Karnataka Elections 2023: 40% ಭ್ರಷ್ಟಾರಿಗಳ ವಿರುಧ್ಧ ನನ್ನ ಮತ ಚಲಾಯಿಸಿದ್ದೇನೆ: ಪ್ರಕಾಶ್ ರಾಜ್
ಬೆಂಗಳೂರು, ಮೇ 10: ರಾಜ್ಯ ವಿಧಾನಸಭಾ ಚುನಾವಣೆಗೆ ಆರಂಭವಾಗಿದೆ. ಇಂದು( ಬುಧವಾರ) ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೂ ಮತದಾನ ಪ್ರಕ್ರಿಯೆ ನಡೆಯಲಿದ್ದು, ಬೆಳಗ್ಗೆ ಬಹುಭಾಷಾ ನಟ ಪ್ರಕಾಶ್‌ರಾಜ್ ಅವರ ಬೆಂಗಳೂರಿನ ಶಾಂತಿ ನಗರ ಸೇಂಟ್ ಜೋಸೆಫ್ ಸ್ಕೂಲ್‌ನಲ್ಲಿ ಸಾಮಾನ್ಯರಂತೆ ಸರದಿ ಸಾಲಿನಲ್ಲಿ ಬಂದು ಮತ ಚಲಾಯಿಸಿದರು.

ಇನ್ನೂ ಈ ಕುರಿತು ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದು, ಮನಃಸಾಕ್ಷಿಯಿಂದ ಮತ ಚಲಾಯಿಸಿ ಎಂದು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ನನ್ನ ಪ್ರೀತಿಯ ಕನ್ನಡಿಗರೆ.. ನಾನು ಮತೀಯ ರಾಜಕಾರಣದ ವಿರುದ್ಧ.. 40% ಭ್ರಷ್ಟಾಚಾರಿಗಳ ವಿರುದ್ಧ ನನ್ನ ಮತ ಚಲಾಯಿಸಿದ್ದೇನೆ. ನೀವು ನಿಮ್ಮ ಮನಃಸಾಕ್ಷಿಯಿಂದ.. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಲು ನಿಮ್ಮ ಮತವನ್ನು ಚಲಾಯಿಸಿ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಹೇಳಿದ್ದಾರೆ.
ಈಗಾಗಲೇ ಬಿಜೆಪಿ ರಾಜ್ಯ ಸರ್ಕಾರ 40% ಕಮಿಷನ್ ಆರೋಪ ಹೊತ್ತಿರುವ ಬಿಜೆಪಿ ಸರ್ಕಾರದ ವಿರುದ್ದ ಈ ಹಿಂದೆಯೂ ಅಸಮಾಧಾನ ವ್ಯಕ್ತಪಡಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ 40% ಭ್ರಷ್ಟಾಚಾರಿಗಳ ವಿರುದ್ಧ ನನ್ನ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದಾರೆ.
ನನ್ನ ಪ್ರೀತಿಯ ಕನ್ನಡಿಗರೆ.. ನಾನು ಮತೀಯ ರಾಜಕಾರಣದ ವಿರುಧ್ಧ.. 40% ಭ್ರಷ್ಟಾರಿಗಳ ವಿರುಧ್ಧ ನನ್ನ ಮತ ಚಲಾಯಿಸಿದ್ದೇನೆ.. ನೀವು ನಿಮ್ಮ ಮನಃಸಾಕ್ಷಿಯಿಂದ.. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಲು ನಿಮ್ಮ ಮತವನ್ನು ಚಲಾಯಿಸಿ 🙏🏿🙏🏿#justasking #KarnatakaAssemblyElection2023 https://t.co/Vtxywpqpid
— Prakash Raj (@prakashraaj) May 10, 2023












Click it and Unblock the Notifications