ಮತಕೇಂದ್ರದ ಬಳಿಯೇ ಎಲ್‌ಪಿಜಿ ಸಿಲಿಂಡರ್‌ಗೆ ಹಾರ ಹಾಕಿ, ಪೂಜೆ ಮಾಡಿ ಮತದಾನಕ್ಕೆ ತೆರಳಿದ ಬೆಂಗಳೂರು ಯುವತಿಯರು
ಬೆಂಗಳೂರು, ಮೇ 10: ಕರ್ನಾಟಕ ವಿಧಾನಸಭೆ ಚುನಾವಣೆಗೆ ( Karnataka Assembly Elections 2023 ) ಇಂದು ಮತದಾನ ನಡೆಯುತ್ತಿದೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಪೈಪೋಟಿ ನಡೆಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ಮತ್ತು ಎಸ್‌ಡಿಪಿಐ ಪಕ್ಷಗಳು ಈ ಬಾರಿಯ ಚುನಾವಣೆಯಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿವೆ.
ಬೆಲೆ ಏರಿಕೆ, ಆಡಳಿತವಿರೋಧಿ ಅಲೆಯನ್ನು ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರವನ್ನಾಗಿ ಬಳಸಿಕೊಂಡಿದ್ದಾರೆ. ಅದರ ಭಾಗವಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ ಏರಿಕೆ ವಿಚಾರವನ್ನು ಚುನಾವಣಾ ತಂತ್ರವನ್ನಾಗಿಸಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗೆ ಹಾರ ಹಾಕಿ ಅದರ ಬಳಿ ಅಗರಬತ್ತಿ ಪೂಜೆ ಸಲ್ಲಿಸಿದ್ದಾರೆ. ಆ ನಂತರ ಅವರು ಮತದಾನಕ್ಕೆ ತೆರಳಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ.
#WATCH | Congress workers garland an LPG gas cylinder and burn incense sticks near it, in Bengaluru's Rajarajeshwari Nagar area#KarnatakaAssemblyElection2023 pic.twitter.com/f3v8XBwswS
— ANI (@ANI) May 10, 2023
ಹೈವೋಲ್ಟೇಜ್ ಪ್ರಚಾರದ ನಂತರ ಕರ್ನಾಟಕವು ಮತಯಂತ್ರಗಳ ಮೆಗಾ ಕದನಕ್ಕೆ ಸಜ್ಜಾಗಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ರಾಜ್ಯದಾದ್ಯಂತ 58,545 ಮತಗಟ್ಟೆಗಳಲ್ಲಿ ಒಟ್ಟು 5,31,33,054 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಸ್ಪರ್ಧೆಯಲ್ಲಿರುವ ಪ್ರಮುಖ ರಾಜಕೀಯ ಪಕ್ಷಗಳೆಂದರೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್. ಸರ್ಕಾರ ರಚಿಸಲು ಬಹುಮತದ ಮ್ಯಾಜಿಕ್ ನಂಬರ್‌ಗಳು 113 ಸ್ಥಾನಗಳು.
ಕರ್ನಾಟಕದಲ್ಲಿ ಹೆಚ್ಚಿನ ಮತದಾನವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಇದೇ ವೇಳೆ ಕಾಂಗ್ರೆಸ್ ಪಕ್ಷವು 'ಬುದ್ಧಿವಂತಿಕೆಯಿಂದ ಮತ ಚಲಾಯಿಸುವಂತೆ' ಮತದಾರರನ್ನು ಕೋರಿದೆ.

ಚುನಾವಣೋತ್ತರ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, 'ಚಾನ್ಸ್ ಇಲ್ಲ, ನಾವೇ ಸರಕಾರ ರಚಿಸುತ್ತೇವೆ' ಎಂದು ಹೇಳಿದ್ದಾರೆ.
'ಮತದಾರರಿಂದ ಪ್ರಚಂಡ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇ.60ಕ್ಕೂ ಹೆಚ್ಚು ಮತಗಳನ್ನು ನಾವು ಪಡೆಯುತ್ತೇವೆ. ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ. ನಾನು ನಿವೃತ್ತಿಯಾಗುವುದಿಲ್ಲ. ಆದರೆ, ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ' ಎಂದು ಕರ್ನಾಟಕದ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ ಚಲಾಯಿಸಿದ ಬಳಿಕ ಹೇಳಿದರು.
ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರು 2023 ರ ಕರ್ನಾಟಕ ಚುನಾವಣೆಗಾಗಿ ಮೈಸೂರಿನ ಮತಗಟ್ಟೆಯಲ್ಲಿ ಬುಧವಾರ ಮತ ಚಲಾಯಿಸಿದರು.
ನಂತರ ಮಾತನಾಡಿದ ಅವರು, 'ಒಳ್ಳೆಯ ಪ್ರಜಾಪ್ರಭುತ್ವಕ್ಕಾಗಿ ಜನರು ಆಗಮಿಸಿ, ಮತ ಚಲಾಯಿಸಿ ಮತ್ತು ಉತ್ತಮ ನಾಯಕನನ್ನು ಆಯ್ಕೆ ಮಾಡಲು ನಾನು ವಿನಂತಿಸುತ್ತೇನೆ. ನಾನು ಸಹ ಮತ ಹಾಕಿದ್ದೇನೆ. ನಾವು ಪ್ರಜಾಪ್ರಭುತ್ವದಲ್ಲಿ ಭಾಗವಹಿಸಬೇಕು' ಎಂದೂ ಹೇಳಿದರು.












Click it and Unblock the Notifications