ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ವರ್ಗಾವಣೆ

ಬೆಂಗಳೂರು, ಮೇ 03 : ಕರ್ನಾಟಕ ವಿಧಾನಸಭೆ ಚುನಾವಣೆಗೆ 8 ದಿನ ಬಾಕಿ ಇರುವಾಗ ಬಿಬಿಎಂಪಿ ಆಯುಕ್ತರನ್ನು ವರ್ಗಾವಣೆ ಮಾಡಲಾಗಿದೆ. ಎಂ.ಮಹಾಬಲೇಶ್ವರರಾವ್ ಅವರನ್ನು ಬಿಬಿಎಂಪಿಯ ನೂತನ ಆಯಕ್ತರಾಗಿ ನೇಮಕ ಮಾಡಲಾಗಿದೆ.

ಚುನಾವಣಾ ಆಯೋಗದ ಸೂಚನೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ ಪ್ರಸಾದ್ ಅವರನ್ನು ವರ್ಗಾವಣೆ ಮಾಡಲಾಗಿದೆ. 2016ರ ಏಪ್ರಿಲ್ 22ರಂದು ಮಂಜುನಾಥ ಪ್ರಸಾದ್ ಅವರನ್ನು ಆಯುಕ್ತರಾಗಿ ನೇಮಕ ಮಾಡಲಾಗಿತ್ತು.

ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಚುನಾವಣೆಗೆ 8 ದಿನಗಳು ಬಾಕಿ ಇರುವಾಗ ಈ ವರ್ಗಾವಣೆ ನಡೆದಿದೆ.

Karnataka elections : BBMP commissioner N.Manjunatha Prasad transferred

ಅಧಿಕಾರಿಗಳ ವರ್ಗಾವಣೆ : ಮೈಸೂರು ಜಿಲ್ಲಾಧಿಕಾರಿ ದರ್ಪಣ ಜೈನ್ ಅವರನ್ನು ಏಪ್ರಿಲ್ 30ರಂದು ವರ್ಗಾವಣೆ ಮಾಡಲಾಗಿತ್ತು. ಅಭಿರಾಮ್ ಜಿ.ಶಂಕರ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿತ್ತು.

ಏಪ್ರಿಲ್ 24ರಂದು ಹಾಸನ ಜಿಲ್ಲಾಧಿಕಾರಿ ಡಾ.ರಣದೀಪ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಪಿ.ಸಿ.ಜಾಫರ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು.

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ದರಿಂದ, ಸರ್ಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತಿಲ್ಲ. ಚುನಾವಣಾ ಆಯೋಗ ಸೂಚನೆ ನೀಡಿದರೆ ಅಧಿಕಾರಿಗಳನ್ನು ವರ್ಗಾವಣೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+