ಶಿವಾಜಿನಗರ: ಹಾಲಿ ಶಾಸಕ ರಿಜ್ವಾನ್ ಅರ್ಷದ್ ಗೆಲುವಿಗೆ ಮಾಜಿ ಶಾಸಕ ರೋಷನ್ ಬೇಗ್ ಅಡ್ಡಿ!
ಬೆಂಗಳೂರು, ಏಪ್ರಿಲ್. 24: ಉತ್ತಮ ಸ್ಥಿತಿಯಲ್ಲಿರುವ ಪ್ರದೇಶಗಳು ಮತ್ತು ಕೊಳೆಗೇರಿಗಳ ಮಿಶ್ರಣವಾಗಿರುವ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರವು ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ. ಪ್ರಸ್ತುತ ರಿಜ್ವಾನ್ ಅರ್ಷದ್ ಈ ಕ್ಷೇತ್ರದ ಶಾಸಕರಾಗಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ರೋಷನ್ ಬೇಗ್ ಐಎಂಎ ಹಗರಣದಲ್ಲಿ ಸಿಲುಕಿ ಶಾಸಕ ಸ್ಥಾನದಿಂದ ಅನರ್ಹರದ ಬಳಿಕ, 2019 ರ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ರಿಜ್ವಾನ್ ಅರ್ಷದ್ ಚುನಾಯಿತರಾಗಿದ್ದರು. ರಾಮಸ್ವಾಮಿಪಾಳ್ಯ, ಜಯಮಹಲ್, ಹಲಸೂರು, ಭಾರತಿನಗರ, ಶಿವಾಜಿನಗರ, ವಸಂತನಗರ ಮತ್ತು ಸಂಪಂಗಿರಾಮ್ ನಗರಗಳ ಬಿಬಿಎಂಪಿ ವಾರ್ಡ್‌ಗಳನ್ನು ಈ ಕ್ಷೇತ್ರ ಒಳಗೊಂಡಿದೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರವು ಮುಸ್ಲಿಂ ಜನಸಂಖ್ಯೆಯ ಪ್ರಾಬಲ್ಯವನ್ನು ಹೊಂದಿದೆ. ಮುಸ್ಲಿಂ ಸಮುದಾಯದ ಜೊತೆಗೆ ಕ್ರಿಶ್ಚಿಯನ್ ಮತ್ತು ತಮಿಳು ಮಾತನಾಡುವ ಜನಸಂಖ್ಯೆಯು ಕ್ಷೇತ್ರದ ಅವಿಭಾಜ್ಯ ಅಂಗವಾಗಿದೆ. ಹಿಂದಿನ ಚುನಾವಣಾ ಫಲಿತಾಂಶಗಳ ಪ್ರಕಾರ, ಶಿವಾಜಿನಗರದ ಕಾಂಗ್ರೆಸ್ ಭದ್ರಕೋಟೆಯಲ್ಲಿ ಕೆಲವೊಮ್ಮೆ ಜನತಾ ಪಕ್ಷದ ಪ್ರಬಲ ಅಸ್ತಿತ್ವವನ್ನು ಕಂಡಿದೆ.
ಮಾಜಿ ಶಾಸಕ ರೋಷನ್ ಬೇಗ್ ಇಲ್ಲಿ ದೀರ್ಘಕಾಲದಿಂದ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿದ್ದಾರೆ. ಇಲ್ಲಿ ನಡೆದ 13 ಚುನಾವಣೆಗಳಲ್ಲಿ ಕಾಂಗ್ರೆಸ್ ಏಳು ಬಾರಿ, ಜನತಾ ಪಕ್ಷ ಮೂರು ಬಾರಿ ಮತ್ತು ಬಿಜೆಪಿ ಎರಡು ಬಾರಿ ಕ್ಷೇತ್ರವನ್ನು ವಶಪಡಿಸಿಕೊಂಡಿದೆ. ಈ ಭಾಗದ 2 ಲಕ್ಷ ಮತದಾರರಲ್ಲಿ 75 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರಿರುವುದರಿಂದ ಇಲ್ಲಿನ ಜನರು ಒಂಬತ್ತು ಬಾರಿ ಮುಸ್ಲಿಂ ಅಭ್ಯರ್ಥಿಯನ್ನು ಶಾಸಕರಾಗಿ ಆಯ್ಕೆ ಮಾಡಿದ್ದಾರೆ.
ಕಾಂಗ್ರೆಸ್ ಹಾಲಿ ಶಾಸಕ ರಿಜ್ವಾನ್ ಅರ್ಷದ್ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿ ಎನ್ ಚಂದ್ರುಗೆ ಟಿಕೆಟ್ ನೀಡಿದೆ. ಜೆಡಿಎಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದು, ಸದ್ಯ ಶಿವಾಜಿನಗರ ಕ್ಷೇತ್ರದಿಂದ 21 ಅಭ್ಯರ್ಥಿಗಳು ಕಣದಲ್ಲಿದ್ದು, ಸೋಮವಾರ ಸಂಜೆಯ ಒಳಗೆ ಕೆಲವರು ನಾಮಪತ್ರ ಹಿಂಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೇಲ್ನೋಟಕ್ಕೆ, ಶಿವಾಜಿನಗರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಹೋರಾಟ ಕಂಡುಬರುತ್ತಿದೆ. ಆದರೆ ಅಸಲಿ ಆಟವಿರುವುದು ಹಾಲಿ ಶಾಸಕ ರಿಜ್ವಾನ್ ಅರ್ಷದ್ ಮತ್ತು ಮಾಜಿ ಶಾಸಕ ರೋಷನ್ ಬೇಗ್ ಅವರ ನಡುವೆ ಎನ್ನುವ ಮಾಹಿತಿ ಬಂದಿದೆ. ಸ್ವತಂತ್ರ ಅಭ್ಯರ್ಥಿಯಾಗಿ ತನ್ನ ಪತ್ರಗಳನ್ನು ಸಲ್ಲಿಸಿದ ತನ್ವೀರ್ ಅಹ್ಮದ್, ಹಾಲಿ ಶಾಸಕ ಅರ್ಷದ್‌ಗೆ ಅಡ್ಡಿಯಾಗುತ್ತಿದ್ದಾರೆ.
ಇದಕ್ಕೆ ಕಾರಣ ಯಾವುದೇ ಪಕ್ಷದಿಂದ ಟಿಕೆಟ್ ಪಡೆಯದ ಮತ್ತು ಕ್ಷೇತ್ರದಲ್ಲಿ ಮತ್ತೆ ಹಿಡಿತ ಸಾಧಿಸಲು ಬಯಸುತ್ತಿರುವ ರೋಷನ್ ಬೇಗ್ ಅವರು ತನ್ವೀರ್ ಅಹ್ಮದ್ ಅವರನ್ನು ಬೆಂಬಲಿಸಿದ್ದಾರೆ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಇದು ರಿಜ್ವಾನ್ ಅರ್ಷದ್ ಮತ್ತು ರೋಷನ್ ಬೇಗ್ ನಡುವಿನ ಜಟಾಪಟಿ ಎನ್ನಲಾಗಿದೆ.
2019 ರ ಉಪಚುನಾವಣೆಯಲ್ಲಿ ರಿಜ್ವಾನ್ ಅರ್ಷದ್ ಅವರು ಬಿಜೆಪಿಯ ಎಂ ಶರವಣ ಅವರನ್ನು 13,521 ಮತಗಳ ಅಂತರದಿಂದ ಸೋಲಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಅವರು ಬಿಜೆಪಿ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ನೀತಿಯ ಅನುಕೂಲಗಳನ್ನು ಹೊಂದಿದ್ದಾರೆ. ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆದ ಹಿಜಾಬ್ ಮತ್ತು ಹಲಾಲ್ ನಿಷೇಧದಂತಹ ಸಮಸ್ಯೆಗಳು ರಿಜ್ವಾನ್ ಗೆಲುವಿಗೆ ಕಾರಣಗಳಾಗಬಹುದು.
ಆದರೆ, ಈ ಕ್ಷೇತ್ರದಲ್ಲಿ ಕನಿಷ್ಠ ಮೂರು ವಾರ್ಡ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ತಮಿಳು ಮತದಾರರು ರಿಜ್ವಾನ್ ಅರ್ಷದ್ ಅವರನ್ನು ಬೆಂಬಲಿಸುತ್ತಾರೆಯೇ ಎಂಬುದರ ಮೇಲೆ ಅವರ ಭವಿಷ್ಯ ನಿಂತಿದೆ. ಇನ್ನು, ಕ್ಷೇತ್ರದ ಮತದಾರರು ಅಭ್ಯರ್ಥಿಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆಯನ್ನು ಹೊಂದಿದ್ದು, ಸ್ವಚ್ಛತೆ, ಕಸ, ಸೋರುತ್ತಿರುವ ಒಳಚರಂಡಿ ಪೈಪ್‌ಗಳು, ನೀರು ಸರಬರಾಜು ಮುಂತಾದ ಹಲವಾರು ಮೂಲಭೂತ ಸಮಸ್ಯೆಗಳಿಗೆ ಆದ್ಯತೆಯ ಮೇಲೆ ಪರಿಹರಿಸಬೇಕಾಗಿದೆ ಎಂದು ಬಹುತೇಕರು ಹೇಳಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications