ್ಳಲಿದೆ.
ಫಲಿತಾಂಶಕ್ಕೂ ಮುನ್ನ ಅಭ್ಯರ್ಥಿಗಳು ರಿಲ್ಯಾಕ್ಸ್ ಮೂಡ್‌ನಲ್ಲಿದ್ದರೆ, ಕೆಲವರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ. ಪಕ್ಷಗಳ ನಾಯಕರು ಸರ್ಕಾರ ರಚನೆಯ ಬಗ್ಗೆ ತಲೆಕಡೆಸಿಕೊಂಡಿದ್ದಾರೆ. ಪ್ರಮುಖ ನಾಯಕರು ಮುಖ್ಯಮಂತ್ರಿ ಹುದ್ದೆಗೇರಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯದ 224 ಕ್ಷೇತ್ರಗಳಲ್ಲಿ ಬಹುತೇಕ ಕಡೆ ಶಾಂತಿಯುತ ಮತದಾನ ನಡೆದಿದ್ದು, ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದೆ.
ಮತ ಎಣಿಕೆ ವೇಳೆ ಮತ್ತು ಫಲಿತಾಂಶದ ಬಳಿಕ ಕಾರ್ಯಕರ್ತರ ಗಲಾಟೆ ಮತ್ತು ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶನಿವಾರ, ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದು, ಶನಿವಾರ, ಮೇ 13ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಯಲ್ಲಿರುತ್ತದೆ. ಐವರಿಗಿಂತ ಹೆಚ್ಚು ಜನರು ಗುಂಪು ಸೇರದಂತೆ ಸೂಚನೆ ನೀಡಲಾಗಿದೆ.

ಏನಿರುತ್ತೆ?
ವೈದ್ಯಕೀಯ ಸೇವೆ, ಹಾಲು, ಔಷಧಿ, ಹೋಟೆಲ್, ಅಗತ್ಯ ವಸ್ತುಗಳು, ಮದುವೆ, ಶವಸಂಸ್ಕಾರ ಬಿಟ್ಟು ಉಳಿದೆಲ್ಲದಕ್ಕೂ ಪ್ರತಿಬಂಧಕಾಜ್ಞೆ ಅನ್ವಯವಾಗಲಿದೆ.
ಏನಿರಲ್ಲ?
ಬೆಂಗಳೂರು ನಗರದಲ್ಲಿ ಸ್ಫೋಟಕ ವಸ್ತುಗಳ ಸಾಗಾಟ, ಪಟಾಕಿ ಸಿಡಿಸುವುದು, ಪ್ರತಿಕೃತಿ ಪ್ರದರ್ಶನ, ದಹನ, ಬಹಿರಂಗ ಘೋಷಣೆ ಕೂಗುವುದು, ಸಂಗೀತ ನುಡಿಸುವುದು, ಭಿತ್ತಿಪತ್ರ ಪ್ರದರ್ಶನ ಕೂಡ ನಿಷೇಧಿಸಲಾಗಿದೆ.
ವಿಧಾನಸಭೆ ಚುನಾವಣೆ 2023: ದಾಖಲೆ ಮತದಾನ
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇ.73.19ರಷ್ಟು ಮತದಾನವಾಗಿದೆ ಎಂದು ಕರ್ನಾಟಕ ಚುನಾವಣಾ ಆಯೋಗ ಅಧಿಕೃತವಾಗಿ ತಿಳಿಸಿದೆ. ಆ ಮೂಲಕ ಮತದಾನದಲ್ಲಿ ಕರ್ನಾಟಕ ಐತಿಹಾಸಿಕ ದಾಖಲೆ ಬರೆದಿದೆ.
ಈ ಬಾರಿಯ ಮತದಾನ ಶೇಕಡಾವಾರು ಕಳೆದ ಬಾರಿಗಿಂತ ಶೇ.0.73 ರಷ್ಟು ಕಡಿಮೆಯಾಗಿದೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ 73.04ರಷ್ಟು ಮತದಾನವಾಗಿತ್ತು. ಈ ಬಾರಿಯ ಮತದಾರರ ಸಂಖ್ಯೆಗೆ ಹೋಲಿಸಿದರೆ ಕಡಿಮೆ ಎನ್ನಬಹುದು.
ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 5,30,85,566 ಮತದಾರರ ಪೈಕಿ 3,88,51,807 ಮತದಾರರಿಂದ ಹಕ್ಕು ಚಲಾವಣೆ ಮಾಡಲಾಗಿದೆ. ಇದರಲ್ಲಿ 1,96,58,398 ಪುರುಷ ಮತದಾರರಿಂದ ಹಕ್ಕು ಚಲಾಯಿಸಿದ್ದರೆ, 1,91,92,372 ಮಹಿಳಾ ಮತದಾರರಿಂದ ಮತ ಚಲಾವಣೆ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು 1037 ಇತರೆ ಮತದಾರು ಮತ ಚಲಾಯಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications