ರಾಜರಾಜೇಶ್ವರಿ ನಗರದಲ್ಲಿ ಚುನಾವಣೆ ಮುಂದೂಡಲಾಗುತ್ತದೆಯೇ?

Recommended Video

      Karnataka Elections 2018 : ರಾಜರಾಜೇಶ್ವರಿ ನಗರ ಚುನಾವಣೆ ಮುಂದೂಡಲಾಗುತ್ತಾ?

      ಬೆಂಗಳೂರು, ಮೇ 09: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಮೂರು ದಿನ ಬಾಕಿ ಇರುವಾಗ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಸಿಕ್ಕಿರುವುದು ಸಾಕಷ್ಟು ಅನುಮಾನಗಳುಗೆ ಎಡೆಮಾಡಿಕೊಟ್ಟಿದೆ.

      ನಕಲಿ ಐಡಿ ಸಿಕ್ಕ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಬೇಕೆಂದು ಬಿಜೆಪಿ ನಾಯಕರು ಚುನಾವಣಾ ಆಯೋಗದ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದು ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಹೇಳಿದ್ದಾರೆ.

      ಮೇ 08 ರಂದು ಸಂಜೆ ಆರ್ ಆರ್ ನಗರ ಬಡಾವಣೆಯ ಜಾಲಹಳ್ಳಿಯ ಮನೆಯೊಂದರಲ್ಲಿ ಸುಮಾರು 9746 ನಕಲಿ ವೋಟರ್ ಐಡಿಗಳು ಪತ್ತೆಯಾಗಿದ್ದವು. ಇವನ್ನು ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ನಾಯ್ಡು ಅವರು ದುರುಪಯೋಗ ಪಡಿಸಿಕೊಳ್ಳಲು ಬಳಸುತ್ತಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಅಂದಾಜಿಸಲಾಗಿದೆ. ಆದರೆ ಈ ಫ್ಲ್ಯಾಟ್ ಬಿಜೆಪಿ ಸದಸ್ಯೆಯಾಗಿದ್ದ ಮಂಜುಳಾ ನಂಜಮುರಿಯರಿಗೆ ಸೇರಿದ್ದಾಗಿರುವುದರಿಂದ ಈ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿಲ್ಲ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.

      Karnataka Elections: Will RR Nagar elections be postponed?

      ಒಟ್ಟಿನಲ್ಲಿ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ನಡದೆಸುತ್ತಿದ್ದು, ರಾಷ್ಟ್ರಮಟ್ಟದಲ್ಲಿ ನಕಲಿ ವೋಟರ್ ಐಡಿ ಪ್ರಕರಣ ಸದ್ದು ಮಾಡಿದೆ. ಸದ್ಯಕ್ಕೆ ಇಂದು ಮಧ್ಯಾಹ್ನ 12 ಗಂಟೆಯ ಒಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಮೂವರು ವೀಕ್ಷಕರಿಗೆ ಕೇಂದ್ರ ಚುನಾವಣಾ ಆಯೋಗ ಹೇಳಿದೆ. ನಂತರ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡುವ ಕುರಿತು ಆಯೋಗ ನಿರ್ಧಾರ ಕೈಗೊಳ್ಳಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+