ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಪ್ರಕಾಶ್ ಜಾವಡೇಕರ್!

|
Google Oneindia Kannada News

ಬೆಂಗಳೂರು, ಮೇ 16 : ಕರ್ನಾಟಕ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬುಧವಾರ ಬೆಳಗ್ಗೆ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಪ್ರಕಾಶ್ ಜಾವಡೇಕರ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು 20 ನಿಮಿಷದ ಮಾತುಕತೆಗಳ ಬಳಿಕ ಜಾವಡೇಕರ್ ಬಿಜೆಪಿ ಕಚೇರಿಗೆ ವಾಪಸ್ ಆಗಿದ್ದಾರೆ.

ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ, ರಾಜ್ಯಪಾಲರ ಭೇಟಿ ಸಾಧ್ಯತೆಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ, ರಾಜ್ಯಪಾಲರ ಭೇಟಿ ಸಾಧ್ಯತೆ

'ನನ್ನ ಜೊತೆ ಯಾವುದೇ ಮಾತುಕತೆ ಬೇಡ. ತಂದೆಯ ಜೊತೆ ಹೋಗಿ ಮಾತನಾಡಿ' ಎಂದು ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದಾರೆ. ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಿಂದ ಕುಮಾರಸ್ವಾಮಿ ಅವರು ಶಾಂಗ್ರಿಲಾ ಹೋಟೆಲ್‌ಗೆ ತೆರಳಿದ್ದು, ಅಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ.

ಪ್ಲ್ಯಾನ್ ಇದೆ... ಏನು ಎಂದು ಆಮೇಲೆ ಹೇಳ್ತೀವಿ: ಡಿಕೆಶಿಪ್ಲ್ಯಾನ್ ಇದೆ... ಏನು ಎಂದು ಆಮೇಲೆ ಹೇಳ್ತೀವಿ: ಡಿಕೆಶಿ

Karnataka elections result 2018 : Prakash Javadekar meets HD Kumaraswamy

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಯಡಿಯೂರಪ್ಪ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಿದ್ದು, ಸರ್ಕಾರ ರಚನೆಗೆ ರಾಜ್ಯಪಾಲರ ಒಪ್ಪಿಗೆ ಪಡೆಯಲಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಿವೆ. ನಂತರ ರಾಜ್ಯಪಾಲರ ಮುಂದೆ ಶಾಸಕರ ಪರೇಡ್ ನಡೆಸುವ ಸಾಧ್ಯತೆ ಇದೆ.

English summary
Karnataka Election Results 2018 : Karnataka BJP election in charge Prakash Javadekar on May 16, 2018 met JDS state president H.D.Kumarasway in Taj West End hotel, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X