ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಇಟಿ ಪರೀಕ್ಷಾ ದಿನಾಂಕ ಘೋಷಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

|
Google Oneindia Kannada News

ಬೆಂಗಳೂರು, ಜನವರಿ.01: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಕನಸು ಹೊತ್ತಿರುವ ವಿದ್ಯಾರ್ಥಿಗಳೇ ಎಚ್ಚೆತ್ತುಕೊಳ್ಳಿ. ಇನ್ನು, ನಾಲ್ಕು ತಿಂಗಳಿನಲ್ಲಿ ಸಿಇಟಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಬಗ್ಗೆ ದಿನಾಂಕವನ್ನು ನಿಗದಿಗೊಳಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಏಪ್ರಿಲ್.22 ಹಾಗೂ ಏಪ್ರಿಲ್.23ರಂದು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಏಪ್ರಿಲ್ 22ರ ಬೆಳಗ್ಗೆ 10.30 ರಿಂದ 11.50ರವರೆಗೂ ಜೀವಶಾಸ್ತ್ರ ಮಧ್ಯಾಹ್ನ 2.30 ರಿಂದ 3.50ರವರೆಗೂ ಗಣಿತ ವಿಷಯಗಳಿಗೆ ಪ್ರವೇಶ ಪರೀಕ್ಷೆ ನಡೆಯಲಿದೆ.

ಸಿಇಟಿ ಪ್ರವೇಶ ಶುಲ್ಕ ಪಾವತಿ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ
ಇನ್ನು, ಏಪ್ರಿಲ್.23ರಂದು ಬೆಳಗ್ಗೆ 10.30 ರಿಂದ 11.50ರವರೆಗೂ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೂ ರಾಸಾಯನಿಕ ಶಾಸ್ತ್ರದ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಮರುದಿನ ಎಂದರೆ ಏಪ್ರಿಲ್.24ರಂದು ಹೊರನಾಡು ಹಾಗೂ ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಯಲಿದೆ.

Karnataka Examination Authority Announced CET Exam TimeTable

ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ, ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸ್ ಗಳ ಪ್ರವೇಶಕ್ಕಾಗಿ 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ( Common Entrance Test ) ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. 60 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅರ್ಹರಾಗಲಿದ್ದಾರೆ.
ಇನ್ನು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ಕೋರಲಾಗಿದೆ.

English summary
Karnataka Examination Authority Announced CET Exam TimeTable.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X