BY Vijayendra: ಉಸಿರು ಇರೋವರೆಗೂ ವರುಣಾ ಜನರನ್ನು ಕೈಬಿಡಲ್ಲ: ವಿಜಯೇಂದ್ರ
ಮೈಸೂರು: ಚುನಾವಣೆ ಕಾವು ಕ್ಷಣಕ್ಷಣಕ್ಕೂ ಏರುತ್ತಿದೆ. ಅದ್ರರಲ್ಲೂ ಹೈವೋಲ್ಟೇಜ್ ಕ್ಷೇತ್ರಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಈ ಪೈಕಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರದ ಮೇಲೆ ದೇಶದ ಗಮನ ನೆಟ್ಟಿದೆ. ಈ ಹೊತ್ತಲ್ಲೇ ಮೈಸೂರು ಪ್ರಚಾರ ಅಖಾಡಕ್ಕೆ ಭರ್ಜರಿ ಎಂಟ್ರಿಕೊಟ್ಟಿರುವ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ಶುರು ಮಾಡಿದ್ದಾರೆ
ಸಿದ್ದರಾಮಯ್ಯ ಸೋಲಿಗೆ ರಣತಂತ್ರ ರೂಪಿಸಿರುವ ಬಿಜೆಪಿ ನಾಯಕರು, ಈ ಬಾರಿ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲ್ಲಲೇಬಾರದು ಎಂದು ಪಣತೊಟ್ಟಿದ್ದಾರೆ. ಇದೇ ಕಾರಣಕ್ಕೆ ವರುಣಾ ಕ್ಷೇತ್ರದಲ್ಲಿ ಲಿಂಗಾಯತ ಅಸ್ತ್ರ ಬಳಸುವುದಕ್ಕೂ ಮುಂದಾಗಿದ್ದಾರೆ. ಸಚಿವ ವಿ. ಸೋಮಣ್ಣ ಮಾಜಿ ಸಿಎಂ ಸಿದ್ದರಾಮಯ್ಯ ಎದುರಾಳಿ ಆಗಿದ್ದಾರೆ. ಆದರೆ ಇದಕ್ಕೂ ಮುನ್ನ ಬಿ.ವೈ. ವಿಜಯೇಂದ್ರ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಲೆಕ್ಕಾಚಾರ ಬದಲಾಗಿರುವ ಕಾರಣ ವಿ. ಸೋಮಣ್ಣ ಸ್ಪರ್ಧಿಸುತ್ತಿದ್ದಾರೆ. ಆದರೂ ವರುಣಾ ಅಖಾಡಕ್ಕೆ ವಿಜಯೇಂದ್ರ ಎಂಟ್ರಿಯಾಗಿದೆ.

ಕಾಂಗ್ರೆಸ್, ಜೆಡಿಎಸ್‌ಗೆ ಶಾಕ್!
ಶಿಕಾರಿಪುರ ಕ್ಷೇತ್ರದಿಂದ ವಿಧಾನಸಭೆ ಅಖಾಡಕ್ಕೆ ಎಂಟ್ರಿ ಕೊಟ್ಟಿರುವ ಬಿ.ವೈ. ವಿಜಯೇಂದ್ರ ಗೆಲ್ಲುವ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇದೇ ಕಾರಣಕ್ಕೆ ರಾಜ್ಯದ ವಿವಿಧೆಡೆ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಅದರಲ್ಲೂ ಮೈಸೂರು ಭಾಗದಲ್ಲಿ ಈ ಮೊದಲು ಕೂಡ ಪಕ್ಷ ಸಂಘಟನೆ ಮಾಡಿ ಅನುಭವ ಇರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟು ಮಾಜಿ ಸಿಎಂ ಸಿದ್ದರಾಮಯ್ಯಗೆ ಸವಾಲು ಎಸೆದಿದ್ದಾರೆ. ಮೈಸೂರಿನ ಟಿ.ನರಸೀಪುರದಲ್ಲಿ ಮಾತನಾಡಿರುವ ಬಿ.ವೈ. ವಿಜಯೇಂದ್ರ ಕಾಂಗ್ರೆಸ್, ಜೆಡಿಎಸ್‌ಗೆ ಶಾಕ್ ನೀಡಿದ್ದಾರೆ.
ವರುಣ ಜನರನ್ನು ಕೈಬಿಡಲ್ಲ!
ಅಷ್ಟಕ್ಕೂ ಪಕ್ಷ ಸಂಘಟನೆಗಾಗಿ ಮೈಸೂರಿಗೆ ಬಂದಿರುವ ವಿಜಯೇಂದ್ರ, ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೇ 13ರಂದು ಕಾಂಗ್ರೆಸ್, ಜೆಡಿಎಸ್‌ಗೆ ಆಘಾತ ಕಾದಿದೆ ಎಂದು ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಜೊತೆಗೆ ನನ್ನ ಉಸಿರು ಇರೋವರೆಗೂ ವರುಣಾ ಜನರನ್ನ ಕೈಬಿಡುವುದಿಲ್ಲ. ಪಕ್ಷಕ್ಕಾಗಿ ಹಗಲಿರುಳು ಎಲ್ಲರೂ ದುಡಿಯೋಣ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗೇ ಯಾವ ದುಷ್ಟ ಶಕ್ತಿಯೂ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್, ಜೆಡಿಎಸ್‌ಗೆ ಸವಾಲು ಹಾಕಿದ್ದಾರೆ.
ಲಿಂಗಾಯತ ಅಸ್ತ್ರಕ್ಕೆ ಪ್ರತ್ಯಸ್ತ್ರ!
ಲಿಂಗಾಯತ ನಾಯಕರನ್ನು ತುಳಿಯುತ್ತಿದ್ದಾರೆ, ಬಿಎಸ್‌ವೈ ಅವರನ್ನು ಮೂಲೆಗುಂಪೆ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪದ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಅವರ ರಟ್ಟೆ ಗಟ್ಟಿಯಾಗಿದೆ. ವೀರಶೈವ ಲಿಂಗಾಯತರನ್ನ ಕಾಂಗ್ರೆಸ್ ಯಾವ ರೀತಿ ನಡೆಸಿಕೊಂಡಿದೆ ಅಂತಾ ಜನತೆಗೆ ಗೊತ್ತು. ಚುನಾವಣೆ ಸಂದರ್ಭದಲ್ಲಿ ಯಾರೋ ಒಬ್ಬರು ಕಾಂಗ್ರೆಸ್‌ಗೆ ಬಂದಿದ್ದಾರೆ ಅಂತಾ ಬಿಜೆಪಿಯಿಂದ ಲಿಂಗಾಯತರಿಗೆ ಅನ್ಯಾಯ ಆಗಿದೆ ಎಂದು ಬಿಂಬಿಸಲು ಹೊರಟಿದ್ದಾರೆ. ಆದರೆ ಇದನ್ನೆಲ್ಲಾ ಯಾರೂ ಒಪ್ಪುವುದಿಲ್ಲ ಎಂದಿದ್ದಾರೆ ವಿಜಯೇಂದ್ರ.
ಒಂದು ಕಡೆ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಬಿಜೆಪಿ ಕೂಡ ಮಾಸ್ಟರ್ ಪ್ಲ್ಯಾನ್ ಮಾಡಿ, ಲಿಂಗಾಯತ ನಾಯಕರನ್ನೇ ಚುನಾವಣಾ ಅಖಾಡಕ್ಕೆ ಇಳಿಸಿ ಕಾಂಗ್ರೆಸ್ ಮಾಡುತ್ತಿರುವ ಲಿಂಗಾಯತ ವಿರೋಧಿ ಆರೋಪದಿಂದ ಮುಕ್ತವಾಗಲು ತಂತ್ರ ರೂಪಿಸಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಬಿ.ವೈ. ವಿಜಯೇಂದ್ರ ಕೂಡ ಗುಡುಗಿದ್ದಾರೆ.
ಒಟ್ನಲ್ಲಿ ಮತದಾನಕ್ಕೆ ಕೌಂಟ್‌ಡೌನ್ ಶುರುವಾಗಿರುವ ಬೆನ್ನಲ್ಲೇ ಅಸ್ತ್ರ ಮತ್ತು ಪ್ರತ್ಯಸ್ತ್ರ ಜೋರಾಗಿದೆ. ರಾಜಕೀಯ ಪಕ್ಷಗಳ ಈ ಆರೋಪ, ಪ್ರತ್ಯಾರೋಪಕ್ಕೆ ಕರ್ನಾಟಕದ ಮತದಾರ ಪ್ರಭು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾನೆ ಎಂಬುದನ್ನ ಕಾದು ನೋಡಬೇಕು. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಂದೇ ಎಲ್ಲರ ರಾಜಕೀಯ ಭವಿಷ್ಯವೂ ನಿರ್ಧಾರವಾಗಲಿದೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications